LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದಿನಿಂದ ಎರಡು ದಿನಗಳ ಪಂಚಪೀಠಗಳ ಸಮಾಗಮ.!

 

ದಾವಣಗೆರೆ : ಇಂದಿನಿಂದ ಎರಡು ದಿನಗಳ ಪಂಚಪೀಠಗಳ ಸಮಾಗಮ. ಸುಮಾರು 40 ವರ್ಷಗಳ ಬಳಿಕ ಒಂದೇ ವೇದಿಕೆಯಲ್ಲಿ ಪಂಚಪೀಠಾಚಾರ್ಯರು ಒಂದಾಗುತ್ತಿದ್ದಾರೆ.

ಜುಲೈ 21 ಮತ್ತು 22 ರಂದು ವೀರಶೈವ ಪೀಠಾಚಾರ್ಯರ ಶೃಂಗಸಭೆ ಆಯೋಜನೆ ಮಾಡಲಾಗಿದೆ. ಪಂಚಪೀಠದ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಶೃಂಗ ಸಮ್ಮೇಳನ ನಡೆಯಲಿದ್ದು, ಪೀಠಾಚಾರ್ಯರು ಹಾಗೂ ಶಿವಾಚಾರ್ಯರನ್ನು ಒಂದೆಡೆ ಸೇರಿಸಿ ಜಾಗೃತಿ ಮೂಡಿಸಲಿದ್ದಾರೆ. ರಾಜ್ಯಾದ್ಯಂತ ಶೃಂಗ ಸಭೆ ಕುತೂಹಲ ಹೆಚ್ಚಿಸಿದೆ.

1967ರಲ್ಲಿ ಈ ಒಂದು ಪಂಚಪೀಠಗಳು ಮುಖ್ಯಮಂದಿರದಲ್ಲಿ ಸೇರಿದ್ದವು. ಇದೀಗ ದಾವಣಗೆರೆ ನಗರದ ರೇಣುಕಾ ಮಂದಿರದಲ್ಲಿ ಮತ್ತೆ ಪಂಚಪೀಠಾಚಾರ್ಯರು ಒಂದೇ ವೇದಿಕೆಯಲ್ಲಿ ಒಂದಾಗಲಿದ್ದಾರೆ. ಸಂಸ್ಕೃತಿ ಸಂವರ್ಧನೆಗಾಗಿ ಪಂಚಪೀಠಚಾರ್ಯರಿಂದ ಪಾದಯಾತ್ರೆ ಹಮ್ಮಿಕೊಳ್ಳಲಿದ್ದು, ರಂಭಾಪುರಿ ಪೀಠ, ಉಜ್ಜಯಿನಿ ಪೀಠ, ಕೇದಾರ ಪೀಠ, ಕಾಶಿಪೀಠ ಹಾಗೂ ಶ್ರೀಶೈಲ ಪೀಠ ಒಂದೇ ವೇದಿಕೆಯಲ್ಲಿ ಸಮಾಗಮವಾಗಲಿವೆ.

ಈ ಶೃಂಗಸಭೆಯಲ್ಲಿ ದೇಶದ 500ಕ್ಕೂ ಹೆಚ್ಚು ಮಠಾಧೀಶರು ಭಾಗಿ ಆಗಲಿದ್ದಾರೆ. ಸುಮಾರು 25000 ಈ ಒಂದು ಶೃಂಗಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ದಾವಣಗೆರೆಯಲ್ಲಿ ಊಟ, ವಾಸ್ತವ್ಯ ಮತ್ತು ಲಿಂಗ ಪೂಜೆಗೆ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗಿದೆ. ರಾಜ್ಯದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುನ್ನುಡಿ ಬರೆಯಲು ವೀರಶೈವ ಲಿಂಗಾಯತ ಸಮುದಾಯ ಮುಂದಾಗಿದೆ. ಜಾತಿ ಸಮೀಕ್ಷೆ ವಿಚಾರದಲ್ಲಿ ಮುಸ್ಲಿಂ ಸಮುದಾಯದ ಜನಸಂಖ್ಯೆ ಹೆಚ್ಚಿದೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಾತಿ ಗಣತಿ ವೇಳೆ ವೀರಶೈವ ಲಿಂಗಾಯತ ಎಂದು ಬರೆಸುವಂತೆ ಜಾಗೃತಿ ಮೂಡಿಸಲು ವೀರಶೈವ ಲಿಂಗಾಯತ ಮಹಾಸಭಾ ಮುಂದಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026