Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಭೈರಪ್ಪ ಸ್ಮರಣೆ : ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ನಮನ ಕಾರ್ಯಕ್ರಮ

ಬೆಳಗಾವಿ: ಕೆ.ಎಲ್.ಎಸ್ ಸಂಸ್ಥೆಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ, ಖ್ಯಾತ ಕನ್ನಡ ಕಾದಂಬರಿಕಾರ, ಈಚೆಗೆ ಅಗಲಿದ ಎಸ್. ಎಲ್. ಭೈರಪ್ಪ ಅವರಿಗೆ ನಮನ ಸಲ್ಲಿಸಲು “ನುಡಿ ನಮನ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.



ಸಾಹಿತಿ ಡಾ. ರಾಮಕೃಷ್ಣ ಮರಾಠೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಎಸ್. ಎಲ್. ಭೈರಪ್ಪ ಅವರು ಕೇವಲ ಕರ್ನಾಟಕದ ಕಾದಂಬರಿಕಾರರಾಗಿರಲಿಲ್ಲ, ದೇಶದ ಮಹೋನ್ನತ ಕಾದಂಬರಿಕಾರರಾಗಿದ್ದರು ಎಂದು ಹೇಳಿದರು.

ಭೈರಪ್ಪ ಅವರ ಜೀವನಯಾತ್ರೆಯಲ್ಲಿ ಮಾರ್ಗದರ್ಶಕರಾದ ಹಾಗೂ ಅವರ ವ್ಯಕ್ತಿತ್ವವನ್ನು ರೂಪಿಸಲು ಪ್ರೇರಣೆಯಾದವರ ಪಾತ್ರವನ್ನು ಅವರು ವಿಶೇಷವಾಗಿ ಉಲ್ಲೇಖಿಸಿದರು. ಬಡತನವು ಕೆಲವೊಮ್ಮೆ ಜೀವನದಲ್ಲಿ ಶಕ್ತಿ ಮತ್ತು ಸ್ವಭಾವವನ್ನು ರೂಪಿಸುವಂತಾಗಬಹುದು ಎಂಬುದನ್ನು ವಿವರಿಸಿದರು.

ಪ್ರಾಂಶುಪಾಲ ಡಾ. ಎಚ್. ಎ. ಹವಾಲ್ದಾರ ಅಧ್ಯಕ್ಷತೆ ವಹಿಸಿ, ಭೈರಪ್ಪ ಅವರ ಕಾದಂಬರಿಯನ್ನೂ ಓದಲು, ಅದರ ಮಹತ್ವವನ್ನು ಅರಿತುಕೊಳ್ಳಲು ಪ್ರೇರೇಪಿಸಿದರು. ವಿದ್ಯಾರ್ಥಿಗಳಾದ ಫಣಿ ರಾಘವೇಂದ್ರ ಮತ್ತು ಸಹನಾ ವಾಲಿ ಅವರು ಎಸ್. ಎಲ್. ಭೈರಪ್ಪ ಅವರ ಜೀವನ ಮತ್ತು ಸಾಧನೆಗಳ ಕುರಿತು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ಭೈರಪ್ಪ ಅವರ ಕೃತಿಗಳು ಮತ್ತು ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆಗಳನ್ನು ಪ್ರತಿಬಿಂಬಿಸುವ ವಿಶಿಷ್ಟ ಪುಸ್ತಕ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಪ್ರೊ. ಎಂ. ಎಸ್. ಕುಲಕರ್ಣಿ ಹಾಗೂ ಕನ್ನಡ ಬಳಗದ ಅಧ್ಯಕ್ಷೆ ಪ್ರೊ. ಮೋನಿಶಾ ಸ್ವಾಮಿ ಅವರು ಆಯೋಜಿಸಿದ್ದರು. ಸಾಹಿತ್ಯ ಕ್ಲಬ್‌ನ ಕಾರ್ಯದರ್ಶಿ ಓಂಕಾರ ಪಾಟೀಲ ವಂದಿಸಿದರು. ಎಲ್ಲಾ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಈ ಸಂದರ್ಭದ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ