LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸೆಬಿ ಮುಖ್ಯಸ್ಥರಾಗಿ ತುಹಿನ್ ಕಾಂತ ಪಾಂಡೆ ನೇಮಕ

ನವದೆಹಲಿ: ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ(ಸೆಬಿ) ಮುಖ್ಯಸ್ಥರಾಗಿ ತುಹಿನ್ ಕಾಂತ ಪಾಂಡೆ ಅವರನ್ನು ಕೇಂದ್ರ ಸರ್ಕಾರ ಗುರುವಾರ ನೇಮಕ ಮಾಡಿದೆ.

ಒಡಿಶಾ ಕೇಡರ್ ನ 1987ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ತುಹಿನ್ ಕಾಂತ ಪಾಂಡೆ ಅವರನ್ನು ಸೆಬಿಯ 11ನೇ ಮುಖ್ಯಸ್ಥರಾಗಲಿದ್ದಾರೆ. ಸಂಪುಟದ ನೇಮಕಾತಿ ಸಮಿತಿಯ ಅನುಮೋದನೆಯ ನಂತರ, ಹಣಕಾಸು ಕಾರ್ಯದರ್ಶಿ ಪಾಂಡೆ ಅವರನ್ನು ಮೂರು ವರ್ಷಗಳ ಅವಧಿಗೆ ಸೆಬಿ ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ.

ಸೆಬಿ ಹಾಲಿ ಮುಖ್ಯಸ್ಥರಾಗಿರುವ ಮಾಧಬಿ ಪುರಿ ಬುಚ್ ಅವರ ಅಧಿಕಾರಾವಧಿ ಮಾ.1 ರಂದು ಕೊನೆಗೊಳ್ಳಲಿದೆ. 2022ರ ಮಾ.2 ರಂದು ಮೊದಲ ಮಹಿಳಾ ಮುಖ್ಯಸ್ಥರಾಗಿ ಮಾಧಬಿ ಪುರಿ ಬುಚ್ ಅವರು ಅಧಿಕಾರ ವಹಿಸಿಕೊಂಡಿದ್ದರು.

ಪಾಂಡೆ ಅವರು ಸಾರ್ವಜನಿಕ ಉದ್ಯಮಗಳ ಇಲಾಖೆ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ(DPE), ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆ(DIPAM)ಗಳಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದರು. DIPAM ಮತ್ತು DPE ಎರಡೂ ಹಣಕಾಸು ಸಚಿವಾಲಯದ ಅಡಿಯಲ್ಲಿದ್ದವು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST