LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳ


ಕೊಪ್ಪಳ ಮೇ 13ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮೇ 16 ಮತ್ತು ಮೇ 17ರಂದು ನಿಗದಿಯಾದ, ಕನಕಗಿರಿಯ ಗತವೈಭವದ ಬಿಂಬಿಸುವ ಕನಕಗಿರಿ ಉತ್ಸವ-2026ಕ್ಕೆ ಅಂತಿಮ ಹಂತದ ಸಿದ್ಧತೆಗಳು ಯುದ್ದೋಪಾದಿಯಲ್ಲಿ ಸಾಗಿದೆ ಎಂದು ಕನಕಗಿರಿ ಉತ್ಸವ 2026ರ ಆಚರಣಾ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ ಇಟ್ನಾಳ ಅವರು ತಿಳಿಸಿದರು.

ಜಿಲ್ಲಾಡಳಿತ ಭವನದಲ್ಲಿ ಮೇ 12ರಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಉತ್ಸವದ ನಿಮಿತ್ತ ಮೇ 14 ಮತ್ತು ಮೇ 15ರಂದು ವಾಲಿಬಾಲ್, ಕಬಡ್ಡಿ ಮತ್ತು ಕುಸ್ತಿ ಪಂದ್ಯಗಳು ನಡೆಯಲಿವೆ. ಮೇ 16ರಂದು ಎದುರು ಹನುಮಪ್ಪ ದೇವಸ್ಥಾನದಿಂದ ಕನಕಾಚಲಪತಿ ದೇವಾಲಯದವರೆಗೆ ಸುಮಾರು 40 ಕಲಾ ತಂಡಗಳಿAದ ಮೆರವಣಿಗೆ ನಡೆಯಲಿದೆ. ಅಂದು ಸಂಜೆ 6.30ಕ್ಕೆ ಮುಖ್ಯಮಂತ್ರಿಗಳು ಉತ್ಸವವನ್ನು ಉದ್ಘಾಟಿಸುವರು. ಮಾನ್ಯ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಚಿವರು, ಸಂಸದರು, ಶಾಸಕರು ಸೇರಿದಂತೆ ಎಲ್ಲ ಗಣ್ಯ ಮಹನಿಯರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗುತ್ತಿದೆ.

ಮೇ 16ರಂದು ಮೊದಲನೇ ದಿನ ಖ್ಯಾತ ಚಲನಚಿತ್ರ ನಟ ಶ್ರೀ ಮುರಳಿ, ಗಾಯಕರಾದ ಸಂಚಿತ್ ಹೆಗಡೆ, ಸವಾರಿ ಬ್ಯಾಂಡ್ ಮತ್ತು ಡಿಕೆಡಿ ಡ್ಯಾನ್ಸ್ ತಂಡದಿAದ ವೈವಿದ್ಯಮಯ ಕಾರ್ಯಕ್ರಮಗಳು ನಡೆಯಲಿವೆ.

ಮೇ 17ರಂದು ಸಂಜೆ 6.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಎರಡನೇ ದಿನ ಚಲನಚಿತ್ರ ನಟ ಡಾಲಿ ಧನಂಜಯ, ಚಲನಚಿತ್ರ ನಟಿ ಸಪ್ತಮಿ ಗೌಡ, ಗಾಯಕರಾದ ಅರ್ಜುನ ಜನ್ಯ, ಸಾದ್ವಿನಿ ಕೊಪ್ಪ, ಐಶ್ವರ್ಯ ರಂಗರಾಜನ್ಯ ಅವರಿಂದ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಕೂಹು ನಾಟಕ ಪ್ರದರ್ಶನ ಕೂಡ ಇರುತ್ತದೆ. ಮೇ 16 ಮತ್ತು ಮೇ 17ರಂದು ಎರಡೂ ದಿನವೂ ಕಾರ್ಯಕ್ರಮದ ಸ್ಥಳದಲ್ಲಿ ಮೈಸೂರ ದಸರಾ ಉತ್ಸವದ ಮಾದರಿಯಲ್ಲಿ ಆಕರ್ಷಕ ಡ್ರೋನ್ ಶೋ ನಡೆಯಲಿದೆ ಇರುತ್ತದೆ.

ಮುಖ್ಯ ವೇದಿಕೆ ರಾಜ ಉಡಚಪ್ಪ ನಾಯಕ ಮತ್ತು ಉಪ ವೇದಿಕೆ ಜಯತೀರ್ಥ ರಾಜಪುರೋಹಿತ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಮೇ 16ರಂದು ಕನಕಗಿರಿ ಪರಂಪರೆ ಮತ್ತು ಪ್ರಗತಿ ಮೇಲೆ ವಿಚಾರಗೋಷ್ಠಿ ನಡೆಯಲಿದೆ. ಮೇ 17ರಂದು ಮಹಿಳೆ ವರ್ತಮಾನದ ತಲ್ಲಣಗಳು ವಿಷಯದ ಮೇಲೆ ಮಹಿಳಾಗೋಷ್ಠಿ ನಡೆಯಲಿದೆ. ಕವಿಗಳಿಂದ ಕವಿತಾ ವಾಚನ ಇರುತ್ತದೆ. ಡ್ರೋನ್ ಶೋ, ಕನಕಗಿರಿ ಪಟ್ಟಣಕ್ಕೆ ದೀಪಾಲಂಕಾರ ಮತ್ತು ಹೆಲಿಕ್ಯಾಪ್ಟರ್ ರೈಡ್ ಉತ್ಸವದ ವಿಶೇಷತೆಗಳಾಗಿವೆ ಎಂದು ಅವರು ತಿಳಿಸಿದರು.

ಸಾರ್ವಜನಿಕರಲ್ಲಿ ಮನವಿ: ಕನಕಗಿರಿ ಉತ್ಸವವು ಈ ಬಾರಿ ಬೇರೆ ಬೇರೆ ವಿಶೇಷತೆಗಳನ್ನು ಹೊಂದಿದೆ. ಉತ್ಸವಕ್ಕೆ ಆಗಮಿಸಲಿರುವ ಜನತೆಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಬಸ್ಸಿನ ವ್ಯವಸ್ಥೆಯನ್ನು ಸಹ ಮಾಡಲಾಗಿದೆ. ಪುಸ್ತಕ ಪ್ರಾಧಿಕಾರದಿಂದ ಪುಸ್ತಕ ಮಳಿಗೆ, ವಿವಿಧ ಇಲಾಖೆಗಳಿಂದ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯ ಮಳಿಗೆಗಳು, ಸ್ವಸಹಾಯ ಸಂಘಗಳಿAದ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು, ತೋಟಗಾರಿಕಾ ಇಲಾಖೆಯಿಂದ

ಫಲಪುಷ್ಪ ಪದರ್ಶನ ಸೇರಿದಂತೆ ನಾನಾ ವಿಶೇಷತೆಯ ಉತ್ಸವಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಇಟ್ನಾಳ ಅವರು ಕೊಪ್ಪಳ ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಉಪಸ್ಥಿತರಿದ್ದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು