LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಿರುತೆರೆ ನಟಿ ನಂದಿನಿ ಸಿಎಂ ದುರಂತ ಅಂತ್ಯ

ಬೆಂಗಳೂರು: ಕನ್ನಡ ಹಾಗೂ ತಮಿಳು ಧಾರಾವಾಹಿಗಳಲ್ಲಿ ಅಭಿನಯಿಸಿ ಹೆಸರು ಮಾಡಿದ್ದ ನಟಿ ನಂದಿನಿ ಸಿಎಂ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಆರ್‌ಆರ್ ನಗರದಲ್ಲಿ ಅವರು ಮೃತಪಟ್ಟಿರುವುದು ದೃಢಪಟ್ಟಿದ್ದು, ಸಾವಿನ ನಿಖರ ಕಾರಣ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬಣ್ಣದ ಲೋಕದಲ್ಲಿ ಮಿಂಚುವ ಕನಸು ಕಂಡಿದ್ದ ನಂದಿನಿ ಅವರ ಅಕಾಲಿಕ ನಿಧನ ಕಿರುತೆರೆ ವಲಯದಲ್ಲಿ ಆಘಾತ ಮೂಡಿಸಿದೆ. ಕನ್ನಡದ ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಅವರು ನಟಿಸಿದ್ದರು. ತಮಿಳಿನ ‘ಗೌರಿ’ ಧಾರಾವಾಹಿಯಲ್ಲಿ ನಾಯಕಿಯ ಪಾತ್ರದ ಮೂಲಕ ವೀಕ್ಷಕರ ಮೆಚ್ಚುಗೆ ಗಳಿಸಿದ್ದರು. ದುರ್ಗಾ ಮತ್ತು ಕನಕ ಎಂಬ ಪಾತ್ರಗಳು ಅವರಿಗೆ ವಿಶಿಷ್ಟ ಪರಿಚಯ ತಂದಿದ್ದವು. ಮೂಲತಃ ಕೊಟ್ಟೂರಿನವರಾದ ನಂದಿನಿ, ವೃತ್ತಿಜೀವನದ ಕಾರಣದಿಂದ ಬೆಂಗಳೂರಿನಲ್ಲಿ ವಾಸವಿದ್ದರು. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ.

‘ಗೌರಿ’ ಧಾರಾವಾಹಿಯಲ್ಲಿ ದ್ವಿಪಾತ್ರದ ಅವಕಾಶ ಪಡೆದು ಗಮನಸೆಳೆದಿದ್ದ ನಂದಿನಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅವಕಾಶಗಳು ದೊರಕುವ ನಿರೀಕ್ಷೆ ಇತ್ತು. ಅವರ ನಿಧನದ ಸುದ್ದಿ ತಿಳಿದ ಕೂಡಲೇ ಸಹ ಕಲಾವಿದರು, ಅಭಿಮಾನಿಗಳು ಹಾಗೂ ಕಿರುತೆರೆ ವಲಯದವರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಯಾರಿಗಾದರೂ ಮಾನಸಿಕ ಒತ್ತಡ ಅಥವಾ ತೊಂದರೆ ಅನುಭವವಾಗುತ್ತಿದ್ದರೆ, ವಿಶ್ವಾಸಾರ್ಹ ವ್ಯಕ್ತಿಗಳೊಂದಿಗೆ ಮಾತನಾಡುವುದು ಅಥವಾ ವೃತ್ತಿಪರರ ಸಹಾಯ ಪಡೆಯುವುದು ಮಹತ್ವದ್ದು. ಸಹಾಯ ಲಭ್ಯವಿರುತ್ತವೆ. ಕ್ಲುಲ್ಲಕ ಕಾರಣಕ್ಕೆ ಜೀವಾಂತ್ಯದ ನಿರ್ಧಾರ ಸಮಂಜಸವಲ್ಲ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026