LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಬರಿಮಲೆ ಚಿನ್ನ ಕಳವು ಪ್ರಕರಣ: ಕರ್ನಾಟಕದಲ್ಲಿ ಮತ್ತಿಬ್ಬರು ಆರೋಪಿಗಳ ಬಂಧನ

ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಕರ್ನಾಟಕದಲ್ಲಿ ಇಬ್ಬರನ್ನು ಬಂಧಿಸಿದೆ.

ಶಬರಿಮಲೆ ದೇಗುಲದಲ್ಲಿ ಕಲಾಕೃತಿಗಳಿಗೆ ವಿದ್ಯುತ್‌ ಲೇಪನ ಮಾಡಿದ್ದ ಸ್ಮಾರ್ಟ್ ಕ್ರಿಯೇಷನ್ಸ್ ಸಿಇಒ ಪಂಕಜ್ ಭಂಡಾರಿ ಹಾಗೂ ಬಳ್ಳಾರಿಯ ಚಿನ್ನದ ಉದ್ಯಮಿ ಗೋವರ್ಧನ ಬಂಧಿತರು.

ಇವರಿಬ್ಬರನ್ನು ವಶಕ್ಕೆ ಪಡೆದು ತಿರುವನಂತಪುರದಲ್ಲಿರುವ ಅಪರಾಧ ವಿಭಾಗದ ಕಚೇರಿಗೆ ಕರೆತಂದು ವಿಚಾರಣೆಗೆ ಒಳಪಡಿಸಲಾಗಿದೆ. 2019ರಲ್ಲಿ ಪ್ರಕರಣದ ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೋಟಿ, ದ್ವಾರಪಾಲಕ ಮೂರ್ತಿಗಳು ಹಾಗೂ ಗರ್ಭಗುಡಿಯ ದ್ವಾರಕ್ಕೆ ವಿದ್ಯುತ್ ಲೇಪನಕ್ಕಾಗಿ ಸ್ಮಾರ್ಟ್ ಕ್ರಿಯೇಷನ್‌ಗೆ ತೆಗೆದುಕೊಂಡು ಹೋಗಲಾಗಿದ್ದು, ಆ ವೇಳೆ ಅದರಲ್ಲಿದ್ದ ಚಿನ್ನವನ್ನು ತೆಗೆಯಲಾಗಿದೆ ಎನ್ನುವುದು ಎಸ್‌ಐಟಿ ತನಿಖೆಯಲ್ಲಿ ತಿಳಿದು ಬಂದಿದೆ.

ವಿದ್ಯುತ್ ಲೇಪನದ ವೇಳೆ 400 ಗ್ರಾಂಗೂ ಅಧಿಕ ಚಿನ್ನವನ್ನು ತೆಗೆದು ಅದನ್ನು ಗೋವರ್ಧನಗೆ ಹಸ್ತಾಂತರಿಸಲಾಗಿದೆ ಎಂದು ಪೋಟಿ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ದ್ವಾರಪಾಲಕ ಮೂರ್ತಿಗಳ ಚಿನ್ನಗಳವು ಪ್ರಕರಣದದಲ್ಲಿ ಭಂಡಾರಿ ಹಾಗೂ ಗೋವರ್ಧನ ಆರೋಪಿತರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026