LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅನಧಿಕೃತ ಜಾಹೀರಾತುಗಳು ಅಳವಡಿಸಿರುವವರ ಮೇಲೆ ಎಫ್.ಐ.ಆರ್ ದಾಖಲಿಸಿ: ತುಷಾರ್ ಗಿರಿನಾಥ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವವರ ಮೇಲೆ ಎಫ್.ಐ.ಆರ್ ದಾಖಲಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್* ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ಪಾಲಿಕೆ ಕೇಂದ್ರ ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆಯ ಎಲ್ಲಾ 8 ವಲಯಗಳಲ್ಲಿಯೂ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವುದನ್ನು ಗುರುತಿಸಿ ಕೂಡಲೆ ಅದನ್ನು ತೆರವುಗೊಳಿಸಬೇಕು. ಜೊತೆಗೆ ಅನಧಿಕೃತ ಜಾಹೀರಾತು ಅಳವಡಿಸಿರುವವರ ಮೇಲೆ ಎಫ್.ಐ.ಆರ್ ದಾಖಲಿಸಬೇಕೆಂದು ಸೂಚಿಸಲಾಯಿತು.

ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿ:

ಪಾಲಿಕೆ ವ್ಯಾಪ್ತಿಯ 8 ವಲಯಗಳಲ್ಲಿ ಸಮೀಕ್ಷೆಯ ಮೂಲಕ 27655 ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ. ಗುರುತಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿ ಅವರಿಗೆ ನಿಗದಿಪಡಿಸಿರುವ ಸ್ಥಳದಲ್ಲೇ ಮಾರಾಟ ಮಾಡಲು ಕ್ರಮವಹಿಸಬೇಕೆಂದು ಸೂಚನೆ ನೀಡಲಾಯಿತು.

ಒಂಟಿ ಮನೆ ಯೋಜನೆ ಅನುಷ್ಠಾನ:

ನಗರದಲ್ಲಿ ಒಂಟಿ ಮನೆ ಯೋಜನೆಗಳಿಗೆ ಅರ್ಜಿಗಳನ್ನು ಸಲ್ಲಿಸಿರುವ ಪೈಕಿ, ಅರ್ಹ ಫಲಾನುಭವಿಗಳನ್ನು ಕೂಡಲೆ ಗುರುತಿಸಬೇಕು. ಅನಂತರ ಹಂತ-ಹಂತವಾಗಿ ಅನುದಾನ ಬಿಡುಗಡೆಗೊಳಿಸಲು ಅಗತ್ಯ ಕ್ರಮವಹಿಸಬೇಕೆಂದು ಸೂಚನೆ ನೀಡಲಾಯಿತು.

ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರಿತಿ ಗೆಹ್ಲೋಟ್, ವಲಯ ಆಯುಕ್ತರಾದ ಸತೀಶ್, ಅರ್ಚನಾ, ಸ್ನೇಹಲ್, ವಿನತ್ ಪ್ರಿಯಾ, ರಮ್ಯಾ, ರಮೇಶ್, ಕರೀಗೌಡ, ಪ್ರಧಾನ ಅಭಿಯಂತರರು, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಏಕ ಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಒಟ್ಟು 78 ಲಕ್ಷ ರೂ ದಂಡಎಲ್ ಪಿಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-CM ಸಿದ್ದರಾಮಯ್ಯಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿ