LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದೇಶದ ಆರೋಗ್ಯ ಕ್ಷೇತ್ರದಲ್ಲಿ ಕಳೆದ 11 ವರ್ಷಗಳಲ್ಲಿ ಮಹತ್ವದ ಪರಿವರ್ತನೆ: ಕೇಂದ್ರ ಸಚಿವ ಅಮಿತ್ ಶಾ

 

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯಂತೆ ದೇಶದ ಆರೋಗ್ಯ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಕ್ರಾಂತಿಕಾರಕ ಹೆಜ್ಜೆ ಇಟ್ಟಿದ್ದು, ಕಳೆದ 11 ವರ್ಷಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ ತರಲಾಗಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ.

ಬೆಂಗಳೂರು ಉತ್ತರ ತಾಲ್ಲೂಕಿನ ನಗರೂರಿನ ಬಿಜಿಎಸ್ ಎಂಸಿಎಚ್ ಆವರಣದಲ್ಲಿ ಆದಿಚುಚನಗಿರಿ ವಿಶ್ವವಿದ್ಯಾಲಯ, ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ವಿಶ್ವವಿದ್ಯಾಲಯದ ಕುಲಪತಿಗಳೂ ಆಗಿರುವ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಚಿತ್ರದುರ್ಗ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ವಿವಿ ಕ್ಯಾಂಪಸ್ ಉದ್ಘಾಟಿಸಿ ಮಾತನಾಡಿದರು.

ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ 26 ವರ್ಷಗಳ ಹಿಂದೆ ಬಡವರಿಗೆ ಆರೋಗ್ಯ ಚಿಕಿತ್ಸಾ ವೆಚ್ಚ ಭರಿಸುವುದು ಬಹುದೊಡ್ಡ ಸವಾಲು ಎಂದು ಚಿಂತಿತರಾಗಿದ್ದರು. ಆ ಸವಾಲನ್ನು ಇದೀಗ ಕೇಂದ್ರ ಸರ್ಕಾರ ಸಾಕಾರಗೊಳಿಸಿದೆ. 60 ಕೋಟಿ ಜನರಿಗೆ ಪ್ರಧಾನಮಂತ್ರಿ ಆಯುಷ್ಮಾನ್ ಆರೋಗ್ಯ ವಿಮಾ ಯೋಜನೆಯಡಿ ಪ್ರತಿವರ್ಷ ವೆಚ್ಚ ಐದು ಲಕ್ಷ ರೂ ಮೊತ್ತದಷ್ಟು ಉಚಿತ ಚಿಕಿತ್ಸೆ ದೊರೆಯುತ್ತಿದೆ. ಪ್ರಧಾನಮಂತ್ರಿ ಜನೌಷಧಿ ಮಳಿಗೆಗಳಲ್ಲಿ ರಿಯಾಯಿತಿ ದರದಲ್ಲಿ ಔಷಧಿಗಳನ್ನು ಒದಗಿಸುತ್ತಿದ್ದೇವೆ. ಮಗು ಗರ್ಭಾವಸ್ಥೆಯಿಂದ ಹಿಡಿದು ಬೆಳೆದುದೊಡ್ಡವರಾಗುವ ತನಕ ಮಿಷನ್ ಇಂದ್ರ ಧನುಷ್ ಸೇರಿದಂತೆ ಹಲವಾರು ಆರೋಗ್ಯ ಯೋಜನೆಗಳಡಿ ಸಮಗ್ರ ದೃಷ್ಟಿಕೋನದ ಮೂಲಕ ಆರೋಗ್ಯಪೂರ್ಣ ಸಮಾಜ ನಿರ್ಮಿಸಲಾಗುತ್ತಿದೆ ಎಂದರು.

ಯೋಗ, ಯೋಗಕ್ಷೇಮ, ಲಸಿಕೆ ನೀಡುವ ಮೂಲಕ ಆರೋಗ್ಯವಂತ ವ್ಯಕ್ತಿಗಳನ್ನು ನಿರ್ಮಿಸಲು ಒತ್ತು ನೀಡಲಾಗಿದೆ. 2014ಕ್ಕೂ ಮುನ್ನ ದೇಶದಲ್ಲಿ 7 ಏಮ್ಸ್ ಗಳಿದ್ದವು. ಇದೀಗ ಅವುಗಳ ಸಂಖ್ಯೆ 23 ಕ್ಕೆ ಏರಿಕೆಯಾಗಿದೆ. ವೈದ್ಯಕೀಯ ಕಾಲೇಜುಗಳ ಸಂಖ್ಯೆ 387 ರಿಂದ 780ಕ್ಕೆ, ವೈದ್ಯಕೀಯ ಸೀಟುಗಳ ಸಂಖ್ಯೆ 51 ಸಾವಿರದಿಂದ 1.18 ಲಕ್ಷ, ಪಿಜಿ ಸೀಟುಗಳು 31 ಸಾವಿರದಿಂದ 74 ಸಾವಿರಕ್ಕೆ ಏರಿಕೆಯಾಗಿದೆ. ಈ ಕ್ರಮಗಳಿಂದ ದೇಶದಲ್ಲಿ ನುರಿತ ವೈದ್ಯಕೀಯ ಸಿಬ್ಬಂದಿ ಪ್ರಮಾಣ ವೃದ್ದಿಸಿದೆ ಎಂದು ಹೇಳಿದರು.

ಆದಿ ಚುಂಚನಗಿರಿ ಮಠಕ್ಕೆ 1800 ವರ್ಷಗಳ ಹಿನ್ನೆಲೆಯಿದ್ದು, ಈ ಭವ್ಯ ಪರಂಪರೆಯನ್ನು ಡಾ. ನಿರ್ಮಲನಾನಂದ ನಾಥ ಸ್ವಾಮೀಜಿ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಸೇವೆ, ಶಿಕ್ಷಣ, ಸಮರ್ಪಣೆಯಂತಹ ಉನ್ನತ ಮೌಲ್ಯಗಳನ್ನು ಪರಿಪಾಲಿಸುತ್ತಿದ್ದಾರೆ. ಬಡವರಿಗೆ ಉಚಿತ ಚಿಕಿತ್ಸೆ, ಅನ್ನ, ಶಿಕ್ಷಣ, ಆರೋಗ್ಯ, ರಕ್ಷಣೆ, ಆಧ್ಯಾತ್ಮಿಕ, ಅರಣ್ಯ, ಅನುಕಂಪ, ಅನುಬಂಧ ಸೇರಿ 9 ಆಧಾರ ಸ್ತಂಭಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಸೇವಾ ಮನೋಭಾವ, ನಮ್ಮ ಸಂಸ್ಕøತಿ, ಧರ್ಮ ರಕ್ಷಣೆ ಜೊತೆಗೆ ಸಮಾಜವನ್ನು ಜೋಡಿಸುವ ಎಕತೆಯ ಕೆಲಸ ಮಾಡುತ್ತಿರುವುದು ಅತ್ಯಂತ ಶ್ಲಾಘನೀಯ. ಆಧುನಿಕ ಶಿಕ್ಷಣ ನೀಡುವ ಮೂಲಕ ಸಮಾಜ ಮತ್ತು ವಿಶ್ವದಲ್ಲಿ ಗೌರವ ಸ್ಥಾನವನ್ನು ದೊರಕಿಸಿಕೊಡುತ್ತಿದ್ದಾರೆ. ಇಲ್ಲಿ ಆತ್ಮ ಉತ್ಥಾನದ ಕೆಲಸ ನಡೆಯುತ್ತಿದ್ದು, ವೈಯಕ್ತಿಕ ಮತ್ತು ಸಮಾಜದ ಆತ್ಮ ಸುಧಾರಿಸುವ ಕಾರ್ಯಯೂ ನಿರಂತರವಾಗಿ ಸಾಗಿದೆ ಎಂದರು.

ಡಾ. ನಿರ್ಮಲಾನಂದ ಸ್ವಾಮೀಜಿ , ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಎಚ್.ಡಿ. ಕುಮಾರ ಸ್ವಾಮಿ, ಚಿತ್ರದುರ್ಗ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ, ರಾಜ್ ಕೋಠ್‍ನ ಅರ್ಶ ವಿದ್ಯಾ ಮಂದಿರದ ಜಗದ್ಗುರು ಸ್ವಾಮಿ ಪರಮಾತ್ಮಾನಂದ ಸ್ವಾಮೀಜಿ ಮಾತನಾಡಿದರು. ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ. ಸಂಸದ ಡಾ.ಕೆ. ಸುಧಾಕರ್, ಶಾಸಕರಾದ ಎಸ್.ಆರ್. ವಿಶ್ವನಾಥ್, ಎನ್. ಶ್ರೀನಿವಾಸ್, ಟ್ರಸ್ಟಿ ಡಿ. ದೇವರಾಜು, ಉಪಕುಲಪತಿ ಡಾ. ಎಂ.ಎ.ಶಂಕರ್, ರಿಜಿಸ್ಟ್ರಾರ್ ಡಾ. ಸಿ.ಕೆ. ಸುಬ್ಬರಾಯ, ಪ್ರಾಂಶುಪಾಲರಾದ ಡಾ.ಕೆ.ಎಸ್. ಗಂಗಾಧರ, ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಕೃಷ್ಣಮೂರ್ತಿ ವಿ.ಆರ್. ಮತ್ತಿತರರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026