LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ: ಮಾಜಿ ಸಿಎಂ ಬೊಮ್ಮಾಯಿ ವಿರುದ್ಧದ ಎರಡು ಕೇಸ್ ರದ್ದು

ಬೆಂಗಳೂರು : ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧದ ಎರಡು ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ ಆದೇಶಿಸಿದೆ.

ಬಸವರಾಜ ಬೊಮ್ಮಾಯಿ ಹೇಳಿದ್ದ ಹೇಳಿಕೆಯಲ್ಲಿ ಪ್ರಚೋದನಕಾರಿ ಅಂಶಗಳಿಲ್ಲವೆಂದು ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದ್ದರು. ಇದೀಗ ಪ್ರಕರಣ ರದ್ದುಪಡಿಸಿ ನ್ಯಾ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಜಿಲ್ಲೆಯ ಸವಣೂರು ಹಾಗೂ ಶಿಗ್ಗಾಂವಿ ಪೊಲೀಸ್ ಠಾಣೆಗಳಲ್ಲಿ 2024ರಲ್ಲಿ ಪ್ರಕರಣಗಳು ದಾಖಲಾಗಿದ್ದವು. ಬಳಿಕ ಕೇಸ್ ರದ್ದು ಕೋರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಪ್ರಕರಣಗಳನ್ನು ರದ್ದುಗೊಳಿಸಿದೆ.

2024 ರ ನವೆಂಬರ್‌ನಲ್ಲಿ ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಕ್ಫ್ ಮಂಡಳಿ ರೈತರ ಭೂಮಿಯನ್ನು ಕಬಳಿಸುತ್ತಿದೆ. ಸವಣೂರಿನಲ್ಲಿ ನಿಂತು ಎಲ್ಲಿಗೆ ಕಲ್ಲು ಎಸೆದರೂ ಅದು ವಕ್ಫ್ ಭೂಮಿ ಮೇಲೆ ಬೀಳುತ್ತದೆ ಎಂದು ಹೇಳಿದ್ದರು. ಬಳಿಕ ಇದು ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಹೀಗಾಗಿ ಭಾರತೀಯ ನ್ಯಾಯ ಸಂಹಿತಾ, 2023 (ಬಿಎನ್‌ಎಸ್) ಸೆಕ್ಷನ್ 196(1)(ಎ) ಅಡಿಯಲ್ಲಿ ಬೊಮ್ಮಾಯಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ನಂತರ ಪ್ರಕರಣಗಳನ್ನು ರದ್ದು ಕೋರಿ ಬೊಮ್ಮಾಯಿ ಹೈಕೋರ್ಟ್ ಮೆಟ್ಟಿಲೇರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026