LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ'- ಸೇನಾ ಹೇಳಿಕೆಗೆ ರಾಹುಲ್‌ ಗಾಂಧಿಗೆ ಸುಪ್ರೀಂ ಛೀಮಾರಿ

ನವದೆಹಲಿ :ನಿಜವಾದ ಭಾರತನೀಯನಾದವನು ಈ ರೀತಿ ಮಾತನಾಡುವುದಿಲ್ಲ ಎಂದು ಭಾರತೀಯ ಸೇನೆ ಬಗ್ಗೆ ಸಂಸದ, ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗೆ ಸುಪ್ರೀಂಕೋರ್ಟ್​ ಛೀಮಾರಿ ಹಾಕಿದೆ.

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ವಿರುದ್ಧ ಮಾಡಿದ ಹೇಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಸೋಮವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಲಯವು ರಾಹುಲ್ ಗಾಂಧಿಯನ್ನು ಖಂಡಿಸಿ, ಚೀನಾ 2000 ಕಿಲೋಮೀಟರ್‌ಗಳಷ್ಟು ಭಾರತದ ಭೂಮಿಯನ್ನು ವಶಪಡಿಸಿಕೊಂಡಿದೆ ಎಂದು ನಿಮಗೆ ಹೇಗೆ ಗೊತ್ತು? ನೀವು ನಿಜವಾದ ಭಾರತೀಯರಾಗಿದ್ದರೆ, ನೀವು ಹೀಗೆ ಹೇಳುತ್ತಿರಲಿಲ್ಲ ಎಂದು ಹೇಳಿದೆ.

ವಿಚಾರಣೆಯ ಸಮಯದಲ್ಲಿ, ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರ ಪೀಠವು ರಾಹುಲ್ ಗಾಂಧಿಯವರ ಹೇಳಿಕೆಗಳಿಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿತು. ರಾಹುಲ್ ಗಾಂಧಿ ಪರವಾಗಿ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ವಿರೋಧ ಪಕ್ಷದ ನಾಯಕರೊಬ್ಬರು ಸಮಸ್ಯೆಗಳನ್ನು ಎತ್ತಲು ಸಾಧ್ಯವಾಗದಿದ್ದರೆ ಅದು ದುರದೃಷ್ಟಕರ ಪರಿಸ್ಥಿತಿ ಎಂದು ಆರಂಭದಲ್ಲಿ ವಾದಿಸಿದರು.

ಇದಕ್ಕೆ ನ್ಯಾಯಮೂರ್ತಿ ದತ್ತಾ ಪ್ರತಿಕ್ರಿಯಿಸಿ, ನೀವು ವಿರೋಧ ಪಕ್ಷದ ನಾಯಕರು, ಸಂಸತ್ತಿನಲ್ಲಿ ಏನಾದರೂ ಹೇಳಿ, ನೀವು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಏಕೆ ಹೇಳುತ್ತೀರಿ ಎಂದು ಪ್ರಶ್ನಿಸಿದ್ದಾರೆ.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026