ಹಾವೇರಿ: ಧರ್ಮಾ ಕಾಲುವೆಯಲ್ಲಿ ಈಜಲು ತೆರಳಿದ್ದ ಸಹೋದರರಿಬ್ಬರೂ ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕೆಂಚಿನೆಗಳೂರು ಬಳಿ ಘಟನೆ ನಡೆದಿದೆ.
ಸೃಜನ್ ಬ್ಯಾತನಾಳ, ಸಚಿನ್ ಬ್ಯಾತನಾಳ ಮೃತಪಟ್ಟ ಸಹೋದರರು ಎಂದು ಗುರುತಿಸಲಾಗಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಸಹೋದರರು ಸಂಬಂಧಿಕರ ಮನೆಗೆ ಬಂದಿದ್ದರು. ಕಾಲುವೆಯಲ್ಲಿ ಈಜಲು ಹೋಗಿದ್ದ ವೇಳೆ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಆಡೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.