ಚೆನ್ನೈ: ಇಂದು (ಮೇ 4) ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಫಲಿತಾಂಶ ಹೊರಬೀಳಲಿದೆ. ಇದೇ ಸಮಯದಲ್ಲಿ ನಟಿ Trisha Krishnan ತಿರುಪತಿಯ Tirumala Venkateswara Templeಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇಂದೇ ತಮ್ಮ 43ನೇ ಹುಟ್ಟುಹಬ್ಬವನ್ನು ಆಚರಿಸುತ್ತಿರುವ ತ್ರಿಷಾ, ಈ ಹಿನ್ನೆಲೆ ತಿಮ್ಮಪ್ಪನ ಸನ್ನಿಧಿಯಲ್ಲಿ ವಿಶೇಷ ಪೂಜೆ ಮಾಡಿದ್ದಾರೆ. ಇದೇ ವೇಳೆ Tamil Nadu ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿರುವುದರಿಂದ, Vijay ಗೆಲುವಿಗಾಗಿ ಅವರು ಪ್ರಾರ್ಥನೆ ಸಲ್ಲಿಸಿದ್ದಾರೆಯೆಂಬ ಅಭಿಮಾನಿಗಳ ಮಾತುಗಳು ಕೇಳಿಬರುತ್ತಿವೆ. ನಟಿಯ ದೇವಸ್ಥಾನ ಭೇಟಿ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಫಲಿತಾಂಶದ ದಿನವೇ ಈ ಭೇಟಿ ನಡೆದಿರುವುದು ಚರ್ಚೆಗೆ ಗ್ರಾಸವಾಗಿದೆ. ಇದಕ್ಕೂ ಮೊದಲು ಮಾರ್ಚ್‌ನಲ್ಲಿ ಚೆನ್ನೈನಲ್ಲಿ ನಡೆದ ವಿವಾಹ ಆರತಕ್ಷತೆಯಲ್ಲಿ ವಿಜಯ್ ಹಾಗೂ ತ್ರಿಷಾ ಒಂದೇ ತರಹದ ಉಡುಗೆಯಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೇ 2025ರ ಡಿಸೆಂಬರ್‌ನಲ್ಲಿ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು..