ಸಾರಿಗೆ ಬಸ್ ಭೀಕರ ಅಪಘಾತ.! 9 ಪ್ರಯಾಣಿಕರು ಸ್ಥಳದಲ್ಲೇ ಸಾವು.!
ಗೊಂಡಿಯಾ: ಮಹಾರಾಷ್ಟ್ರ ಸಾರಿಗೆ ಬಸ್ ಭೀಕರ ಅಪಘಾತಕ್ಕೀಡಾಗಿದ್ದು 9 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೊಂಡಿಯಾ ಜಿಲ್ಲೆಯಲ್ಲಿ ನಡೆದಿದೆ.
ಭಂಡಾರದಿಂದ 36 ಪ್ರಯಾಣಿಕರನ್ನು ಹೊತ್ತು ಗೊಂಡಿಯಾದತ್ತ ಸಾಗುತ್ತಿದ್ದ ಬಸ್, ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾಗಿದೆ. ಅಪಘಾತದಲ್ಲಿ 9 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಸದಕರ್ಜುನಿಯ ದವ್ವು ಗ್ರಾಮದ ಬಳಿ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಬಗ್ಗೆ ತೀವ್ರ ಸಂತಾಪ ಸೂಚಿಸಿರುವ ಹಂಗಾಮಿ ಸಿಎಂ ಏಕನಾಥ್ ಶಿಂಧೆ, ಸಂತ್ರಸ್ತರ ರಕ್ಷಣಾ ಕಾರ್ಯ ಹಾಗೂ ಸಹಾಯಕ್ಕಾಗಿ ತಕ್ಷಣ 10 ಲಕ್ಷ ರೂ ಬಿಡುಗಡೆ ಮಾಡುವಂತೆ ಸಾರಿಗೆ ಇಲಾಖೆಗೆ ಸೂಚಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.