ಕೊಪ್ಪಳ. ನ.13: ನಮ್ಮ ಪಾಲಿನ 7 ಟಿಎಂಸಿ ನೀರಿನಲ್ಲಿ ನ.20ರವರೆಗೆ ತುಂಗಭದ್ರಾ ಕಾಲುವೆಗಳಿಗೆ ನೀರು ಹರಿಸುತ್ತೇವೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಹೇಳಿದರು.
ನ.13ರಂದು ಕೊಪ್ಪಳ ಜಿಲ್ಲಾಡಳಿತ ಭವನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರೈತರಿಗೆ ಅನುಕೂಲ ಆಗಬೇಕು ಎಂದು ಯೋಚಿಸಿ ನವೆಂಬರ್ 30ರವರೆಗೆ ಸಹ ನೀರು ಹರಿಸುವ ಪ್ರಯತ್ನದಲ್ಲಿದ್ದೇವೆ. ಈ ಬಗ್ಗೆ
ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದೇನೆ. ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರೊಂದಿಗೆ ಸಹ ಮಾತನಾಡಿದ್ದೇನೆ ಎಂದು ಸಚಿವರು ಸ್ಪಷ್ಟಪಡಿಸಿದರು.