E-PAPER
17 Nov 2026, 05:22:32 PM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಉಗಾರ ಖುರ್ದ್‌ನಲ್ಲಿ ಅನಧಿಕೃತ ಎಥನಾಲ್ ಘಟಕ ತೆರವಿಗೆ ಆಗ್ರಹ:

ಬೆಳಗಾವಿ-05: ಕಾಗವಾಡ ತಾಲೂಕಿನ ಉಗಾರ ಖುರ್ದ್ ಪಟ್ಟಣದ ಮಧ್ಯಭಾಗದಲ್ಲಿರುವ ದಿ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಜಮೀನಿನಲ್ಲಿರುವ ಅನಧಿಕೃತ ಎಥನಾಲ್ ಘಟಕ, ಅಪಾಯಕಾರಿ ಸಂಗ್ರಹಣಾ ಟ್ಯಾಂಕ್‌ಗಳು ಹಾಗೂ ಜಲ, ವಾಯು ಮತ್ತು ಶಬ್ದ ಮಾಲಿನ್ಯ ತಡೆಗೆ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಾರ್ವಜನಿಕ ಹಿತರಕ್ಷಣಾ ಹೋರಾಟಗಾರರು ಜಿಲ್ಲಾಧಿಕಾರಿಗಳಿಗೆ ಉಪವಾಸ ಸತ್ಯಾಗ್ರಹದ ಮುನ್ನೆಚ್ಚರಿಕೆ ನೋಟಿಸ್ ಸಲ್ಲಿಸಿದ್ದಾರೆ.

ಯೋಗೇಶ ಮು. ಕುಂಬಾರ, ಸುನೀಲ್ ವಿಠಲ ಉನ್ನಾಳ, ಚಂದ್ರಶೇಖರ್ ಘುಳಪ್ಪನವರ ಹಾಗೂ ಮಹೇಶ್ ಮೆಟ್ಟರಿ ಅವರು ಸಲ್ಲಿಸಿರುವ ಮನವಿಯಲ್ಲಿ, ಉಗಾರ ಖುರ್ದ್ ಪಟ್ಟಣದ ಜನನಿಬಿಡ ಪ್ರದೇಶದಲ್ಲಿರುವ ಸರ್ವೆ ಸಂಖ್ಯೆ 267/1 ಹಾಗೂ 267/2ರಲ್ಲಿ ಯಾವುದೇ ಅಗತ್ಯ ಸುರಕ್ಷತಾ ನಿಯಮಗಳನ್ನು ಪಾಲಿಸದೇ ಅನಧಿಕೃತವಾಗಿ ಎಥನಾಲ್ ಘಟಕ ಹಾಗೂ ಸುಮಾರು 22,818 ಕೆಎಲ್ ಸಾಮರ್ಥ್ಯದ ಅಪಾಯಕಾರಿ ಪೆಟ್ರೋಲಿಯಂ ಸಂಗ್ರಹಣಾ ಟ್ಯಾಂಕ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಮನವಿಯಲ್ಲಿ, ಈ ಘಟಕದಿಂದ ಕೃಷ್ಣಾ ನದಿಗೆ ಹಾಗೂ ಕೃಷಿ ಭೂಮಿಗಳಿಗೆ ಕಲುಷಿತ ನೀರು ಹರಿಯುತ್ತಿರುವುದರ ಜೊತೆಗೆ ಕಪ್ಪು ಹೊಗೆ, ದುರ್ವಾಸನೆ ಹಾಗೂ ತೀವ್ರ ಶಬ್ದ ಮಾಲಿನ್ಯ ಉಂಟಾಗಿ ಸ್ಥಳೀಯ ನಿವಾಸಿಗಳು, ಮಕ್ಕಳು ಮತ್ತು ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಉಲ್ಲೇಖಿಸಲಾಗಿದೆ.
ಈ ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (KSPCB) ಚಿಕ್ಕೋಡಿ ಪ್ರಾದೇಶಿಕ ಕಚೇರಿ, ಬೆಂಗಳೂರು ಕೇಂದ್ರ ಕಚೇರಿ, ಜಿಲ್ಲಾಧಿಕಾರಿಗಳು, ಉಗಾರ ಖುರ್ದ್ ಪುರಸಭೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಸೇರಿದಂತೆ ವಿವಿಧ ಇಲಾಖೆಗಳಿಗೆ ಹಲವು ಬಾರಿ ದೂರು ಸಲ್ಲಿಸಲಾಗಿದ್ದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಹೋರಾಟಗಾರರು ದೂರಿದ್ದಾರೆ.
ಇದಲ್ಲದೆ, KSPCB ಉನ್ನತ ಮಟ್ಟದ ಜಾರಿ ಸಮಿತಿ (SLEC) ಪರಿಶೀಲನಾ ವರದಿಗಳಲ್ಲಿಯೂ ಉಲ್ಲಂಘನೆಗಳು ದೃಢಪಟ್ಟಿದ್ದು, ಕಾರ್ಖಾನೆಯ Consent for Operation (CFO) ಅವಧಿಯೂ 2026ರ ಜೂನ್ 30ರಂದು ಮುಕ್ತಾಯಗೊಂಡಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಏಳು ದಿನಗಳ ಗಡುವು
ಮನವಿ ಸಲ್ಲಿಸಿದ ದಿನಾಂಕದಿಂದ ಏಳು ದಿನಗಳೊಳಗೆ ಅನಧಿಕೃತ ಎಥನಾಲ್ ಘಟಕ ಹಾಗೂ ಅಪಾಯಕಾರಿ ಸಂಗ್ರಹಣಾ ಟ್ಯಾಂಕ್‌ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಜಲ ಹಾಗೂ ವಾಯು ಮಾಲಿನ್ಯ ನಿಯಂತ್ರಣ ಕಾಯ್ದೆಗಳಡಿ ಕಾರ್ಖಾನೆಯ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಆದೇಶಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಕ್ರಮ ಕೈಗೊಳ್ಳದಿದ್ದರೆ ಉಪವಾಸ ಸತ್ಯಾಗ್ರಹ
ನಿಗದಿತ ಏಳು ದಿನಗಳ ಗಡುವಿನೊಳಗೆ ಯಾವುದೇ ಕ್ರಮ ಕೈಗೊಳ್ಳದಿದ್ದಲ್ಲಿ, ಎಂಟನೇ ದಿನದಿಂದ ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಯೋಗೇಶ ಮು. ಕುಂಬಾರ, ಸುನೀಲ್ ಉನ್ನಾಳ, ಚಂದ್ರಶೇಖರ್ ಘುಳಪ್ಪನವರ ಹಾಗೂ ಮಹೇಶ್ ಮೆಟ್ಟರಿ ಅವರು ಶಾಂತಿಯುತ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಉಪವಾಸ ಸತ್ಯಾಗ್ರಹದ ವೇಳೆ ಆರೋಗ್ಯ ಅಥವಾ ಜೀವಕ್ಕೆ ಯಾವುದೇ ಅಪಾಯ ಸಂಭವಿಸಿದರೆ ಅದರ ಸಂಪೂರ್ಣ ಹೊಣೆಗಾರಿಕೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದ ಮೇಲಿದೆ ಎಂದು ಮನವಿಯಲ್ಲಿ ಸ್ಪಷ್ಟಪಡಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ಪ್ರವೇಶ ಮತ್ತು ಅಭಿಮುಖೀಕರಣ ಕಾರ್ಯಕ್ರಮವೀರ ವನಿತೆ ಒನಕೆ ಓಬವ್ವ ಜಯಂತ್ಯೋತ್ಸವ ಕಾರ್ಯಕ್ರಮ - 2026ಮಂಡೋಳ್ಳಿಯಲ್ಲಿ ₹1.70 ಕೋಟಿ ವೆಚ್ಚದಲ್ಲಿ ಶ್ರೀ ಮಾರುತಿ ದೇವಸ್ಥಾನ ನಿರ್ಮಾಣ