LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪುರಿ ರಥಯಾತ್ರೆ ವೇಳೆ ಕಾಲ್ತುಳಿತ: ಡಿಸಿ, ಎಸ್‌ಪಿ ವರ್ಗಾವಣೆ; ಇಬ್ಬರು ಪೊಲೀಸರು ಸಸ್ಪೆಂಡ್

ಭುವನೇಶ್ವರ : ಪುರಿ ಜಗನ್ನಾಥ ದೇಗುಲದ ಬಳಿ ಇಂದು ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಮೃತಪಟ್ಟು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಈ ಘಟನೆ ಬೆನ್ನಲ್ಲೇ ಜಿಲ್ಲಾಧಿಕಾರಿ ಸಿದ್ದಾರ್ಥ್ ಶಂಕರ್ ಸ್ಟೈನ್ ಮತ್ತು ಎಸ್‌ಪಿ ವಿನೀತ್ ಅಗರ್ವಾಲ್ ಅವರನ್ನು ವರ್ಗಾವಣೆ ಮಾಡಿ ಸಿಎಂ ಮೋಹನ್ ಮಾಝಿ ಆದೇಶ ಹೊರಡಿಸಿದ್ದಾರೆ.

ನಿರ್ಲಕ್ಷ್ಯದಿಂದ ಕಾಲ್ತುಳಿತ ಸಂಭವಿಸಿದ್ದು, ಇದು ಅಕ್ಷಮ್ಯ. ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಪಿ ವಿಷ್ಣು ಪಾಟಿ ಮತ್ತು ಕಮಾಂಡೆಂಟ್ ಅಜಯ್ ಪಧಿ ಎಂಬ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದಾಗಿ ಸಿಎಂ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖುರ್ದಾ ಜಿಲ್ಲಾಧಿಕಾರಿ ಚಂಚಲ್ ರಾಣಾ ಅವರನ್ನು ಪುರಿಯ ನೂತನ ಜಿಲ್ಲಾಧಿಕಾರಿಯಾಗಿ ಸಿಎಂ ನೇಮಿಸಿದ್ದಾರೆ. ಅಗರ್ವಾಲ್ ಅವರ ಬದಲಿಗೆ ಪಿನಕ್ ಮಿಶ್ರಾ ಅವರನ್ನು ಪುರಿ ಎಸ್‌ಪಿಯಾಗಿ ನೇಮಿಸಲಾಗಿದೆ. ಇನ್ನು ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಸರ್ಕಾರ ತಲಾ 25 ಲಕ್ಷ ರೂ. ಆರ್ಥಿಕ ನೆರವು ನೀಡಲಿದೆ ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಗುಂಡಿಚಾ ದೇವಸ್ಥಾನದ ಬಳಿ ಬೆಳಿಗಿನ ಜಾವ 4 ಗಂಟೆ ಸುಮಾರಿಗೆ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಸಾವನ್ನಪ್ಪಿ, ಸುಮಾರು 50 ಜನರು ಗಾಯಗೊಂಡಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026