LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಡಿಸೆಂಬರ್ 26 ರಿಂದ ರೈಲು ಪ್ರಯಾಣ ದರ ಹೆಚ್ಚಳ

ನವದೆಹಲಿ : ಡಿ.26 ರಿಂದ ಭಾರತೀಯ ರೈಲ್ವೆಯು ತನ್ನ ಪ್ರಯಾಣ ದರಗಳಲ್ಲಿ ಬದಲಾವಣೆ ತರುತ್ತಿದ್ದು, ದೀರ್ಘಶ್ರೇಣಿಯ ಪ್ರಯಾಣ ಆಧರಿಸಿ ಕನಿಷ್ಠ ದರ ಹೆಚ್ಚಿಸುತ್ತಿದೆ. ಆದರೆ ಉಪನಗರ ಮತ್ತು ಕಡಿಮೆ-ದೂರ ಪ್ರಯಾಣ ದರಗಳಲ್ಲಿ ಯಾವುದೇ ವ್ಯತ್ಯಾಸ ಇರುವುದಿಲ್ಲ ಎಂದು ಮಾಹಿತಿ ನೀಡಿದೆ.

ನಾನ್ ಎಸಿ ಕೋಚ್‌ನಲ್ಲಿ ಪ್ರತಿ 500 ಕಿ.ಮೀಗೆ 10 ರೂ. ಹೆಚ್ಚುವರಿ ಆಗಲಿದೆ. 215 ಕಿಮೀ ವರೆಗಿನ ಸಾಮಾನ್ಯ ವರ್ಗದ ಪ್ರಯಾಣಿಕರಿಗೆ ಟಿಕೆಟ್ ದರದಲ್ಲಿ ಯಾವುದೇ ಹೆಚ್ಚಳ ಇರುವುದಿಲ್ಲ. ಸಾಮಾನ್ಯ ವರ್ಗದಲ್ಲಿ ಪ್ರತಿ ಕಿಲೋಮೀಟರ್‌ಗೆ 1 ಪೈಸೆ ಹೆಚ್ಚಳವಾಗಲಿದೆ. ಮೇಲ್ ಮತ್ತು ಎಕ್ಸ್‌ಪ್ರೆಸ್ ರೈಲುಗಳಲ್ಲಿ, ನಾನ್-ಎಸಿ ಮತ್ತು ಎಸಿ ಎರಡರಲ್ಲೂ, ಪ್ರತಿ ಕಿಲೋಮೀಟರ್‌ಗೆ 2 ಪೈಸೆ ಹೆಚ್ಚಳವಾಗಲಿದೆ. ಈ ಬದಲಾವಣೆಯಿಂದ ರೈಲ್ವೆಗೆ ಸುಮಾರು 600 ಕೋಟಿ ರೂಪಾಯಿಗಳಷ್ಟು ಆದಾಯ ಬರುವ ನಿರೀಕ್ಷೆಯಿದೆ. ಇನ್ನು ಉಪನಗರ ರೈಲು ಸೇವೆಗಳು ಅಥವಾ ಮಾಸಿಕ ಟಿಕೆಟ್‌ಗಳ ದರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ದರ ಪರಿಷ್ಕರಣೆಯಿಂದ ಸುಮಾರು 600 ಕೋಟಿ ರೂಪಾಯಿಗಳಷ್ಟು ಹೆಚ್ಚುವರಿ ಆದಾಯವನ್ನು ಭಾರತೀಯ ರೈಲ್ವೆ ನಿರೀಕ್ಷಿಸಿದೆ. ಕಾರ್ಯಾಚರಣಾ ವೆಚ್ಚವನ್ನು ನಿರ್ವಹಿಸಲು ಮತ್ತು ಕಡಿಮೆ ದೂರದ ಪ್ರಯಾಣಿಕರಿಗೆ ರೈಲು ಪ್ರಯಾಣವನ್ನು ಕೈಗೆಟುಕುವಂತೆ ಇರಿಸಿಕೊಳ್ಳಲು ಈ ದರ ಹೊಂದಾಣಿಕೆ ಮಾಡಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಕಾರ್ಯಾಚರಣೆ ವೆಚ್ಚವು ಏರಿಕೆಯಾಗಿರುವುದನ್ನ ರೈಲ್ವೆ ಇಲಾಖೆ ಗಮನಿಸಿದೆ. ಅಲ್ಲದೇ ಮಾನವ ಸಂಪನ್ಮೂಲ ವೆಚ್ಚ 1.15 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದ್ದು, ಪಿಂಚಣಿಗೆ 60,000 ಕೋಟಿ ರೂ. ಅಗತ್ಯವಿದೆ. 2024-25ರಲ್ಲಿ ಕಾರ್ಯಾಚರಣೆಯ ಒಟ್ಟು ವೆಚ್ಚ 2.63 ಲಕ್ಷ ಕೋಟಿ ರೂ. ನಷ್ಟಾಗಿದೆ. ಹಾಗಾಗಿ ರೈಲುಜಾಲದ ವಿಸ್ತರಣೆ ಮತ್ತು ಸುರಕ್ಷತಾ ದೃಷ್ಟಿಯಿಂದ ಕನಿಷ್ಠ ದರ ಏರಿಕೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026