LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕ್ಯಾಲಿಫೋರ್ನಿಯಾದಲ್ಲಿ ಅಮೆರಿಕ ನೌಕಾಪಡೆಯ ಎಫ್ -35 ಪತನ- ಪೈಲಟ್ ಅಪಾಯದಿಂದ ಪಾರು

ಸ್ಯಾಕ್ರಮೆಂಟೊ :ಅಮೆರಿಕದ ನೌಕಾಪಡೆಯ ಎಫ್ -35 ಯುದ್ಧ ವಿಮಾನವು ಬುಧವಾರ ಮಧ್ಯ ಕ್ಯಾಲಿಫೋರ್ನಿಯಾದ ಲೆಮೂರ್ ನೇವಲ್ ಏರ್ ಸ್ಟೇಷನ್ ಬಳಿ ಪತನಗೊಂಡಿದೆ. ವಾಯುನೆಲೆಯ ಅಧಿಕೃತ ಹೇಳಿಕೆಯ ಪ್ರಕಾರ, ವಿಮಾನ ಪತನದ ವೇಳೆ ಪೈಲಟ್ ಯಶಸ್ವಿಯಾಗಿ ಜಿಗಿದಿದ್ದು, ಸುರಕ್ಷಿತವಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ.

ಬುಧವಾರ ಸ್ಥಳೀಯ ಕಾಲಮಾನ ಸಂಜೆ 6:30ರ ವೇಳೆಗೆ ವಿಮಾನ ಪತನಗೊಂಡಿದೆ. ವಿಮಾನ ಪತನಗೊಂಡ ಪರಿಣಾಮ ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಕಾಣಿಸಿದೆ. ಘಟನೆಗೆ ನಿಖರ ಕಾರಣ ಏನು ಎಂಬುದನ್ನು ತನಿಖೆ ನಡೆಸಲಾಗುತ್ತಿದೆ ಎಂದು ನೌಕಾಪಡೆ ತಿಳಿಸಿದೆ.

ವಿಮಾನವು ಸ್ಟ್ರೈಕ್ ಫೈಟರ್ ಸ್ಕ್ವಾಡ್ರನ್ ವಿಎಫ್-125ಗೆ ಸೇರಿದ್ದು, ಇದನ್ನು ‘ರಫ್ ರೈಡರ್ಸ್’ ಎಂದೂ ಕರೆಯುತ್ತಾರೆ. ಈ ಸ್ಕ್ವಾಡ್ರನ್ ಫ್ಲೀಟ್ ರಿಪ್ಲೇಸ್ಮೆಂಟ್ ಸ್ಕ್ವಾಡ್ರನ್ ಆಗಿ ಕಾರ್ಯನಿರ್ವಹಿಸುತ್ತದೆ. ಜನವರಿಯಲ್ಲಿ ತರಬೇತಿ ಕಾರ್ಯಾಚರಣೆಯ ಸಮಯದಲ್ಲಿ ಅಲಾಸ್ಕಾದ ಐಲ್ಸನ್ ವಾಯುಪಡೆ ನೆಲೆಯಲ್ಲಿ ವಾಯುಪಡೆಯ F-35A ಅಪಘಾತಕ್ಕೀಡಾಯಿತು. ಆ ಘಟನೆಯಲ್ಲಿ ಕೂಡ ಪೈಲಟ್ ಸುರಕ್ಷಿತವಾಗಿ ಜಿಗಿದು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026