Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಶಿಗ್ಗಾಂವಿ ಜನರಿಂದ ಅಭೂತಪೂರ್ವ ಬೆಂಬಲ: ಬಸವರಾಜ ಬೊಮ್ಮಾಯಿ

ಸುದ್ದಿಮೂಲ ವಾರ್ತೆ

ಹಾವೇರಿ,ಏ.15: ಶಿಗ್ಗಾಂವಿ ಕ್ಷೇತ್ರದಲ್ಲಿ ನನಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಹಲವಾರು ಬಾರಿ ಶಿಗ್ಗಾಂವಿ ಮತಕ್ಷೇತ್ರದ ಜನರು ಆಶೀರ್ವಾದ ಮಾಡಿ, ಬೆಂಬಲವನ್ನು ಕೊಟ್ಟಿದ್ದಾರೆ. ಈ ಬಾರಿಯೂ ಹಿಂದಿನ ದಾಖಲೆಯನ್ನು ಮುರಿದು, ಅತ್ಯಧಿಕ ಮತದಿಂದ ಆರಿಸಿ ಬರುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಶಿಗ್ಗಾಂವಿಯ ತಹಶೀಲ್ದಾರ ಕಚೇರಿಯಲ್ಲಿ 2023 ರ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಈ ತಾಲೂಕಿನ ಮತದಾರರು ಪ್ರಭುದ್ದ, ಜಾಗೃತ ಮತದಾರರಿದ್ದಾರೆ. ಈ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಮತವನ್ನು ಕ್ಷೇತ್ರದ ಜನರು ನೀಡಿದ್ದಾರೆ. ಈ ಬಾರಿ ಕಳೆದ ಬಾರಿಗಿಂತಲೂ ಹೆಚ್ಚಿನ ಅಭಿವೃದ್ಧಿ ಮಾಡಲು ಸಾಧ್ಯವಾಗಿದೆ. ಎಲ್ಲ ವರ್ಗಕ್ಕೆ ಸಮಾನವಾದ ಅಭಿವೃದ್ಧಿಗೆ ಒತ್ತು ನೀಡಿದ್ದೇವೆ ಎಂದರು.

ಹೊಸ ಕೈಗಾರಿಕೆ, ಟೈಕ್ಸ್ಟೈಲ್ ಪಾರ್ಕ್, ಐಐಟಿ, ಆಯುರ್ವೇದಿಕ ಆಸ್ಪತ್ರೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳು ಆಗಿವೆ. ಹೀಗಾಗಿ ಜನರು ಹಿಂದಿನಕ್ಕಿಂತಲೂ ಹೆಚ್ಚಿನ ಬೆಂಬಲವನ್ನು ಕೊಡುತ್ತಾರೆ. ನಮ್ಮದು ಆಡಳಿತ ಪಕ್ಷವಾಗಿರುವುದರಿಂದ ಆಕಾಂಕ್ಷಿಗಳು ಬಹಳ ಇದ್ದಾರೆ. ಹಲವು ಹಾಲಿ ಶಾಸಕರನ್ನು ಬದಲಾವಣೆ ಮಾಡಿದಾಗ ಬಂಡಾಯ ಸಹಜ. ಎರಡು ಮೂರು ದಿನಗಳಲ್ಲಿ ಎಲ್ಲವೂ ಶಮನವಾಗುತ್ತದೆ. ಸದ್ಯದಲ್ಲಿಯೇ ಈ ಕೊನೆಯ ಪಟ್ಟಿ ಬಿಡುಗಡೆಯಾಗಲಿದೆ ಎಂದರು.

ಚುನಾವಣೆ ಎಂದರೆ ಕುಸ್ತಿ ಕಣ ನನ್ನ ಕ್ಷೇತ್ರದಲ್ಲಿ ಎದುರಾಳಿ ಯಾರೇ ಬರಲಿ, ಪ್ರತಿಸ್ಪರ್ಧಿ ಗಟ್ಟಿಯಾಗಿದ್ದರೆ ಚುನಾವಣೆ ಚೆನ್ನಾಗಿ ನಡೆಯುತ್ತದೆ. ನನ್ನ ವಿಶ್ವಾಸ ನನ್ನ ಕ್ಷೇತ್ರದ ಜನರ ಮೇಲಿದೆ. ಹತ್ತು ಹಲವರು ಪೈಪೋಟಿ ಮಾಡಿದರು, ಜನರು ನನಗೆ ಬೆಂಬಲ ಕೊಡುತ್ತಾರೆ. ಏಪ್ರಿಲ್ 19 ರಂದು ಇನ್ನೊಂದು ಬಾರಿ ನಾಮಪತ್ರ ಸಲ್ಲಿಕೆ ಮಾಡುತ್ತೇನೆ. ಆಗ ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾ ಅವರು ಆಗಮಿಸಲಿದ್ದಾರೆ ಎಂದರು.

ನೆಹರು ಓಲೇಕಾರ ನನ್ನ ಮೇಲೆ ಆರೋಪ ಮಾಡಿದ್ದನ್ನು ಸಾಬೀತು ಮಾಡಲಿ. ನಾನು ಎಲ್ಲದಕ್ಕೂ ಸಿದ್ದನಿದ್ದೇನೆ. ಆದರೆ, ಓಲೇಕಾರ ಅವರು ಅವರ ಮೇಲಿರುವ ಆರೋಪಗಳ ಬಗ್ಗೆ ಮೊದಲು ಸ್ಪಷ್ಠೀಕರಣ ಕೊಡಲಿ ಎಂದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ