Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಉಡುಪಿ: ಮಾನವೀಯತೆ ಮತ್ತು ಸಾಮರಸ್ಯಕ್ಕೆ ಸಾಕ್ಷಿಯಾದ ಅಪರೂಪದ ಘಟನೆ

ಉಡುಪಿ: ಧರ್ಮಸಾಮರಸ್ಯಕ್ಕೆ ಸಾಕ್ಷಿಯಾಗುವ ಅಪರೂಪದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. 35 ವರ್ಷಗಳ ಹಿಂದೆ ಸರ್ಕಾರದಿಂದ ಮಂಜೂರಾಗಿದ್ದ ನಿವೇಶನದ ಹಕ್ಕು ಸಿಗದೇ ಸಂಕಷ್ಟದಲ್ಲಿದ್ದ ಬಡ ಹಿಂದೂ ವಿಧವಾ ಮಹಿಳೆಯ ಪರವಾಗಿ ನೆರೆಮನೆಯ ಮುಸ್ಲಿಂ ಮಹಿಳೆಯರು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಳಿ ನೆರವು ಯಾಚಿಸಿದ್ದಾರೆ.

ಉಡುಪಿ ತಾಲೂಕಿನ 80 ಬಡಗಬೆಟ್ಟು ನಿವಾಸಿ ಗಿರಿಜಾ ಶೆಟ್ಟಿಗಾರ್ ಹಲವು ವರ್ಷಗಳ ಹಿಂದೆ ಗಂಡನನ್ನು ಕಳೆದುಕೊಂಡಿದ್ದು, ಒಬ್ಬಂಟಿಯಾಗಿ ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುತ್ತಿದ್ದಾರೆ. 1989ರಲ್ಲಿ ಭೂರಹಿತರಿಗೆ ಸರ್ಕಾರ ವಿತರಿಸಿದ್ದ ವಸತಿ ಯೋಜನೆಯಡಿ ಅವರಿಗೆ 5 ಸೆಂಟ್ಸ್ ಭೂಮಿ ಮಂಜೂರಾಗಿತ್ತು. ಸರ್ಕಾರ ಹಕ್ಕುಪತ್ರವನ್ನೂ ನೀಡಿತ್ತು. ಆದರೆ ಬಳಿಕ ಆ ಜಾಗ ರಕ್ಷಿತ ಅರಣ್ಯ ಪ್ರದೇಶಕ್ಕೆ ಸೇರಿದೆ ಎಂದು ಅರಣ್ಯ ಇಲಾಖೆ ಆಕ್ಷೇಪ ವ್ಯಕ್ತಪಡಿಸಿ, ಜಾಗದ ವಾಸ್ತವ್ಯಕ್ಕೆ ಅವಕಾಶ ನೀಡಿರಲಿಲ್ಲ.

ಹೀಗಾಗಿ ಹಕ್ಕುಪತ್ರ ಇದ್ದರೂ ಮಹಿಳೆಗೆ ತನ್ನದೇ ಜಾಗದಲ್ಲಿ ಮನೆ ಕಟ್ಟಿಕೊಳ್ಳಲು ಸಾಧ್ಯವಾಗಿರಲಿಲ್ಲ. ಬಡತನದಿಂದ ಕೂಲಿ ಕೆಲಸ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುತ್ತಿದ್ದರು.

ಈ ವೇಳೆ ನೆರೆಮನೆಯ ಸಲಾಹುದ್ದೀನ್ ಕುಟುಂಬಸ್ಥರು ಮಹಿಳೆಯ ನೆರವಿಗೆ ಬಂದಿದ್ದಾರೆ. ಜಾಗದ ವಾಸ್ತವ್ಯ ಸಿಗುವಂತೆ ಹಲವು ಸರ್ಕಾರಿ ಕಚೇರಿಗಳಿಗೆ ಕರೆದುಕೊಂಡು ಹೋಗಿ ಅಧಿಕಾರಿಗಳ ಗಮನ ಸೆಳೆದಿದ್ದಾರೆ. ಆದರೂ ಸಮಸ್ಯೆ ಪರಿಹಾರವಾಗಿರಲಿಲ್ಲ.

ಈ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿಗೆ ಭೇಟಿ ನೀಡಿದ್ದ ವೇಳೆ ಇಬ್ಬರು ಮುಸ್ಲಿಂ ಮಹಿಳೆಯರು ಗಿರಿಜಾ ಪರವಾಗಿ ಸಚಿವರನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಿದ್ದಾರೆ. “ನಮಗೇನೂ ಬೇಡ, ಆ ಮಹಿಳೆಗೆ ಸಹಾಯ ಮಾಡಿ. ಜಾಗ ಇದ್ದರೂ ಮನೆ ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ಮನವಿ ಮಾಡಿದ್ದಾರೆ.

ಮನವಿಗೆ ಸ್ಪಂದಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, “ಇದು ನಮ್ಮ ಭಾರತದ ಸೌಂದರ್ಯ. ಬಡ ಹಿಂದೂ ಮಹಿಳೆಯ ಪರವಾಗಿ ಮುಸ್ಲಿಂ ಮಹಿಳೆಯರು ಕಣ್ಣೀರು ಹಾಕುತ್ತಿದ್ದಾರೆ. ಇದು ನಿಜವಾದ ಮಾನವೀಯತೆ” ಎಂದು ಹೇಳಿದ್ದಾರೆ.

ಅದೇ ವೇಳೆ ಮಹಿಳೆಯ ಪರವಾಗಿ ಭೂಮಿ ವಾಸ್ತವ್ಯ ಸಮಸ್ಯೆ ಪರಿಹರಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಗನ ಕೊಲೆಯ ಸೇಡು: ರಣಚಂಡಿಯಾದ ಹೆತ್ತವಳು! ರಕ್ತಕ್ಕೆ ರಕ್ತವೆಂದು 12 ವರ್ಷಗಳ ಬಳಿಕ ಮುಹೂರ್ತ ಇಟ್ಟ ತಾಯಿ!₹281.48 ಕೋಟಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ; ಸರ್ಕಾರದ ತನಿಖೆಗೆ ಆಗ್ರಹಫ್ರೀಡಂ ಹಬ್ಬದಲ್ಲಿ ‘ಮೋದಿ ಮೋದಿ’ ಘೋಷಣೆ; ಡಿಕೆಶಿ ಮಾತಿನಲ್ಲೇ ಜನರಿಗೆ ಟಾಂಗ್ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ ದಂಡಿನ ಆಯ್ಕೆ ಮಾಡುವಂತೆ ಸಿದ್ದು ತುಮಕೂರು ಆಗ್ರಹನಕಲಿ ಎನ್‌ಕೌಂಟರ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ: ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿಹಳಿಸಗರ ಸರ್ಕಾರಿ ಶಾಲೆಯ ದುಸ್ಥಿತಿ: ಪುಟಾಣಿಗಳ ಜೀವದೊಂದಿಗೆ ಚೆಲ್ಲಾಟ; ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪದುಗೃಹ ಸಚಿವರ ಘೋಷಣೆಗೆ ಸವಾಲೇ? ಶಹಾಪುರದಲ್ಲಿ ಮತ್ತೆ ಜೋರಾದ ಅಕ್ರಮ ಮರಳು ಸಾಗಾಟಒಂದು ವಾರದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿ: ಇಲ್ಲದಿದ್ದರೆ ಬೃಹತ್ ಪ್ರತಿಭಟನೆ – ಕರ್ನಾಟಕ ಪ್ರಾಂತ ರೈತ ಸಂಘ ಎಚ್ಚರಿಕೆಕೆನಾಲ್ ಒಡೆದು ಸಾವಿರಾರು ಲೀಟರ್ ನೀರು ಪೋಲು: ರೈತರ ಜಮೀನು ಜಲಾವೃತ, ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪದ ಆರೋಪನಾರಾಯಣಪುರ ಬಲದಂಡೆ ಕಾಲುವೆ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ: ತಕ್ಷಣ ನಿರ್ವಹಣೆಗೆ ರೈತ ಸಂಘ ಆಗ್ರಹ