LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉಪ್ಪಾರ ಅಭಿವೃದ್ಧಿ ನಿಗಮ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತದಿಂದ 2025-26ನೇ ಸಾಲಿನ ಸಾಲ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿಲಾಗಿದೆ.

ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಹಾಗೂ ಸ್ವಾತಂತ್ರö್ಯ ಅಮೃತ ಮಹೋತ್ಸವ ಮನ್ನಡೆ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿದ್ದು, ಉಪ್ಪಾರ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ ಅಥವಾ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರಿವು ಯೋಜನೆಯಡಿ ಅಭ್ಯರ್ಥಿಯ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ.3.50/- ಲಕ್ಷಗಳು. ಸ್ವಾವಲಂಬಿ ಸಾರಥಿ ಯೋಜನೆಯಡಿ ವಯೋಮಿತಿ21 ವರ್ಷಗಳಿಂದ 45 ವರ್ಷಗಳ ಮಿತಿಯಲ್ಲಿರಬೇಕು. ವಿದೇಶಿ ವ್ಯಾಸಂಗ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ವಾರ್ಷಿಕ ವರಮಾನವು ರೂ:15.00 ಲಕ್ಷಗಳ ಮಿತಿಯಲ್ಲಿ ಇರಬೇಕು. ಸ್ನಾತಕೊತ್ತರ ಪದವೀಧರರಿಗೆ ವಿದ್ಯಾರ್ಥಿಯ ವಯಸ್ಸು 25 ಮತ್ತು ಪಿ.ಹೆಚ್.ಡಿ ಪಧವೀಧವಿದರರಿಗೆ 27 ವರ್ಷಗಳ ವಯೋಮಿತಿಯನ್ನು ನಿಗಧಿಪಡಿಸಲಾಗಿದೆ. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ.98,000/- ಮತ್ತು ನಗರ ಪ್ರದೇಶದವರಿಗೆ ರೂ.1,20,000/-ಗಳ ಮಿತಿಯೊಳಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ 33%, ವಿಕಲಚೇತನರಿಗೆ 5%,ತೃತೀಯ ಲಿಂಗಿಗಳಿಗೆ ಶೇ1% ಮೀಸಲಾತಿ ನಿಗದಿ ಮಾಡಲಾಗಿದೆ.

ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯವನ್ನು ಪಡೆಯಲು ಇಚ್ಚಿಸುವವರ ಸೇವಾಸಿಂಧು ಪೋರ್ಟಲ್   https://www.kaushalkar.com    ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಗಳಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24 ಹಾಗೂ 2024-25ನೇ ಸಾಲಿಗೆ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಜುಲೈ 7 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ನಿಗಮದ ವೆಬ್‌ಸೈಟ್  http://upparadevelopment.karnataka.gov.in     ರಲ್ಲಿ ಅಥವಾ ನಿಗಮದ ಕೇಂದ್ರ ಕಛೇರಿ ದೂರವಾಣಿ ಸಂಖ್ಯೆ 080-22252555 ಕರೆ ಮಾಡಬಹುದು. ನಿಗಮದ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಮಗದ ಕಛೇರಿಗಳಲ್ಲಿ ಪೂರ್ವಾಹ್ನ10.00ರಿಂದ ಸಂಜೆ5.30ರವರೆಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕಿ ಹೆಚ್.ಶಿಲ್ಪಾ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026