Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮೌಲ್ಯಗಳು ವ್ಯಕ್ತಿತ್ವ ರೂಪಿಸುತ್ತದೆ: ಕುಲಪತಿ ಸಿ.ಎಂ. ತ್ಯಾಗರಾಜ

ಬೆಳಗಾವಿ : ಪದವಿ ಶಿಕ್ಷಣ ಎಂದರೆ ಪಠ್ಯಪುಸ್ತಕದ ಜ್ಞಾನ ಕ್ಕಷ್ಟೇ ಸೀಮಿತವಲ್ಲ, ಅದೊಂದು ಕನಸನ್ನು ನನಸಾಗಿಸುವ ವೇದಿಕೆ. ಅದು ಬದುಕಿನ ದಿಕ್ಸೂಚಿ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಅವರು ಅಭಿಪ್ರಾಯಪಟ್ಟರು.

ನಗರದ ಧರ್ಮನಾಥ ಭವನದಲ್ಲಿ ಹಮ್ಮಿಕೊಂಡಿದ್ದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ 2025-26ನೇ ಸಾಲಿನ ಸಾಂಸ್ಕೃತಿಕ, ಎನ್. ಎಸ್. ಎಸ್., ಎನ್.ಸಿ.ಸಿ,. ರೆಡ್ ಕ್ರಾಸ್, ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಮಾತನಾಡಿದರು. ಶಿಕ್ಷಣದಿಂದೊಂದಿಗೆ ಸಂಸ್ಕಾರ ಸೇರಿದಾಗ ಮಾತ್ರ ವ್ಯಕ್ತಿತ್ವ ಪರಿಪೂರ್ಣವಾಗುತ್ತದೆ. ಯಾರು ಹೊಸದನ್ನು ಸೃಷ್ಟಿಸ ಬಲ್ಲರೋ ಅವರು ಸ್ಪರ್ಧಾತ್ಮಕ ಜಗತ್ತಿನಲ್ಲಿ ಉಳಿಯಬಲ್ಲರು. ಮೌಲ್ಯಗಳ ಜೊತೆಗೆ ಬಂದವರು ಮೌಲ್ಯಗಳನ್ನು ಉಳಿಸುತ್ತಾರೆ. ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ಹರಿಸಬೇಕು. ಓದು ಮಾತ್ರ ನಿಮ್ಮ ಬದುಕನ್ನು ರೂಪಿಸುತ್ತದೆ ಎಂದರು.

ಕುಲಸಚಿವ ಸಂತೋಷ ಕಾಮಗೌಡ ಅವರು ಮೊಬೈಲ್ ಇಂದ ಬದುಕು ಅರಳುವ ಬದಲು ಮುದುಡುತ್ತಿದೆ. ಸಾಧನೆಗೆ ಅಡ್ಡ ದಾರಿಯಿಲ್ಲ. ಅದು ಶಾಶ್ವತವೂ ಅಲ್ಲ. ಸಾಧನೆ ಮಾಡಲು ನಿರಂತರ ಪ್ರಯತ್ನದಿಂದ ಮಾತ್ರ ಸಾಧ್ಯ. ಗುರಿ ಇರಬೇಕು, ಗುರಿಗೆ ತಕ್ಕಂತೆ ಪ್ರಯತ್ನ ಇರಬೇಕು. ಕಲಿಕೆಯ ಸಮಯದಲ್ಲಿ ಕಲಿಕೆಗೆ ಹೆಚ್ಚು ಸಮಯ ಕೊಡಬೇಕು. ಸದಾ ಸಕಾರಾತ್ಮಕ ಚಿಂತನೆ ಇರಲಿ. ನೇತ್ಯಾತ್ಮಕ ಚಿಂತನೆಯಿಂದ ದೂರವಿರಬೇಕು ಎಂದರು.

ನಾಯಕ ನಟ ಅಗಸ್ತ್ಯ ಕಬ್ಬೂರ ಅವರು ಸಿನಿಮಾಗಳು ಉತ್ತಮ ಅಭಿರುಚಿಯುಳ್ಳ ಕಥಾಹಂದರದೊಂದಿಗೆ ಮಾನವೀಯ ಮೌಲ್ಯಗಳನ್ನು ಹೊಂದಿರಬೇಕು ಎಂದು ಹೇಳಿದರು.

ನಟಿ ಸುವರ್ಥಾ ಮಹಾಂತೇಶ ಅವರು ಉತ್ತರ ಕರ್ನಾಟಕದ ಪ್ರತಿಭೆಗಳು ಈಗ ಸಿನಿಮಾದತ್ತ ಸಾಗುತ್ತಿದ್ದಾರೆ. ಅವರನ್ನು ಪ್ರೋತ್ಸಾಹಿಸಿ, ಬೆಂಬಲಿಸಿ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ಪ್ರೊ ಎಸ್ ಸಿ ಪಾಟೀಲ್ ಅವರು ಜ್ಞಾನ, ಕೌಶಲ್ಯ, ಸೃಜನಶೀಲತೆ, ಓದಿನ ನಿರಂತರತೆ, ದೃಢ ನಿರ್ಧಾರ ಇವು ಸಾಧನೆಯ ಶಿಖರದ ಮೆಟ್ಟಿಲುಗಳು. ಇವು ಶಿಕ್ಷಣದ ಜೊತೆಗೆ ಬಂದಾಗ ಇಂದಿನ ಸ್ಪರ್ಧಾತ್ಮಕ ಜಗತ್ತನ್ನು ಎದುರಿಸುವ ಸಾಮರ್ಥ್ಯವನ್ನು ನೀಡುತ್ತದೆ. ವಿದ್ಯಾರ್ಥಿಗಳು ಕಾಲದ ಜೊತೆಗೆ ಹೆಜ್ಜೆ ಹಾಕಬೇಕು. ಆಗ ಬದುಕು ಸುಂದರವಾಗುತ್ತದೆ ಎಂದರು.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

ಡಾ. ಅರ್ಜುನ ಜಂಬಗಿ ಪ್ರಾಸ್ತಾವಿಕ ನುಡಿಗಳನ್ನಾಡಿದರು, ಡಾ. ನಮಿತಾ ಪೋತರಾಜ ಸ್ವಾಗತಿಸಿದರು, ಉಪನ್ಯಾಸಕಿ ಲಾವಣ್ಯ ಗುಂಜಾಳ ನಿರೂಪಿಸಿದರು, ಆಸ್ಮಾ ದಾದಿಬಾಯಿ ವಂದಿಸಿದರು. ವಿದ್ಯಾರ್ಥಿನಿ ಲಕ್ಷ್ಮೀ ಹಿರೇಮಠ ನೃತ್ಯದ ಮೂಲಕ ಪ್ರಾರ್ಥಿಸಿದರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ