Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ಜೋಳದ ಚೀಲ ಹೊತ್ತು ಅಯೋಧ್ಯೆ ಪಾದಯಾತ್ರೆ

ಕಲಬುರಗಿ – ಗೋಹತ್ಯೆ ನಿಷೇಧವಾಗಬೇಕು ಹಾಗೂ ಗೋಆಧಾರಿತ ಕೃಷಿ ಮರುಾರಂಭವಾಗಬೇಕೆಂಬ ಹರಕೆಯೊಂದಿಗೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಬಳಗಾನೂರ ಗ್ರಾಮದ 27 ವರ್ಷದ ಯುವಕ ಕೇದಾರನಾಥ ಕುಂಬಾರ ಕೈಗೊಂಡಿದ್ದ ಪಾದಯಾತ್ರೆ ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಮಾಡುವುದರೊಂದಿಗೆ ಸಂಪನ್ನಗೊಂಡಿದೆ.

ಜನವರಿ 3ರಂದು 55 ಕೆ.ಜಿ. ತೂಕದ ಜೋಳದ ಚೀಲ ಹೊತ್ತು ಪಾದಯಾತ್ರೆ ಆರಂಭಿಸಿದ ಅವರು ಸುಮಾರು 1450 ಕಿ.ಮೀ ದೂರವನ್ನು ನಡೆದು 40 ದಿನಗಳಲ್ಲಿ ಅಯೋಧ್ಯೆ ತಲುಪಿದರು. ಶ್ರೀರಾಮ ಜನ್ಮಭೂಮಿ ದೇವಸ್ಥಾನದಲ್ಲಿ ದರ್ಶನ ಪಡೆದ ಬಳಿಕ ಹರಕೆಯಂತೆ ಜೋಳದ ಮೂಟೆಯನ್ನು ದೇವಸ್ಥಾನಕ್ಕೆ ಸಮರ್ಪಿಸಿದರು.

ಅಯೋಧ್ಯೆಯಲ್ಲಿ ವಿಶ್ವ ಹಿಂದೂ ಪರಿಷತ್ತಿನ ಕೇಂದ್ರೀಯ ಕಾರ್ಯದರ್ಶಿ ಗೋಪಾಲ ನಾಗರಕಟ್ಟಿ ಸ್ವಾಗತ ಕೋರಿದ್ದು, ಬಳಿಕ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತರಾಯ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಪಾದಯಾತ್ರೆಯಲ್ಲಿ ವಿವೇಕಾನಂದ ಕುಂಬಾರ, ರೇವಣಸಿದ್ದ ಕೊಪ್ಪ ಹಾಗೂ ನೂರಸಾಬ ನದಾಫ್ ಸಹ ಹೆಜ್ಜೆ ಹಾಕಿದ್ದು ವಿಶೇಷ. ಅಗತ್ಯ ವಸ್ತುಗಳೊಂದಿಗೆ ಅರವಿಂದ ಪುರದಾಳ ದ್ವಿಚಕ್ರ ವಾಹನದಲ್ಲಿ ಸಹಾಯ ಮಾಡಿದರು.

ಬಡ ಕೂಲಿ ಕಾರ್ಮಿಕನಾಗಿರುವ ಕೇದಾರನಾಥ ಕುಂಬಾರ ಇದಕ್ಕೂ ಮೊದಲು ಎರಡು ಬಾರಿ ಶ್ರೀಶೈಲಕ್ಕೆ 61 ಕೆ.ಜಿ. ಮೂಟೆಯೊಂದಿಗೆ ಪಾದಯಾತ್ರೆ ನಡೆಸಿದ್ದು, ಹುಲಿಜಂತಿಗೂ ಎರಡು ಬಾರಿ ತೆರಳಿರುವುದು ಗಮನಾರ್ಹವಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಗನ ಕೊಲೆಯ ಸೇಡು: ರಣಚಂಡಿಯಾದ ಹೆತ್ತವಳು! ರಕ್ತಕ್ಕೆ ರಕ್ತವೆಂದು 12 ವರ್ಷಗಳ ಬಳಿಕ ಮುಹೂರ್ತ ಇಟ್ಟ ತಾಯಿ!₹281.48 ಕೋಟಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ; ಸರ್ಕಾರದ ತನಿಖೆಗೆ ಆಗ್ರಹಫ್ರೀಡಂ ಹಬ್ಬದಲ್ಲಿ ‘ಮೋದಿ ಮೋದಿ’ ಘೋಷಣೆ; ಡಿಕೆಶಿ ಮಾತಿನಲ್ಲೇ ಜನರಿಗೆ ಟಾಂಗ್ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ ದಂಡಿನ ಆಯ್ಕೆ ಮಾಡುವಂತೆ ಸಿದ್ದು ತುಮಕೂರು ಆಗ್ರಹನಕಲಿ ಎನ್‌ಕೌಂಟರ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ: ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿಹಳಿಸಗರ ಸರ್ಕಾರಿ ಶಾಲೆಯ ದುಸ್ಥಿತಿ: ಪುಟಾಣಿಗಳ ಜೀವದೊಂದಿಗೆ ಚೆಲ್ಲಾಟ; ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪದುಗೃಹ ಸಚಿವರ ಘೋಷಣೆಗೆ ಸವಾಲೇ? ಶಹಾಪುರದಲ್ಲಿ ಮತ್ತೆ ಜೋರಾದ ಅಕ್ರಮ ಮರಳು ಸಾಗಾಟಒಂದು ವಾರದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿ: ಇಲ್ಲದಿದ್ದರೆ ಬೃಹತ್ ಪ್ರತಿಭಟನೆ – ಕರ್ನಾಟಕ ಪ್ರಾಂತ ರೈತ ಸಂಘ ಎಚ್ಚರಿಕೆಕೆನಾಲ್ ಒಡೆದು ಸಾವಿರಾರು ಲೀಟರ್ ನೀರು ಪೋಲು: ರೈತರ ಜಮೀನು ಜಲಾವೃತ, ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪದ ಆರೋಪನಾರಾಯಣಪುರ ಬಲದಂಡೆ ಕಾಲುವೆ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ: ತಕ್ಷಣ ನಿರ್ವಹಣೆಗೆ ರೈತ ಸಂಘ ಆಗ್ರಹ