Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ದಕ್ಷಿಣ ಇರಾನ್ ಮೇಲೆ ಅಮೆರಿಕ ದಾಳಿ

ತೆಹರಾನ್‌, ಮೇ 26 : ದಕ್ಷಿಣ ಇರಾನ್‌ನಲ್ಲಿರುವ ಕ್ಷಿಪಣಿ ಉಡಾವಣಾ ತಾಣಗಳು ಹಾಗೂ ಸಮುದ್ರದಲ್ಲಿ ಗಣಿ ಅಳವಡಿಸಲು ಬಳಸಲಾಗುತ್ತಿದ್ದ ಹಡಗುಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ಪಡೆಗಳು ಭಾರೀ ದಾಳಿ ನಡೆಸಿವೆ ಎಂದು ಅಮೆರಿಕ ಮಿಲಿಟರಿ ವಕ್ತಾರರು ತಿಳಿಸಿದ್ದಾರೆ. ಈ ಕಾರ್ಯಾಚರಣೆಯನ್ನು ಅಮೆರಿಕ ಸ್ವಯಂ ರಕ್ಷಣಾತ್ಮಕ ಕ್ರಮ ಎಂದು ಸಮರ್ಥಿಸಿಕೊಂಡಿದೆ.

ದಾಳಿಗೆ ಮುನ್ನ ದಕ್ಷಿಣ ಇರಾನ್‌ನ ಪ್ರಮುಖ ಬಂದರು ನಗರವಾದ ಬಂದರ್ ಅಬ್ಬಾಸ್ ಪ್ರದೇಶದಲ್ಲಿ ಭಾರೀ ಸ್ಫೋಟಗಳ ಶಬ್ದ ಕೇಳಿಬಂದಿದ್ದಾಗಿ ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಸ್ಫೋಟಗಳಿಂದ ಕೆಲವು ಸೈನಿಕ ಮೂಲಸೌಕರ್ಯಗಳಿಗೆ ಹಾನಿಯಾಗಿರುವ ಶಂಕೆ ವ್ಯಕ್ತವಾಗಿದ್ದರೂ, ಅಧಿಕೃತವಾಗಿ ಯಾವುದೇ ಮಾಹಿತಿ ಪ್ರಕಟಿಸಲಾಗಿಲ್ಲ.

ಅಮೆರಿಕ ಸೇನೆ ಗುರಿಯಾಗಿಸಿಕೊಂಡ ಪ್ರದೇಶಗಳಲ್ಲಿ ಕ್ಷಿಪಣಿ ಉಡಾವಣಾ ವ್ಯವಸ್ಥೆಗಳು, ಶಸ್ತ್ರಾಸ್ತ್ರ ಸಂಗ್ರಹ ಕೇಂದ್ರಗಳು ಹಾಗೂ ಸಮುದ್ರದಲ್ಲಿ ಗಣಿ ಅಳವಡಿಕೆ ಕಾರ್ಯಾಚರಣೆಗೆ ಬಳಸಲಾಗುತ್ತಿದ್ದ ಹಡಗುಗಳು ಸೇರಿವೆ ಎಂದು ವರದಿಗಳು ತಿಳಿಸಿವೆ. ಮಧ್ಯಪ್ರಾಚ್ಯ ಸಮುದ್ರ ಮಾರ್ಗಗಳ ಭದ್ರತೆಗೆ ಬೆದರಿಕೆ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಅಮೆರಿಕ ಅಧಿಕಾರಿಗಳು ಹೇಳಿದ್ದಾರೆ.

ಇದೇ ವೇಳೆ ಇರಾನ್ ವಿರುದ್ಧ ನಡೆಯುತ್ತಿರುವ ಅಮೆರಿಕ–ಇಸ್ರೇಲ್ ಸಂಘರ್ಷ ತೀವ್ರಗೊಳ್ಳುತ್ತಿರುವ ನಡುವೆಯೇ, ಪರಿಸ್ಥಿತಿಯನ್ನು ಶಮನಗೊಳಿಸಲು ರಾಜತಾಂತ್ರಿಕ ಮಟ್ಟದಲ್ಲಿ ಚಟುವಟಿಕೆಗಳು ವೇಗ ಪಡೆದಿವೆ. ಟೆಹರಾನ್‌ನ ಉನ್ನತ ಮಟ್ಟದ ಅಧಿಕಾರಿಗಳ ತಂಡ ಖತರ್‌ಗೆ ತೆರಳಿದ್ದು, ಯುದ್ಧ ವಿರಾಮ ಹಾಗೂ ಉದ್ವಿಗ್ನತೆ ಕಡಿಮೆ ಮಾಡುವ ಕುರಿತು ಮಾತುಕತೆ ನಡೆಸಲಿದೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ.

ಖತರ್‌ನಲ್ಲಿ ನಡೆಯಲಿರುವ ಮಹತ್ವದ ಸಭೆಯಲ್ಲಿ ಕದನ ವಿರಾಮ ಜಾರಿಗೆ ಸಂಬಂಧಿಸಿದ ಪ್ರಸ್ತಾಪಗಳು, ಮಧ್ಯಪ್ರಾಚ್ಯದ ಪ್ರಾದೇಶಿಕ ಭದ್ರತೆ, ಇರಾನ್‌ನ ಕ್ಷಿಪಣಿ ಚಟುವಟಿಕೆಗಳು ಹಾಗೂ ಅಣು ಕಾರ್ಯಕ್ರಮ ಕುರಿತ ವಿಚಾರಗಳು ಪ್ರಮುಖವಾಗಿ ಚರ್ಚೆಯಾಗುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷಕ್ಕೆ ಅಮೆರಿಕ ನೇರವಾಗಿ ಕೈಜೋಡಿಸಿರುವ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದೆ. ಅಮೆರಿಕದ ದಾಳಿ ಹಾಗೂ ಸಮಕಾಲೀನ ರಾಜತಾಂತ್ರಿಕ ಮಾತುಕತೆಗಳು ಜಾಗತಿಕ ಮಟ್ಟದಲ್ಲಿ ತೀವ್ರ ಗಮನ ಸೆಳೆದಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ