LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದೇವಾಲಯದಲ್ಲಿ ಕಾಲ್ತುಳಿತ: ಇಬ್ಬರು ಭಕ್ತರ ಸಾವು, 29 ಮಂದಿಗೆ ಗಾಯ

ಲಖನೌ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿರುವ ದೇವಾಲಯವೊಂದರಲ್ಲಿ ಇಂದು ನಸುಕಿನ ಹೊತ್ತು ಕಾಲ್ತುಳಿತ ಸಂಭವಿಸಿ ಇಬ್ಬರು ಭಕ್ತರು ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡಿದ್ದಾರೆ.

ಪವಿತ್ರ ಶ್ರಾವಣ ಮಾಸದ ಹಿನ್ನೆಲೆ ಸೋಮವಾರ ಬಾರಾಬಂಕಿಯಲ್ಲಿರುವ ಪ್ರಾಚೀನ ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಭಕ್ತರು ದೇವರ ದರ್ಶನಕ್ಕೆ ಸಾಲುಗಟ್ಟಿ ನಿಂತಿದ್ದರು. ಈ ವೇಳೆ ಕೆಲ ಕೋತಿಗಳು ಓವರ್‌ಹೆಡ್ ವಿದ್ಯುತ್ ತಂತಿಗಳ ಮೇಲೆ ಹಾರಿವೆ. ಇದರಿಂದ ವಿದ್ಯುತ್‌ ತಂತಿ ತುಂಡಾಗಿ ತಗಡಿನ ಶೆಡ್‌ ಮೇಲೆ ಬಿದ್ದಿದ್ದು ದುರಂತಕ್ಕೆ ಕಾರಣವಾಗಿದೆ.



ಕೆಲವರಿಗೆ ನೇರವಾಗಿ ವಿದ್ಯುತ್‌ ಶಾಕ್‌ ತಗುಲಿದೆ. ಇದರಿಂದ ಇತರ ಭಕ್ತರಲ್ಲೂ ಆತಂಕ ಹೆಚ್ಚಾಗಿ ನೂಕುನುಗ್ಗಲು ಶುರುವಾಗಿ, ಕಾಲ್ತುಳಿತ ಉಂಟಾಗಿದೆ. ಕಾಲ್ತುಳಿತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 29 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನು ಸಮೀಪದ ತ್ರಿವೇದಿಗಂಜ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಶಶಾಂಕ್ ತ್ರಿಪಾಠಿ ತಿಳಿಸಿದ್ದಾರೆ.

ಘಟನೆ ತಿಳಿದ ಸಿಎಂ ಯೋಗಿ ಆದಿತ್ಯನಾಥ್‌ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಗಾಯಾಳುಗಳಿಗೆ ತ್ವರಿತ ಪರಿಹಾರ ಮತ್ತು ಸರಿಯಾದ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026