ಗದಗ, ಕರ್ನಾಟಕ ವಿಧಾನ ಪರಿಷತ್ ನ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಎಸ್ ವಿ ಸಂಕನೂರ್ ಅವರು ಇದೇ ಮಂಗಳವಾರ ಧಾರವಾಡದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜು ಕುರಡಗಿ ಹೇಳಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿದ ಅವರು ಅಂದು ಬೆಳಿಗ್ಗೆ ೧೦:೦೦ ಗಂಟೆಗೆ ಧಾರವಾಡದ ಉಳವಿ ಚನ್ನಬಸವೇಶ್ವರ ದೇವಸ್ಥಾನದಿಂದ ಗದಗ ಹಾವೇರಿ ಧಾರವಾಡ ಹಾಗು ಉತ್ತರ ಕನ್ನಡ ಜಿಲ್ಲೆಯ ನಮ್ಮ ಪಕ್ಷದ ಸಂಸದರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು,ವಿಧಾನ ಪರಿಷತ್ ಸದಸ್ಯರು,ನಿಗಮ ಮಂಡಳಿ ಮಾಜಿ ಅಧ್ಯಕ್ಷರು ಹಾಗು ರಾಜ್ಯ ಪದಾಧಿಕಾರಿಗಳು ಪಾದಯಾತ್ರೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಎಸ್ ವಿ ಸಂಕನೂರ ಅವರ ನಾಮಪತ್ರ ಸಲ್ಲಿಸಲಿದ್ದಾರೆ. ಕಾರಣ ಜಿಲ್ಲೆಯ ಪಕ್ಷದ ಎಲ್ಲಾ ಹಂತದ ಪಕ್ಷದ ಪದಾಧಿಕಾರಿಗಳು ಪ್ರಮುಖರು ಕಾರ್ಯಕರ್ತರು ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಳ್ಳಲು ರಾಜು ಕುರಡಗಿ ಕೋರಿದ್ದಾರೆ.