LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರತಕ್ಕೆ ಅತ್ಯಾಧುನಿಕ F-35 ಯುದ್ಧ ವಿಮಾನ ಮಾರಾಟ ಮಾಡಲು ಮುಂದಾದ ಟ್ರಂಪ್

ವಾಷಿಂಗ್ಟನ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಹಾಗೂ ಭಾರತದ ನಡುವೆ ವ್ಯಾಪಾರವನ್ನು ಹೆಚ್ಚಿಸುವುದಾಗಿ ಪ್ರತಿಜ್ಞೆ ಮಾಡಿದ್ದು, ಟ್ರಂಪ್ ಭಾರತಕ್ಕೆ ಅತ್ಯಾಧುನಿಕ ಯುದ್ಧ ವಿಮಾನಗಳನ್ನು ಮಾರಾಟ ಮಾಡಲು ಮುಂದಾಗಿದ್ದಾರೆ.

ಪ್ರಧಾನಿ ಮೋದಿ ಮತ್ತು ಭಾರತದೊಂದಿಗೆ ವಿಶೇಷ ಬಾಂಧವ್ಯ ಹೊಂದಿದ್ದೇನೆ. ಅಮೆರಿಕದ ಉನ್ನತ ಮಿಲಿಟರಿ ವ್ಯವಸ್ಥೆಯಲ್ಲಿ ಒಂದಾದ F-35 ಯುದ್ಧ ವಿಮಾನಗಳನ್ನು ಮಾರಾಟ ಮಾಡಲು ಸಿದ್ಧವಾಗಿದೆ ಎಂದು ಟ್ರಂಪ್ ಘೋಷಣೆ ಮಾಡಿದ್ದಾರೆ.

ಚೀನಾ ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ರಾಷ್ಟ್ರವಾಗಿದ್ದು, ಅಮೆರಿಕದ ಆಡಳಿತವು ಭಾರತವನ್ನು ಸಮಾನ ಮನಸ್ಸಿನ ಹಿತಾಸಕ್ತಿಗಳೊಂದಿಗೆ ಪ್ರಮುಖ ಪಾಲುದಾರ ಎಂದು ಪರಿಗಣಿಸಿದೆ. ಇದರೊಂದಿಗೆ ಎರಡೂ ದೇಶಗಳು ವ್ಯಾಪಾರ ಒಪ್ಪಂದದಲ್ಲಿ ಒಟ್ಟಾಗಿ ಕೆಲಸ ಮಾಡುತ್ತವೆ ಎಂಬ ಮೋದಿಯವರ ಮಾತಿಗೆ ಟ್ರಂಪ್ ಒಪ್ಪಿಗೆ ಸೂಚಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST