LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತುಮಕೂರು- ಚಿತ್ರದುರ್ಗ- ದಾವಣಗೆರೆ ನೇರ ರೈಲ್ವೆ ಮಾರ್ಗ ಕಾಮಗಾರಿ ಶೀಘ್ರವೇ ಮುಗಿಸಲು ಒತ್ತಾಯ.!

 

ಚಿತ್ರದುರ್ಗ: ತುಮಕೂರು- ಚಿತ್ರದುರ್ಗ- ದಾವಣಗೆರೆ ಮಧ್ಯೆ ಹೊಸದಾದ ನೇರ ರೈಲ್ವೆ ಮಾರ್ಗದ ಅಂತಿಮ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ದಾವಣಗೆರೆ ಮತ್ತು ತುಮಕೂರು ಕಡೆಯಿಂದ ಆದಷ್ಟು ಬೇಗನೆ ಕಾಮಗಾರಿ ಕೈಗೊಳ್ಳುವಂತೆ ಕೇಂದ್ರ ರೈಲ್ವೆ ಇಲಾಖೆಗೆ ನೈರುತ್ಯ ರೈಲ್ವೆ ವಲಯ  ಕಾಂಗ್ರಸ್ ಇತರೆ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾದ ಎನ್.ಡಿ.ಕುಮಾರ್ ಒತ್ತಾಯಿಸಿದ್ದಾರೆ.

ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು ಈ ಮಾರ್ಗದ ರೈಲುಗಳ ಸಂಚಾರ ಶುರುವಾದರೆ ಹಳೇ ಮೈಸೂರು ಭಾಗ- ಉತ್ತರ ಕರ್ನಾಟಕ ಮತ್ತಷ್ಟು ಹತ್ತಿರವಾಗಲಿವೆ. ಬೆಂಗಳೂರು ದಾವಣಗೆರೆ -ಹುಬ್ಬಳ್ಳಿ ಸೇರಿದಂತೆ ಉತ್ತರ ಕರ್ನಾಟಕದ ಮಧ್ಯೆ 65 ಕಿಮೀ ಅಂತರ ಕಡಿಮೆಯಾಗಿ, ಹಣ-ಸಮಯ, ಇಲಾಖೆಗೆ ಇಂಧನ- ವಿದ್ಯುತ್ ಉಳಿತಾಯ ಆಗಲಿದೆ ಎಂದು ತಿಳಿಸಿದ್ದು  ಇದ್ದಲ್ಲದೆ, ಬೆಂಗಳೂರಿನಿಂದ ಚಿತ್ರದುರ್ಗಕ್ಕೆ 110 ಕಿಮೀ ಅಂತರ ಕಡಿಮೆಯಾಗುತ್ತದೆ. ಸಿರಾ ಮತ್ತು ಹಿರಿಯೂರು ಸೇರಿದಂತೆ ಹತ್ತಾರು ಹಳ್ಳಿಗಳಿಗೆ ರೈಲ್ವೆ ಸೇವೆ ನೀಡಿದಂತಾಗುತ್ತದೆ. ಹೊಸ ನಿಲ್ದಾಣಗಳು, ಹೊಸ ಮಾರ್ಗದಿಂದಾಗಿ ಸಾಕಷ್ಟು ಉದ್ಯೋಗ ಅವಕಾಶ ಸೃಷ್ಟಿ ಆಗಲಿವೆ ಎಂದಿದ್ದಾರೆ.

ಈ ಹೊಸ ಮಾರ್ಗ ಶುರುವಾದಲ್ಲಿ ಬೆಂಗಳೂರು- ಅರಸೀಕೆರೆ- ಶಿವಮೊಗ್ಗ ಮಾರ್ಗದ ರೈಲು ಸಂಚಾರದಲ್ಲಿ ಶೇ.50ರಷ್ಟು ರೈಲು ಸಂಚಾರದ ಒತ್ತಡ ಕಡಿಮೆಯಾಗಲಿದೆ. ಶಿವಮೊಗ್ಗವು ಬೆಂಗಳೂರಿನಿಂದ ಹೆಚ್ಚು ಪ್ರಯಾಣಿಕ ರೈಲುಗಳನ್ನು ಹೊಂದಬಹುದು. ಬೆಂಗಳೂರಿನಿಂದ ಬೆಳಗಾವಿ, ವಿಜಯಪುರ ಮಧ್ಯೆ ಅಸ್ತಿತ್ವದಲ್ಲಿರುವ ಮಾರ್ಗಗಳಲ್ಲಿ ರೈಲು ಸಂಚಾರ ಕನಿಷ್ಠ ಶೇ.35 ರಷ್ಟು ಕಡಿಮೆ ಆಗುತ್ತದೆ. ಪರಿಣಾಮ ಹರಿಹರ-ಬೀರೂರು ಅರಸೀಕೆರೆ ಮಾರ್ಗದಲ್ಲಿ ರೈಲು ದಟ್ಟಣೆ ಕಡಿಮೆಯಾಗಿ, ಹೆಚ್ಚಿನ ಸರಕು ಸಾಗಾಣೆಗೆ ಅನುಕೂಲ ಆಗಲಿದೆ ಎಂದು ತಿಳಿಸಿದ್ದಾರೆ.

ಐತಿಹಾಸಿಕ ಚಿತ್ರದುರ್ಗ ಕೋಟೆ ವೀಕ್ಷಣೆಗೆ ದೇಶ, ವಿದೇಶದಿಂದ ಬರುವ ಪ್ರವಾಸಿಗರಿಗೂ ಅನುಕೂಲ ಆಗುತ್ತದೆ. ಪ್ರವಾಸಿಗರ ಸಂಖ್ಯೆ ಹೆಚ್ಚಾದರೆ ಸ್ಥಳೀಯವಾಗಿ ಹೆಚ್ಚು ಉದ್ಯೋಗ ಸೃಷ್ಟಿ, ಉದ್ಯಮಗಳೂ ಚೇತರಿಕೆ ಕಾಣುತ್ತವೆ. ದಾವಣಗೆರೆ- ಚಿತ್ರದುರ್ಗ ಮಧ್ಯೆ ಆನಗೋಡು, ಹೆಬ್ಬಾಳು, ಭರಮಸಾಗರ, ಸಿರಿಗೆರೆ ಕ್ರಾಸ್, ಐಮಂಗಲ, ಹಿರಿಯೂರು, ಸಿರಾ, ಊರಕೇರೆಗೂ ಸಂಪರ್ಕ ಕಲ್ಪಿಸಿದಂತಾಗುತ್ತದೆಂದು ಕಾಂಗ್ರಸ್ ಇತರೆ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾದ ಎನ್.ಡಿ.ಕುಮಾರ್ ಒತ್ತಾಯಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯೆಮನ್‌ನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ರದ್ದು?: ವಿದೇಶಾಂಗ ಸಚಿವಾಲಯ ಹೇಳಿದ್ದೇನು?ತಿರುಪತಿ ತಿರುಮಲ ದರ್ಶನದ ಟಿಕೇಟ್ ವಿತರಣೆ ಹಾಗೂ ಸಮಯ ಬದಲಾವಣೆ; ಇಲ್ಲಿದೆ ಮಾಹಿತಿಹಳಿತಪ್ಪಿದ ಇಸ್ಲಾಮಾಬಾದ್ ಎಕ್ಸ್‌ಪ್ರೆಸ್‌ನ 10 ಭೋಗಿಗಳು: 30 ಮಂದಿಗೆ ಗಾಯ, ಮೂವರು ಗಂಭೀರಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ಉಗ್ರ ಬಲಿದೂರಿನ ಮಾಹಿತಿ ಪಡೆಯಲು ಮನೆಗೆ ಬಂದ ಪೊಲೀಸ್ ಸಿಬ್ಬಂದಿ ಎದುರು ಸೀರೆ ಬಿಚ್ಚಿಕೊಂಡು ಹುಚ್ಚಾಟ ಮೆರೆದ ಮಹಿಳೆಭಾರತ ಇನ್ಮುಂದೆ ರಷ್ಯಾದಿಂದ ಕಚ್ಚಾ ತೈಲ ಖರೀದಿಸಲ್ಲ, ಇದು ಒಳ್ಳೆಯ ಹೆಜ್ಜೆ ಎಂದ ಡೊನಾಲ್ಡ್ ಟ್ರಂಪ್ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆರೈತರಿಗೆ ಗುಡ್ ನ್ಯೂಸ್, ಪಿಎಂ ಕಿಸಾನ್ 20ನೇ ಕಂತಿನ ಹಣ ಇಂದು ಬಿಡುಗಡೆಮಾಡೆಲಿಂಗ್‌ ಲೋಕ ಬಿಟ್ಟು ಯುಪಿಎಸ್‌ಸಿ ಪರೀಕ್ಷೆ ಪಾಸ್‌ ಆಗಿ ಅಧಿಕಾರಿಯಾದ ಕಥೆದಿನದ ಮಂಡಕ್ಕಿ ಒಗ್ಗರಣೆ – ಮಿರ್ಚಿ.! 02-08-2025..!