LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೋಲ್ಡ್ ಮಿಕ್ಸ್ ಹಾಗೂ ಇಕೋ ಫಿಕ್ಸ್ ಬಳಸಿ ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಿ : ತುಷಾರ್ ಗಿರಿನಾಥ್

ಬೆಂಗಳೂರು: ನಗರದಲ್ಲಿ ಕೋಲ್ಡ್ ಮಿಕ್ಸ್ ಹಾಗೂ ಇಕೋ ಫಿಕ್ಸ್ ಬಳಸಿ ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿ  ಆಡಳಿತಗಾರರಾದ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯ ಆಡಳಿತಗಾರರ ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ಮಳೆ ಇರುವ ಹಿನ್ನೆಲೆ ಇಕೋ ಫಿಕ್ಸ್ ಹಾಗೂ ಕೋಲ್ಡ್ ಮಿಕ್ಸ್ ಬಳಸಿಕೊಂಡು ರಸ್ತೆ ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ಎಲ್ಲಾ 8 ವಲಯಗಳಲ್ಲಿ ಸ್ಥಳಿಯ ಗುತ್ತಿಗೆದಾರ ಮೂಲಕ ಅವಶ್ಯಕ ಡಾಂಬರನ್ನು ಪಡೆದು ತ್ವರಿತಗತಿಯಲ್ಲಿ ರಸ್ತೆಗುಂಡಿಗಳನ್ನು ಮುಚ್ಚಬೇಕು. ರಸ್ತೆ ಗುಂಡಿಗಳನ್ನು ಮುಚ್ಚುವ ವರದಿಯನ್ನು ಪ್ರತಿ ನಿತ್ಯ ನೀಡಲು ಸೂಚನೆ ನೀಡಿದರು.

*ಡಾಂಬರೀಕರಣ ಪೂರ್ಣಗೊಳಿಸಿ:*

ಪಾಲಿಕೆ ವ್ಯಾಪ್ತಿಯಲ್ಲಿ 690 ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳಿಗೆ ಡಾಂಬರೀಕರಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಈ ಸಂಬಂಧ ತ್ವರಿತಗತಿಯಲ್ಲಿ ರಸ್ತೆಗಳಿಗೆ ಡಾಂಬರೀಕರಣ ಮಾಡಿ ಪೂರ್ಣಗೊಳಿಸಬೇಕೆಂದು ಸೂಚಿಸಿದರು.

*ರಸ್ತೆಯಲ್ಲಿ ನೀರು ನಿಲ್ಲುವ ಸ್ಥಳಗಳಲ್ಲಿ ಸಮಸ್ಯೆ ಬಗೆಹರಿಸಿ:*

ನಗರದಲ್ಲಿ ಪ್ರಮುಖವಾಗಿ ಮಳೆಗಾಲದ ವೇಳೆ 82 ಕಡೆಯ ರಸ್ತೆಗಳಲ್ಲಿ ನೀರು ನಿಂತು ಸಂಚಾರ ದಟ್ಟಣೆ ಹೆಚ್ಚಾಗಲಿದೆ. ಅದನ್ನು ತಪ್ಪಿಸುವ ಸಲುವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಈ ಸಂಬಂಧ ರಸ್ತೆಗಳಲ್ಲಿ ನೀರು ನಿಲ್ಲದಂತೆ ಕಾಮಗಾರಿ ಮಾಡಿ ಸೈಡ್ ಡ್ರೈನ್ ಗಳಿಗೆ ಸರಾಗವಾಗಿ ನೀರು ಹರಿದು ಹೋಗುವ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.

*ಪ್ರವಾಹ ಪೀಡಿತ ಪ್ರದೇಶಗಳ ಮೇಲೆ ನಿಗಾವಹಿಸಿ:*

ನಗರದಲ್ಲಿ 44 ಕಡೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ತಾತ್ಕಾಲಿಕ ಕ್ರಮಗಳನ್ನು ತೆಗೆದುಕೊಳ್ಳುವ ಜೊತೆಗೆ ಶಾಶ್ವತ ಪರಿಹಾರಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

*ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್* ರವರು ಮಾತನಾಡಿ, ನಗರದಲ್ಲಿ ಮಳೆಗಾಲದ ವೇಳೆ ಪ್ರವಾಹ ಪೀಡಿತ ಪ್ರದೇಶಗಳು ಹಾಗೂ ರಸ್ತೆಗಳಲ್ಲಿ ಜಲಾವೃತವಾಗುವ ಸ್ಥಳಗಳಿಗೆ ಮೊದಲ ಆದ್ಯತೆ ನೀಡಬೇಕು. ಆ ಸ್ಥಳಗಳಲ್ಲಿ ಇರುವ ಸಮಸ್ಯೆಗಳನ್ನು ಇತ್ಯರ್ಥ ಪಡಿಸಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ವಿಶೇಷ ಆಯುಕ್ತರುಗಳಾದ ಡಾ: ಕೆ. ಹರೀಶ್ ಕುಮಾರ್, ಸುರೋಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ನವೀನ್ ಕುಮಾರ್ ರಾಜು, ವಲಯ ಆಯುಕ್ತರುಗಳಾದ ಸತೀಶ್, ರಮ್ಯಾ, ರಮೇಶ್, ಕರೀಗೌಡ, ಸ್ನೇಹಲ್, ದಿಗ್ವಿಜಯ್ ಬೋಡ್ಕೆ, ಸಂಚಾರಿ ಪೊಲೀಸ್ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಅನುಚೇತ್, ಎಲ್ಲಾ ವಲಯ ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ