Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಇಂದು ಕೇಂದ್ರ ಬಜೆಟ್‌

ನವದೆಹಲಿ: ಭೌಗೋಳಿಕ ರಾಜಕೀಯ ಅನಿಶ್ಚಿತತೆ, ಬಂಡವಾಳದ ಹೊರ ಹರಿವು, ಅಮೆರಿಕದ ಸುಂಕ ಹೇರಿಕೆಯಿಂದ ಭಾರತದ ಅರ್ಥ ವ್ಯವಸ್ಥೆಯ ಮೇಲೆ ಪರಿಣಾಮ ಬೀರದಂತೆ ಆರ್ಥಿಕ ಸ್ಥಿರತೆ ಮತ್ತು ಅಭಿವೃದ್ಧಿ ಮಧ್ಯೆ ಸಮನ್ವಯ ಕಾಯ್ದುಕೊಳ್ಳುವ ಉಪಕ್ರಮಗಳನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026–27ನೇ ಸಾಲಿನ ಬಜೆಟ್‌ನಲ್ಲಿ ಪ್ರಕಟಿಸುವ ಸಾಧ್ಯತೆಗಳಿವೆ.

ದೇಶದ ಒಟ್ಟು ಆಂತರಿಕ ಉತ್ಪನ್ನದ (ಜಿಡಿಪಿ) ಗಾತ್ರವನ್ನೇ ಕೇಂದ್ರ ಸರ್ಕಾರ ಅಭಿವೃದ್ಧಿಯ ಮಾನದಂಡವಾಗಿ ಬಿಂಬಿಸಿಕೊಳ್ಳುತ್ತಿದೆ ಎಂಬ ವಿರೋಧ ಪಕ್ಷಗಳ ಟೀಕೆಗಳ ನಡುವೆಯೇ, ಸೀತಾರಾಮನ್‌ ಒಂಬತ್ತನೆಯ ಬಾರಿಗೆ ಬಜೆಟ್‌ ಮಂಡಿಸಲು ಸಿದ್ಧರಾಗಿದ್ದಾರೆ.

ಆರ್‌ಬಿಐ ರೆಪೊ ದರ ಇಳಿಕೆ ಮಾಡಿರುವುದು, ಆದಾಯ ತೆರಿಗೆ, ಸರಕು ಮತ್ತು ಸೇವಾ ತೆರಿಗೆಯನ್ನು (ಜಿಎಸ್‌ಟಿ) ಕಡಿತ ಮಾಡಿರುವುದು ಈಗಾಗಲೇ ದೇಶದ ಆರ್ಥಿಕ ಬೆಳವಣಿಗೆಯ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ. ಹಣದುಬ್ಬರವೂ ಇಳಿಕೆ ಕಂಡಿದೆ. ಅಮೆರಿಕವು ಶೇಕಡ 50ರಷ್ಟು ಪ್ರತೀಕಾರದ ಸುಂಕ ವಿಧಿಸಿದರೂ ಭಾರತವು ಪ್ರಗತಿ ದರದಲ್ಲಿ ‘ಸ್ಥಿರತೆ’ ಕಾಯ್ದುಕೊಂಡಿದ್ದು ಇದೇ ಕಾರಣಕ್ಕೆ ಎನ್ನುತ್ತಾರೆ ಆರ್ಥಿಕ ವಿಶ್ಲೇಷಕರು.

ಈ ಹಂತದಲ್ಲಿ ಜಾಗತಿಕ ವ್ಯಾಪಾರ ಅಸ್ಥಿರತೆ, ಚಿನ್ನ ಬೆಳ್ಳಿ ಧಾರಣೆಯಲ್ಲಿ ಅಪಾಯಕಾರಿ ಏರಿಕೆ, ಡಾಲರ್‌ ಎದುರು ರೂಪಾಯಿ ವಿನಿಮಯ ಮೌಲ್ಯ ಕುಸಿತ ಮತ್ತಿತರರ ಸವಾಲುಗಳನ್ನು ಮೆಟ್ಟಿ ನಿಲ್ಲಲು ಬೇಕಿರುವ ಕ್ರಮಗಳು ಬಜೆಟ್‌ನಲ್ಲಿ ಘೋಷಣೆಯಾಗುವ ಸಾಧ್ಯತೆಗಳಿವೆ.

ದೇಶೀಯ ಮಟ್ಟದಲ್ಲಿ ತಯಾರಿಕೆಯನ್ನು ಹೆಚ್ಚಿಸಿ ಬಳಕೆಯನ್ನು ಪ್ರೋತ್ಸಾಹಿಸಲು ಸರ್ಕಾರ ಕ್ರಮ ವಹಿಸಲಿದೆ. ಮೂಲಸೌಕರ್ಯ ವಲಯದಲ್ಲಿ ಹೂಡಿಕೆ ಹೆಚ್ಚಿಸುವುದರ ಜತೆಯಲ್ಲೇ, ವಿತ್ತೀಯ ಕೊರತೆ ಹೆಚ್ಚದಂತೆ ನೋಡಿಕೊಳ್ಳಲೂ ಗಮನ ಹರಿಸುವ ಸಾಧ್ಯತೆಗಳಿವೆ.

ಮೊರಾರ್ಜಿ ದಾಖಲೆ ಸಮೀಪಕ್ಕೆ ನಿರ್ಮಲಾ
ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರು 10 ಬಾರಿ ಬಜೆಟ್ ಮಂಡಿಸಿದ್ದರು. ಅವರ ದಾಖಲೆಯ ಸಮೀಪಕ್ಕೆ ನಿರ್ಮಲಾ ಸೀತಾರಾಮನ್ ಬಂದಿದ್ದಾರೆ.

ಬಜೆಟ್‌ ಭಾನುವಾರ ಮಂಡನೆ ಆಗುತ್ತಿರುವುದು ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದೇ ಮೊದಲನೆಯ ಬಾರಿ ಆಗಿದೆ. 1999ರ ಫೆಬ್ರುವರಿ 28ರಂದು ಅಂದಿನ ಹಣಕಾಸು ಸಚಿವರಾಗಿದ್ದ ಯಶವಂತ ಸಿನ್ಹಾ ಅವರು ಬಜೆಟ್‌ ಮಂಡಿಸಬೇಕಿತ್ತು. ಆದರೆ, ಅಂದು ಭಾನುವಾರವಾದ್ದರಿಂದ, ಒಂದು ದಿನ ಮುಂಚಿತವಾಗಿ ಫೆಬ್ರುವರಿ 27ರಂದು ಅವರು ಬಜೆಟ್‌ ಮಂಡಿಸಿದರು.

ರಾಜ್ಯಗಳಿಗೆ ಏನು ಸಿಗಲಿದೆ?
16ನೇ ಹಣಕಾಸು ಆಯೋಗದ ಶಿಫಾರಸುಗಳ ಅನುಷ್ಠಾನವನ್ನು ಹಣಕಾಸು ಸಚಿವರು ಬಜೆಟ್‌ನಲ್ಲಿ ಘೋಷಿಸುವುದರಿಂದ ರಾಜ್ಯಗಳು ತಮ್ಮ ಪಾಲಿಗಾಗಿ ಕಾತರದಿಂದ ಕಾಯುತ್ತಿವೆ. ಕೇಂದ್ರವು ಸಂಗ್ರಹಿಸಿದ ತೆರಿಗೆ ಆದಾಯದಲ್ಲಿ ರಾಜ್ಯಗಳ ಪಾಲು ಈ ಪಾಲನ್ನು ರಾಜ್ಯಗಳಿಗೆ ವಿತರಿಸುವುದು ಮತ್ತು ಐದು ವರ್ಷಗಳ ಅವಧಿಗೆ (2026–27 ರಿಂದ 2030–31ರವರೆಗೆ) ವಿಶೇಷ ಅನುದಾನವನ್ನು ಹಣಕಾಸು ಆಯೋಗವು ಶಿಫಾರಸು ಮಾಡುತ್ತದೆ.
2030ರ ವೇಳೆ ಮೂರನೇ ದೈತ್ಯ ಆರ್ಥಿಕತೆ
ಭಾರತವು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ. ಸದ್ಯ ವಿಶ್ವದ ನಾಲ್ಕನೆಯ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆದಿರುವ ಭಾರತ 2030ರ ವೇಳೆಗೆ ಜಪಾನನ್ನು ಹಿಂದಿಕ್ಕಿ ವಿಶ್ವದ ಮೂರನೆಯ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಗುರುವಾರ ಸಂಸತ್ತಿನಲ್ಲಿ ಮಂಡಿಸಲಾದ ಆರ್ಥಿಕ ಸಮೀಕ್ಷಾ ವರದಿಯಲ್ಲಿ ಮುಂದಿನ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆ ಶೇ 6.8ರಿಂದ ಶೇ 7.2ರ ಮಟ್ಟದಲ್ಲಿ ಇರಲಿದೆ ಎಂದು ಅಂದಾಜು ಮಾಡಲಾಗಿದೆ ಎಂದು ತಿಳಿಸಿದೆ.

ಪರಿಷ್ಕರಿಸುತ್ತದೆಯೇ?
ಬಜೆಟ್‌ ಮಂಡನೆಗೆ ಎರಡು ದಿನ ಬಾಕಿ ಇದ್ದಾಗಲೇ ಕೇಂದ್ರ ಸರ್ಕಾರ ಜಿಡಿಪಿ ದರ ಮತ್ತು ಗ್ರಾಹಕ ಬೆಲೆ ಸೂಚ್ಯಂಕವನ್ನು (ಸಿಪಿಐ) ಪರಿಷ್ಕರಿಸಿದಂತೆ ಬಜೆಟ್ ಅಂಕಿ ಅಂಶಗಳನ್ನೂ ಪರಿಷ್ಕರಿಸುತ್ತದೆಯೇ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ ಪ್ರಶ್ನಿಸಿದ್ದಾರೆ. ‘ಬಜೆಟ್‌ ಪೂರ್ವದಲ್ಲಿನ ಜಿಡಿಪಿ ಪರಿಷ್ಕರಣೆಯು ನೀತಿ ನಿರೂಪಣೆಯ ಮೇಲೆ ಕೆಟ್ಟದಾದ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ