LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿ.ಉಮಾಪತಿಯವರಿಗೆ ವಡ್ಡರ್ಸೆ ರಘುರಾಮಶೆಟ್ಟಿ...ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

ಬೆಂಗಳೂರು.5: ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ "ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ" ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯ ಕುರಿತು ವರದಿ ,ವಿಶೇಷ ಲೇಖನಗಳ ಪ್ರಕಟಣೆಯನ್ನು ಗುರುತಿಸಿ,ಗೌರವಿಸುವ ಉದ್ದೇಶದಿಂದ ಮುಖ್ಯಮಂತ್ರಿಯವರು 2024 ರ ಆಯವ್ಯಯದಲ್ಲಿ ಹಿರಿಯ ಪತ್ರಕರ್ತ "ವಡ್ಡರ್ಸೆ ರಘುರಾಮಶೆಟ್ಟಿ" ಅವರ ಹೆಸರಿನಲ್ಲಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಘೋಷಿಸಿದ್ದರು. ನ್ಯಾ.ಅಶೋಕ ಹಿಂಚಿಗೇರಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಪ್ರಶಸ್ತಿ ಆಯ್ಕೆ ಸಮಿತಿಯು ಒಮ್ಮತದಿಂದ ಹಿರಿಯ ಪತ್ರಕರ್ತ ಡಿ.ಉಮಾಪತಿಯವರನ್ನು "ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆ ಮಾಡಿತ್ತು.ಪ್ರಶಸ್ತಿಯು 2 ಲಕ್ಷ ರೂ.ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.

*ಡಿ.ಉಮಾಪತಿ ಅವರ ಪರಿಚಯ:* ಮಾರ್ಚ್ 18,1959 ರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಜನಿಸಿದ ಡಿ ಉಮಾಪತಿ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಆಂಗ್ಲ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಬಿ.ಎ, ಮೈಸೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಎರಡನೆ ರ‍್ಯಾಂಕ್ ಪಡೆದವರು. ನ್ಯೂ ಇಂಡಿಯನ್ ಎಕ್ಸಪ್ರೆಸ್ ಸಮೂಹ ಸಂಸ್ಥೆಯ ಕನ್ನಡಪ್ರಭ, ಈ ಟಿವಿಯ ದೆಹಲಿ ಕರೆಸ್ಪಾಂಡೆಂಟ್ ಅಗಿ 27 ವರ್ಷಗಳ ಪರಿಣಾಮಕಾರಿ ವರದಿಗಳಿಂದ ಹೆಸರುಗಳಿಸಿದವರು. ಪಾರ್ಲಿಮೆಂಟ್ ವರದಿ, ಚುನಾವಣಾ ವಿಶ್ಲೇಷಣೆಗಳು , ಸುಪ್ರೀಂ ಕೋರ್ಟು ಗಳಲ್ಲಿನ ನದಿ ನೀರು ನ್ಯಾಯಾಧೀಕರಣ ವ್ಯಾಜ್ಯಗಳ, ರಾಷ್ಟ್ರಮಟ್ಟದ ರಾಜಕೀಯ ಬೆಳವಣಿಗೆಗಳು, ಮತ್ತು ವಿದೇಶಾಂಗ ಸಚಿವರ ವಿದೇಶ ಪ್ರವಾಸದ ಜೊತೆಗೂಡಿ ರಾಜತಾಂತ್ರಿಕ ವರದಿಗಾರಿಕೆಯಲ್ಲಿ ವಿಶಿಷ್ಟ ಅನುಭವ ಇವರದ್ದಾಗಿದೆ. ದೆಹಲಿಯಲ್ಲಿ ನೆಲೆಸಿರುವ ಡಿ. ಉಮಾಪತಿ ಅವರು ಆಂದೋಲನ , ರೈತ ಚಳವಳಿ, ವಿಜಯಕರ್ನಾಟಕ, ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ ಪತ್ರಿಕೆಗಳಿಗೆ ಅಂಕಣ ಬರಹಗಾರರಾಗಿಯೂ. ಪ್ರಸ್ತುತ ’ನ್ಯಾಯಪಥ(ಗೌರಿ ಮಿಡಿಯಾ)’ ಮತ್ತು ’ಈದಿನ’ ವೆಬ್ ಜರ್ನಲ್ ಸಂದರ್ಶಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ’ದೆಹಲಿ ನೋಟ’ , ’ಪದಕುಸಿಯೇ ನೆಲವಿಲ್ಲ’ ಉಮಾಪತಿ ಅವರ ಎರಡು ಮಹತ್ವದ ಕೃತಿಗಳು ಪ್ರಕಟವಾಗಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು