LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬ್ರಿಕ್ಸ್​ ರಾಷ್ಟ್ರಗಳಿಗೆ ಸುಂಕದ ಎಚ್ಚರಿಕೆ ನೀಡಿದ ಟ್ರಂಪ್

ಬ್ರೆಜಿಲ್ : ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರೂತ್ ಸೋಶಿಯಲ್‌ನಲ್ಲಿ ಭಾನುವಾರ ಪೋಸ್ಟ್ ಮಾಡಿದ ಉಗ್ರ ಸಂದೇಶದಲ್ಲಿ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಬ್ರಿಕ್ಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ದೇಶಗಳಿಗೆ ಕಠಿಣ ಎಚ್ಚರಿಕೆ ನೀಡಿ, ಅವು ತೀವ್ರ ಆರ್ಥಿಕ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಘೋಷಿಸಿದ್ದಾರೆ.

"ಬ್ರಿಕ್ಸ್‌ನ ಅಮೆರಿಕ ವಿರೋಧಿ ನೀತಿಗಳನ್ನು ಬೆಂಬಲಿಸುವ ಯಾವುದೇ ದೇಶಕ್ಕೆ ಹೆಚ್ಚುವರಿಯಾಗಿ 10% ಸುಂಕ ವಿಧಿಸಲಾಗುತ್ತದೆ. ಈ ನೀತಿಗೆ ಯಾವುದೇ ವಿನಾಯಿತಿ ಇರುವುದಿಲ್ಲ" ಎಂದು ಟ್ರಂಪ್ ಬರೆದಿದ್ದಾರೆ. ಟ್ರಂಪ್ ಈ ಹೇಳಿಕೆಯಲ್ಲಿ ಅಮೆರಿಕ ವಿರೋಧಿ ನೀತಿಗಳು ಎಂದರೆ ಏನೆಲ್ಲಾ ಅಡಕವಾಗಿರುತ್ತದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ. ಡೊನಾಲ್ಡ್​ ಟ್ರಂಪ್ ಹೇಳಿಕೆ ನೀಡುವ ಒಂದು ದಿನದ ಮೊದಲು ಬ್ರಿಕ್ಸ್​(ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ)ನಾಯಕರು ಅಮೆರಿಕದ ಅನಿಯಂತ್ರಿತ ಸುಂಕ ನೀತಿಯನ್ನು ಟೀಕಿಸಿದ್ದರು. ಮಧ್ಯಪ್ರಾಚ್ಯದಲ್ಲಿ ಇಸ್ರೇಲ್‌ನ ಮಿಲಿಟರಿ ಕ್ರಮವನ್ನು ಟೀಕಿಸಲಾಯಿತು.

ಬ್ರೆಜಿಲ್​​ನಲ್ಲಿ ನಡೆದ ಬ್ರಿಕ್ಸ್​ ಶೃಂಗಸಭೆ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್‌ ಬ್ರಿಕ್ಸ್​ ದೇಶಗಳಿಗೆ ದೊಡ್ಡ ಎಚ್ಚರಿಕೆ ನೀಡಿದ್ದಾರೆ. ಶೃಂಗಸಭೆಯ ಮೊದಲು, ಬ್ರಿಕ್ಸ್ ದೇಶಗಳು ಅಮೆರಿಕದ ಮೇಲೆ ನೇರವಾಗಿ ದಾಳಿ ಮಾಡಲಿಲ್ಲ ಆದರೆ ಹೆಚ್ಚುತ್ತಿರುವ ಸುಂಕವು ಜಾಗತಿಕ ವ್ಯಾಪಾರದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಮತ್ತು ಅದು WTO ನಿಯಮಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದರು.

"TARIFF ಪತ್ರಗಳು, ಮತ್ತು/ಅಥವಾ ಡೀಲ್‌ಗಳು" ಎಂದು ಕರೆಯಲ್ಪಡುವ ಅಧಿಕೃತ US ಸುಂಕ ಸಂವಹನಗಳು ಜುಲೈ 7, ಸೋಮವಾರ ಪೂರ್ವ ಸಮಯ ಮಧ್ಯಾಹ್ನ 12:00 ಗಂಟೆಗೆ ಪ್ರಾರಂಭವಾಗುತ್ತವೆ ಎಂದು ಟ್ರಂಪ್ ತಮ್ಮ ಮುಂದಿನ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಯಾವ ದೇಶಗಳು ಈ ಪತ್ರಗಳನ್ನು ಸ್ವೀಕರಿಸುತ್ತವೆ ಅಥವಾ ಅವು ಯಾವ ನಿಯಮಗಳನ್ನು ಒಳಗೊಂಡಿರಬಹುದು ಎಂಬುದನ್ನು ಅವರು ನಿರ್ದಿಷ್ಟಪಡಿಸಲಿಲ್ಲ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026