Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

Fly-91 ವಿಮಾನಕ್ಕೆ ಮತ್ತೆ ತೊಂದರೆ; ಲ್ಯಾಂಡಿಂಗ್ ವಿಳಂಬದಿಂದ ಪ್ರಯಾಣಿಕರ ಸಂಕಷ್ಟ

ಹುಬ್ಬಳ್ಳಿ: ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದ ಫ್ಲೈ-91 ವಿಮಾನದಲ್ಲಿ ಮತ್ತೊಮ್ಮೆ ಲ್ಯಾಂಡಿಂಗ್ ಸಮಸ್ಯೆ ಉಂಟಾಗಿ, 2 ಗಂಟೆಗಳಿಗಿಂತ ಹೆಚ್ಚು ಕಾಲ ಗಗನದಲ್ಲೇ ಸುತ್ತಾಡಿದ ಘಟನೆ ನಡೆದಿದೆ. ಕೇವಲ 5 ದಿನಗಳ ಅಂತರದಲ್ಲಿ ಇದೇ ರೀತಿಯ ಎರಡನೇ ಘಟನೆ ವರದಿಯಾಗಿದೆ. ಇತ್ತೀಚೆಗೆ ಹೈದರಾಬಾದ್‌ನಿಂದ ಹೊರಟಿದ್ದ ಫ್ಲೈ91 ವಿಮಾನವೂ ಹವಾಮಾನ ವೈಪರಿತ್ಯದ ಕಾರಣದಿಂದ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿಯಲು ಸಾಧ್ಯವಾಗದೇ ಮೂರು ಗಂಟೆಗಳಿಗೂ ಹೆಚ್ಚು ಕಾಲ ಗಗನದಲ್ಲೇ ತಿರುಗಾಡಿತ್ತು. ಇದೀಗ ಬೆಂಗಳೂರಿನಿಂದ ಬಂದ ವಿಮಾನದಲ್ಲೂ ಅದೇ ರೀತಿಯ ತೊಂದರೆ ಮರುಕಳಿಸಿದೆ.

IC3412 ಸಂಖ್ಯೆಯ ಈ ವಿಮಾನ ಮಂಗಳವಾರ ಸಂಜೆ 6 ಗಂಟೆಗೆ ಬೆಂಗಳೂರಿನಿಂದ ಹೊರಟಿದ್ದು, 6:50ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿತ್ತು. ವಿಮಾನ ಸಮಯಕ್ಕೆ ತಲುಪಿದರೂ, ಲ್ಯಾಂಡಿಂಗ್ ವೇಳೆ ತಾಂತ್ರಿಕ ಅಡಚಣೆ ಎದುರಾದ ಹಿನ್ನೆಲೆಯಲ್ಲಿ ಸುಮಾರು 2 ಗಂಟೆಗಳ ಕಾಲ ಗಗನದಲ್ಲೇ ಸುತ್ತಾಡಬೇಕಾಯಿತು. ಕೊನೆಗೆ ರಾತ್ರಿ 9:15ಕ್ಕೆ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿತು.

ಈ ಘಟನೆ ಬಳಿಕ ಫ್ಲೈ91 ವಿಮಾನಗಳಿಗೆ ಮಾತ್ರ ಪದೇ ಪದೇ ಇಂತಹ ಸಮಸ್ಯೆಗಳು ಏಕೆ ಎದುರಾಗುತ್ತಿವೆ ಎಂಬ ಪ್ರಶ್ನೆ ತಲೆದೋರಿದೆ. ಹೈದರಾಬಾದ್ ವಿಮಾನ ಪ್ರಕರಣದಲ್ಲಿ ಹವಾಮಾನವನ್ನು ಕಾರಣವಾಗಿ ಹೇಳಲಾಗಿತ್ತು. ಆದರೆ ನಿನ್ನೆ ಅದೇ ಸಮಯದಲ್ಲಿ ಇತರ ವಿಮಾನಗಳು ಸುಗಮವಾಗಿ ಟೇಕಾಫ್ ಮತ್ತು ಲ್ಯಾಂಡಿಂಗ್ ನಡೆಸಿದ್ದರೂ, ಫ್ಲೈ91ಗೆ ಮಾತ್ರ ತೊಂದರೆ ಉಂಟಾಗಿರುವುದು ಅನುಮಾನಗಳಿಗೆ ಕಾರಣವಾಗಿದೆ. ಇದರಿಂದ ಪ್ರಯಾಣಿಕರ ಅಸಮಾಧಾನ ಹೆಚ್ಚಾಗಿದೆ.

ಲ್ಯಾಂಡಿಂಗ್ ವಿಳಂಬದಿಂದಾಗಿ ಸುಮಾರು 2 ಗಂಟೆಗಳ ಕಾಲ ಗಗನದಲ್ಲೇ ಸುತ್ತಾಡಿದ ವಿಮಾನದಲ್ಲಿದ್ದ ಪ್ರಯಾಣಿಕರು ತೀವ್ರ ಆತಂಕಕ್ಕೆ ಒಳಗಾದರು. ಅನಿಶ್ಚಿತತೆಯ ನಡುವೆ ಜೀವಭಯದಿಂದ ದೇವರ ಮೊರೆ ಹೋಗಿ, ಭಯಭೀತರಾಗಿ ಕುಳಿತಿದ್ದ ದೃಶ್ಯ ಕಂಡುಬಂತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ