LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಬ್ಬರು ವಿದ್ಯಾರ್ಥಿಗಳು ಹೃದಯಾಘಾತದಿಂದ ಸಾವು

ರಾಜ್ಯದಲ್ಲಿ ಯುವಜನತೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿವೆ. ಧಾರವಾಡ ಜಿಲ್ಲೆಯಲ್ಲಿ ಪದವಿ ವಿಭಾಗದಲ್ಲಿ ವಿದ್ಯಾಭ್ಯಾಸ ಮುಗಿಸಿ, ಯುಪಿಎಸ್ಸಿ ಹಾಗೂ ಕೆಎಎಸ್ ಪರೀಕ್ಷೆಗೆ ತಯಾರಿ ನಡೆಸಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.

ದಾವಣಗೆರೆಯಲ್ಲಿ ಹೃದಯಸ್ತಂಭನದಿಂದ 22 ವರ್ಷದ ಯುವಕ ಮೃತಪಟ್ಟಿದ್ದಾನೆ. ಇನ್ನೊಂದೆಡೆಯಲ್ಲಿ, ಸರಣಿ ಹೃದಯಾಘಾತ ಸುದ್ದಿಗಳಿಂದ ಆತಂಕಗೊಂಡಿರುವ ಜನತೆ ಜಯದೇವ ಸೇರಿದಂತೆ ಹೃದಯ ಆಸ್ಪತ್ರೆಗಳಿಗೆ ಆರೋಗ್ಯ ಪರಿಶೀಲನೆಗಾಗಿ ದೌಡಾಯಿಸುತ್ತಿದ್ದಾರೆ.

ಧಾರವಾಡ ಪುರೋಹಿತನಗರದಲ್ಲಿರುವ ಪ್ರಭಾಕರ ಕುಸುಗೂರ ಅವರ ಮಗಳು ಜೀವಿತಾ ಕುಸುಗೂರ (26) ಹೃದಯಸ್ತಂಭನದಿಂದ ಮೃತಪಟ್ಟಿದ್ದಾರೆ. ಅವರು ಇತ್ತೀಚಿಗಷ್ಟೇ ಎಂಎಸ್ಸಿ ಅಗ್ರಿ ಪದವಿ ಮುಗಿಸಿ ಯುಪಿಎಸ್ಸಿ- ಕೆಎಎಸ್‌ ಪರೀಕ್ಷೆಗೆ ತಯಾರಿ ನಡೆಸಿದ್ದರು. ಮನೆಯಲ್ಲಿ ಮಂಗಳವಾರ ಮಧ್ಯಾಹ್ನ ತಲೆ ಸುತ್ತು ಬಂದು ಬಿದ್ದ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ದಾವಣಗೆರೆಯ ಉದ್ಯಮಿ ರೇಖಾ ಮುರುಗೇಶ್ ಅವರ ಪುತ್ರ ಅಕ್ಷಯ್ (22) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದ ಅಕ್ಷಯ್‌ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026