https://youtu.be/Ss5wA7yb-v0?si=4Fws3yBs7aTt3NBI
ರಾಯಚೂರು ತಾಲೂಕಿನ ಯರಗೇರಾ ಗ್ರಾಮದ ಬಳಿ ಸಾರಿಗೆ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದೆ. ರಾಯಚೂರಿನಿಂದ ಕರ್ನೂಲ್ ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್, ಮುಂದೆ ಸಾಗುತ್ತಿದ್ದ ಟ್ರ್ಯಾಕ್ಟರ್ ಅನ್ನು ಓವರ್‌ಟೇಕ್ ಮಾಡಲು ಯತ್ನಿಸುವ ವೇಳೆ ಡಿಕ್ಕಿ ಹೊಡೆದಿದೆ. ಇದೇ ಸಮಯದಲ್ಲಿ ಎದುರಿನಿಂದ ಲಾರಿ ಬರುತ್ತಿದ್ದರಿಂದ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡು ಟ್ರ್ಯಾಕ್ಟರ್ ಟ್ರಾಲಿಗೆ ಗುದ್ದಿದ ಘಟನೆ ನಡೆದಿದೆ.
ಯರಗೇರಾ ಶ್ರೀ ಮಹರ್ಷಿ ವಾಲ್ಮೀಕಿ ರಾಯಚೂರು ವಿಶ್ವವಿದ್ಯಾಲಯದ ಘಟನೆ ಜರುಗಿದ್ದು. ಟ್ರಾಲಿಯಲ್ಲಿ ಪ್ರಯಾಣಿಸುತ್ತಿದ್ದ ಐದು ಕಾರ್ಮಿಕರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಮೂವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಯರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.