LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಲ್ಟ್ರಾವಯೊಲೆಟ್‌ ಇ.ವಿ.ಮೋಟಾರ್‌ ಸೈಕಲ್‌ ಸೆ.24ರಂದು ರಫ್ತಿಗೆ ಚಾಲನೆ

ಬೆಂಗಳೂರು: ಉದ್ಯಮಶೀಲ ಕನ್ನಡಿಗರು ಸೇರಿಕೊಂಡು ಸ್ಥಾಪಿಸಿರುವ ಅಲ್ಟ್ರಾವಯೊಲೆಟ್‌ ಕಂಪನಿಯು ತಯಾರಿಸುವ ವಿದ್ಯುತ್‌ ಚಾಲಿತ ಮೋಟಾರು ಸೈಕಲ್ಲುಗಳನ್ನು ಯೂರೋಪಿನ ಹಲವು ರಾಷ್ಟ್ರಗಳಿಗೆ ರಫ್ತು ಮಾಡುವ ಕಾರ್ಯಕ್ರಮಕ್ಕೆ ಸೆ.24ರಂದು ಚಾಲನೆ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ʻನಮ್ಮವರ ಈ ಸಾಹಸವನ್ನು ಉತ್ತೇಜಿಸುವುದು ನಮ್ಮ ಕರ್ತವ್ಯವಾಗಿದೆ. ಮುಂದುವರಿದ ರಾಷ್ಟ್ರಗಳಿಗೆ ಎಫ್77-ಸ್ಪೋರ್ಟ್ಸ್‌ ಸ್ತರದ ಇ.ವಿ. ಮೋಟಾರ್‌ ಸೈಕಲ್ಲುಗಳ ರಫ್ತು ಭಾರತದಿಂದ ಇದೇ ಮೊಟ್ಟಮೊದಲ ವಿಕ್ರಮವಾಗಿದೆ. ಅಲ್ಟ್ರಾವಯೊಲೆಟ್‌ ತಯಾರಿತ ಮೋಟಾರ್‌ ಸೈಕಲ್ಲುಗಳನ್ನು ಯೂರೋಪ್‌ ಖಂಡದ ಜರ್ಮನಿ, ಇಟಲಿ, ಟರ್ಕಿ ಮತ್ತು ಸ್ಪೇನ್‌ ರಾಷ್ಟ್ರಗಳಿಗೆ ರಫ್ತು ಮಾಡಲಾಗುವುದು. ಈ ವಾಹನಗಳನ್ನು ಜಿಗಣಿಯಲ್ಲಿರುವ ಉತ್ಪಾದನಾ ಘಟಕದಲ್ಲಿ ತಯಾರಿಸಲಾಗಿದೆʼ ಎಂದಿದ್ದಾರೆ.

ಈ ಮೋಟಾರ್‌ ಸೈಕಲ್ಲುಗಳ ಬೆಲೆ 2.99 ಲಕ್ಷ ರೂ.ಗಳಾಗಿದ್ದು ಈಗಾಗಲೇ ಸ್ಥಳೀಯವಾಗಿಯೂ ಲಭ್ಯವಿದೆ. ಒಂದು ಸಲ ಚಾರ್ಜ್‌ ಮಾಡಿದರೆ 323 ಕಿ.ಮೀ. ಚಲಾಯಿಸಬಹುದು. ಜತೆಗೆ ಯುಎನ್38.3 ದರ್ಜೆಯ ಉತ್ಕೃಷ್ಟ ಬ್ಯಾಟರಿ ಇದರಲ್ಲಿ ಇರಲಿದ್ದು, ಇದು ಎ1 ಕ್ಯಾಟಗರಿಗೆ ಸೇರಿದೆ. ಈ ಮೋಟಾರ್‌ ಸೈಕಲ್ಲುಗಳ ರಫ್ತು ವಹಿವಾಟಿನಿಂದ ರಾಜ್ಯ ಮತ್ತು ದೇಶದ ಆರ್ಥಿಕತೆಗೆ ಬಲಬರಲಿದೆ ಎಂದು ಅವರು ವಿವರಿಸಿದ್ದಾರೆ.

ದೊಡ್ಡ ಪ್ರಮಾಣದ ಉತ್ಪಾದನಾ ಘಟಕ ಸ್ಥಾಪಿಸಲು ಕೈಗಾರಿಕಾ ನಿವೇಶನ ಕೊಡಲಾಗುವುದು. ಯಾವ ಜಿಲ್ಲೆಯಾದರೂ ಪರವಾಗಿಲ್ಲ. ವಿಜಯಪುರದಲ್ಲಿ ಉದ್ಯಮ ಸ್ಥಾಪಿಸಿದರೂ ಬೆಂಬಲ ನೀಡಲಾಗುವುದು ಎಂದು ಸಚಿವರು ಹೇಳಿದರು.

ಅಲ್ಟ್ರಾವಯೊಲೆಟ್‌ ಕಂಪನಿಯ ಪರವಾಗಿ ಕಂಪನಿಯ ಸಹ ಸಂಸ್ಥಾಪಕ ಮತ್ತು ನಿರ್ದೇಶಕ ನೀರಜ್‌ ರಾಜಮೋಹನ್‌, ಸಹಾಯಕ ಉಪಾಧ್ಯಕ್ಷ ಧೀರಜ್ ಶೆಟ್ಟಿ ಅವರು ಸಚಿವರಿಗೆ ಇ.ವಿ. ಮೋಟಾರ್‌ ಸೈಕಲ್ಲನ್ನು ತೋರಿಸಿ, ಅದರ ವೈಶಿಷ್ಟ್ಯಗಳನ್ನು ವಿವರಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ: ಉದ್ಯಾನವನ ಆಟದ ಮೈದಾನ ಸ್ವಚ್ಛಜಿಬಿಎಯಿಂದ ಬೀದಿ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಯಶಸ್ವಿನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂ