LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Header Demos
1. Classic Default 2. Pro Centered 3. Modern Inline 4. Corporate Newsroom 5. App Glass Style 6. The Classic Press 7. Dark Mode Matrix 8. The Broadcast Edge 9. Glass Overlay 10. The Mega Portal

ರಾಯಚೂರು ಬಂದ್ ವೇಳೆ ಪೆಟ್ರೋಲ್ ಸುರಿದುಕೊಂಡ ಇಬ್ಬರು ಯುವಕರು ಆಮೇಲಾಗಿದ್ದೇ ಬೇರೆ..!

https://youtu.be/pI33qJ-mYLw?si=fWZEwkBWOu0c3yN3

ರಾಯಚೂರು : ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಇಂದು ರಾಯಚೂರು ಬಂದ್‌ಗೆ ಕರೆ ನೀಡಲಾಗಿದ್ದು, ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಈ ವೇಳೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಉದ್ವಿಗ್ನ ಘಟನೆ ಸಂಭವಿಸಿದೆ.

ಒಳ ಮೀಸಲಾತಿ ಜಾರಿ ಮಾಡಿ ತದನಂತರ 56,000 ಹುದ್ದೆಗಳನ್ನ ಭರ್ತಿ ಮಾಡುವಂತೆ ಒತ್ತಾಯಿಸಿ ಒಳ ಮೀಸಲಾತಿ ಐಕ್ಯ ಹೋರಾಟ ಜಿಲ್ಲಾ ಸಮಿತಿ ವತಿಯಿಂದ ಕರೆ ನೀಡಲಾಗಿದ್ದ ರಾಯಚೂರು ಬಂದ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಜಹರಾಬಾದ್ ನಿವಾಸಿ ಭರತ್ ಎಂಬ ಯುವಕ ಆಕ್ರೋಶ ವ್ಯಕ್ತಪಡಿಸಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದನು. ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೆ ವಿಳಂಬ ಮಾಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಆತ, ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಪ್ರಯತ್ನಿಸಿದನು.

ಆದರೆ ಸ್ಥಳದಲ್ಲಿದ್ದ ಇತರ ಹೋರಾಟಗಾರರು ಹಾಗೂ ಸಾರ್ವಜನಿಕರು ತಕ್ಷಣವೇ ಯುವಕನನ್ನು ಹಿಡಿದು ತಡೆದಿದ್ದಾರೆ. ಬಳಿಕ ಪರಿಸ್ಥಿತಿ ಗಂಭೀರವಾಗುವ ಮುನ್ನವೇ ಆತನನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಲಾಯಿತು. ಘಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ಪ್ರತಿಭಟನೆ ವೇಳೆ ಯಾವುದೇ ಅನಾಹುತ ಸಂಭವಿಸದಂತೆ ಅಧಿಕಾರಿಗಳು ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST