LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚೋರ್ಲಾ ಘಾಟ್ ನಲ್ಲಿ 400 ಕೋಟಿ ಹೊತ್ತ ಎರಡು ಕಂಟೈನರ್ ನಾಪತ್ತೆ.!

 

ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರಕ್ಕೆ ₹400 ಕೋಟಿ ನಗದು ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳನ್ನೇ ಹೈಜಾಕ್‌ ಮಾಡಿರುವುದು ಇತಿಹಾಸದಲ್ಲೇ ಬೆಚ್ಚಿ ಬೀಳಿಸುವ ಅತಿದೊಡ್ಡದಾದ ದರೋಡೆ ಪ್ರಕರಣ ಇದಾಗಿದೆ ಎಂದೇ ಹೇಳಲಾಗುತ್ತಿದೆ.

ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ, ಈ ಮೂರು ರಾಜ್ಯಗಳ ಪೊಲೀಸ್ ವ್ಯವಸ್ಥೆಯನ್ನೇ ಈ ಘಟನೆ ಅಲರ್ಟ್ ಮಾಡಿದೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ ಸುಮಾರು ₹400 ಕೋಟಿ ನಗದು ತುಂಬಿದ್ದ ಎರಡು ಕಂಟೇನರ್‌ಗಳು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ ಪ್ರದೇಶದಲ್ಲಿ ಹೈಜಾಕ್ ಆಗಿರುವುದು ಇದೀಗ ಬಹಿರಂಗವಾಗಿದೆ. 2025ರ ಅಕ್ಟೋಬರ್ 16ರಂದು ಈ ದರೋಡೆ ನಡೆದಿದೆ. ಘಟನೆ ನಡೆದು ಹಲವಾರು ತಿಂಗಳ ನಂತರ ಪ್ರಕರಣ ಬೆಳಕಿಗೆ ಬಂದಿರುವುದು ಮೂರು ರಾಜ್ಯಗಳ ಪೊಲೀಸರಲ್ಲಿ ತೀವ್ರ ಅಚ್ಚರಿಯನ್ನುಂಟು ಮಾಡಿದೆ. ಜತೆಗೆ ಅನೇಕ ಅನುಮಾನಗಳಿಗೆ ಕಾರಣವಾಗಿದೆ.

ಈ ಭಾರೀ ಮೊತ್ತದ ಹಣವು ಮಹಾರಾಷ್ಟ್ರದ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಅವರಿಗೆ ಸೇರಿದ್ದು ಎಂಬ ಮಾಹಿತಿ ಮಹಾರಾಷ್ಟ್ರದ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗುತ್ತಿದ್ದ ಎರಡು ಕಂಟೇನರ್‌ಗಳು, ಖಾನಾಪುರ ತಾಲೂಕಿನ ಅಪಾಯಕಾರಿ ಹಾಗೂ ಅರಣ್ಯ ಪ್ರದೇಶವಾದ ಚೋರ್ಲಾ ಘಾಟ್ ಮಾರ್ಗದಲ್ಲಿ ಏಕಾಏಕಿ ನಾಪತ್ತೆಯಾಗಿವೆ. ಈ ಕಂಟೇನರ್‌ಗಳಲ್ಲಿ ₹400 ಕೋಟಿಗೂ ಅಧಿಕ ನಗದು ಹಣ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಇದೀಗ ಅಧಿಕೃತ ದಾಖಲೆಗಳಲ್ಲಿ ಉಲ್ಲೇಖವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026