LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಮೊಗ್ಗದಲ್ಲಿ ಹಗಲು ಮನೆ ಕಳ್ಳತನ ಪ್ರಕರಣ ಭೇದಿಸಿದ ತುಂಗಾನಗರ ಪೊಲೀಸರು

ಶಿವಮೊಗ್ಗ, ಜೂನ್.17 :  ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಹಗಲು ಮನೆ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಕಳವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ತುಂಗಾನಗರ ಪೊಲೀಸ್ ಇನ್ಸ್‌ಪೆಕ್ಟರ್ ಕೆ.ಟಿ. ಗುರುರಾಜ್ ಹಾಗೂ ಪಿಎಸ್‌ಐಗಳಾದ ರಘುವೀರ ಎಂ ಮತ್ತು ಮಂಜಮ್ಮ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ತಂಡದಲ್ಲಿ ಹೆಚ್‌.ಸಿ ಕಿರಣ್ ಮೋರೆ, ಅರುಣ್ ಕುಮಾರ್ ಹಾಗೂ ಸಿಬ್ಬಂದಿ ನಾಗಪ್ಪ ಅಡಿವೆಪ್ಪನವರ್, ಹರೀಶ್ ನಾಯ್ಕ, ಹರೀಶ್ ಎಂ.ಜಿ., ರಂಗನಾಥ್ ಮತ್ತು ತಮ್ಮಣ್ಣ ಜಂಬಗಿ ಪಾಲ್ಗೊಂಡಿದ್ದರು.

ತನಿಖೆ ವೇಳೆ ಮಲ್ಲಿಗೇನಹಳ್ಳಿ, ಶ್ರೀರಾಂಪುರ ಹಾಗೂ ವಾಜಪೇಯಿ ಬಡಾವಣೆ ಭಾಗಗಳಲ್ಲಿ ಹಗಲು ವೇಳೆ ಮನೆ ಕಳ್ಳತನ ನಡೆಸುತ್ತಿದ್ದ ಆರೋಪದಡಿ ಪ್ರದೀಪ್ ಬಿ. (33) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಆರೋಪಿಯಿಂದ ತುಂಗಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ಒಟ್ಟು 6 ಪ್ರಕರಣಗಳಿಗೆ ಸಂಬಂಧಿಸಿದಂತೆ ಅಂದಾಜು ₹6 ಲಕ್ಷ ಮೌಲ್ಯದ ಬಂಗಾರದ ಆಭರಣಗಳು ಹಾಗೂ ₹25 ಸಾವಿರ ಮೌಲ್ಯದ ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST