LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸರ್ಕಾರದ ವಿರುದ್ಧ ಸಾರಿಗೆ ನೌಕರರ ಮುಷ್ಕರ - ಹಲವು ಕಡೆ ಬಸ್‌ ಬಂದ್‌



ಬೆಂಗಳೂರು : ವೇತನ ಹಿಂಬಾಕಿ, ಸಂಬಳ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಆಗಸ್ಟ್ 5 ರಿಂದ (ಇಂದಿನಿಂದ) ಅನಿರ್ದಿಷ್ಠಾವಧಿ ಮುಷ್ಕರಕ್ಕೆ ಬೇಡಿಕೆ ಇಡಲಾಗಿದೆ.



1800 ಕೋಟಿ ಹಿಂಬಾಕಿ, ಕೋಟ್ಯಾಂತರ ರುಪಾಯಿ ಪಿಎಫ್ ಬಾಕಿ,ವೇತನ ಹೆಚ್ಚಳ ಸೇರಿದಂತೆ ಹತ್ತಾರು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿದೆ. ಆದರೆ ಹಿಂಬಾಕಿ ಕೊಡಲು ಸರ್ಕಾರ ಒಪ್ಪದಿದ್ದ ಕಾರಣ, ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬಂದಿಲ್ಲ.ವೇತನ ಹಿಂಬಾಕಿ, ವೇತನ ಹೆಚ್ಚಳಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರು ಸರ್ಕಾರದ ಜೊತೆ ನಡೆಸಿದ ಸಂಧಾನ ಸಭೆ ವಿಫಲವಾಗಿದೆ. ಇದರ ನಡುವೆ ನೌಕರರ ಮುಷ್ಕರವನ್ನು 1 ದಿನ ತಡೆ ಹಿಡಿಯುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಈ ಎಲ್ಲ ಬೆಳವಣಿಗೆಯ ಹೊರತಾಗಿಯೂ ತಮ್ಮ ನಿರ್ಧಾರದಿಂದ ಹಿಂದೆ ಸರಿಯದ ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಇಂದಿನಿಂದ (ಆ.5) ಬೆಳಗ್ಗೆಯಿಂದಲೇ ಮುಷ್ಕರಕ್ಕಿಳಿದಿದ್ದಾರೆ. ಇದರಿಂದ ರಾಜ್ಯಾದ್ಯಂತ ಬಸ್‌ಗಳ ಸೇವೆಯಲ್ಲಿ ವ್ಯತ್ಯಯವಾಗಿದೆ.ಬೆಳಗ್ಗೆ 6 ಗಂಟೆಯಿಂದಲೇ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದು, ನಾಲ್ಕು ನಿಗಮಗಳ ಬಸ್‌ಗಳ ಸಂಚಾರ ಸ್ತಬ್ಧಗೊಂಡಿವೆ. ಬೆಂಗಳೂರು, ಮೈಸೂರು, ಕಲಬುರಗಿ, ದಾವಣಗೆರೆ, ಹಾಸನ, ಬೆಳಗಾವಿ, ಚಿಕ್ಕಬಳ್ಳಾಪುರ, ಹಾವೇರಿ ಸೇರಿದಂಗೆ ರಾಜ್ಯಾದ್ಯಂತ ಜಿಲ್ಲೆಗಳಲ್ಲಿ ನೌಕರರು ಕೆಲಸಕ್ಕೆ ಹಾಜರಾಗದೇ ಪ್ರತಿಭಟನೆಗೆ ಧುಮುಕಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026