ತಾಳಿಕೋಟೆ, ತಾಲ್ಲೂಕಿನ ಬಳಗಾನೂರು ಗ್ರಾಮದ ಬಿ.ಎಸ್.ಎಫ್. ವೀರಯೋಧ ದಿ. ಸಿದ್ದಪ್ಪ ಸಂ. ಮಾದರ ಅವರ ಮೂರ್ತಿ ಅನಾವರಣ ಸಮಾರಂಭ ಇಂದು ದಿ.೨೯ ಮಂಗಳವಾರರಂದು ಬೆಳಿಗ್ಗೆ ೧೧ ಗಂಟೆಗೆ ಬಳಗಾನೂರು ಗ್ರಾಮದಲ್ಲಿ ನಡೆಯಲಿದೆ.
ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಹಿರೂರ ಅನ್ನದಾನೇಶ್ವರ ಮಠದ ಪ.ಪೂ. ಶ್ರೀ ಷ.ಬ್ರ. ಜಯಸಿದ್ಧೇಶ್ವರ ಮಹಾಸ್ವಾಮಿಗಳು ವಹಿಸಲಿದ್ದು, ತಾಳಿಕೋಟೆಯ ಖಾಸ್ಗತೇಶ್ವರ ಮಠದ ಬಾಲಶಿವಯೋಗಿ ಪ.ಪೂ. ಶ್ರೀ ಸಿದ್ಧಲಿಂಗ ದೇವರು ಪಾವನ ಸಾನಿಧ್ಯ ವಹಿಸಲಿದ್ದಾರೆ.
ಮುದ್ದೇಬಿಹಾಳ ಶಾಸಕ ಸಿ.ಎಸ್. ನಾಡಗೌಡ ಅವರು ಮೂರ್ತಿ ಅನಾವರಣ ನೆರವೇರಿಸಲಿದ್ದು, ಮಾಜಿ ಶಾಸಕ ಎ.ಎಸ್. ಪಾಟೀಲ (ನಡಹಳ್ಳಿ) ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಸದ ರಮೇಶ ಜಿಗಜಿಣಗಿ ಜ್ಯೋತಿ ಬೆಳಗಿಸುವರು, ವಿಜಯಪುರ ನಗರ ಶಾಸಕ ಬಸನಗೌಡ ಆರ್. ಪಾಟೀಲ (ಯತ್ನಾಳ), ದೇವರಹಿಪ್ಪರಗಿ ಮಾಜಿ ಶಾಸಕ ಸೋಮನಗೌಡ ಬಿ. ಪಾಟೀಲ (ಸಾಸನೂರ), ಮಾಜಿ ಶಾಸಕ ಎಸ್.ಎಂ. ದೇಸಾಯಿ (ಸಾಸನೂರ) ಹಾಗೂ ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಸನಗೌಡ ಮಾಡಗಿ ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಪ್ರಭುಗೌಡ ಬಿ. ಅಂಗದಳ್ಳಿ (ಚಬನೂರ), ಬಿಜೆಪಿ ಮುಖಂಡರಾದ ಸಂಜೀವ ಐಹೊಳೆ, ಉಮೇಶ ಕಾರಜೋಳ, ಜಗದೀಶ ಹಳ್ಳೂರ, ಮುದ್ದೇಬಿಹಾಳ ಸಿಪಿಐ ಮಹಮ್ಮದ ಫಸಿಯುದ್ದೀನ್, ತಾಳಿಕೋಟೆ ತಹಶೀಲ್ದಾರ್ ಮಲ್ಲಿಕಾರ್ಜುನ ಅರಕೇರಿ ಹಾಗೂ ಸಬ್ ಇನ್ಸ್ಪೆಕ್ಟರ್ ಜ್ಯೋತಿ ಖೋತ್, ಸೇರಿದಂತೆ ಹಲವು ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸ್ಥಳೀಯ ಗಣ್ಯರು ಭಾಗವಹಿಸಲಿದ್ದಾರೆ.
ದೇಶದ ಗಡಿ ಭದ್ರತೆಯಲ್ಲಿ ಸೇವೆ ಸಲ್ಲಿಸಿದ ವೀರಯೋಧ ದಿ. ಸಿದ್ದಪ್ಪ ಸಂ. ಮಾದರ ಅವರ ಸ್ಮರಣಾರ್ಥ ನಡೆಯಲಿರುವ ಈ ಮೂರ್ತಿ ಅನಾವರಣ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಭಾಗವಹಿಸಬೇಕೆಂದು ಬಳಗಾನೂರ ಗ್ರಾಮದ ಗ್ರಾಮಸ್ಥರು ಮನವಿ ಮಾಡಿದ್ದಾರೆ.