ಬೆಂಗಳೂರು: ಬರೋಬ್ಬರಿ 22 ಜಿಲ್ಲೆಗಳ ಸಂಚಾರಕ್ಕೆ ಪ್ರಮುಖ ಸಂಪರ್ಕವಾಗಿರುವ ಪೀಣ್ಯ ಫ್ಲೈಓವರ್ (Peenya Flyover) ಇಂದಿನಿಂದ (ಮೇ 5) 3 ದಿನಗಳ ಕಾಲ ಬಂದ್ ಆಗಲಿದೆ. ಕೇಬಲ್ ಅಳವಡಿಕೆ ಹಾಗೂ ಲೋಡ್ ಟೆಸ್ಟಿಂಗ್ ಕಾರ್ಯಕ್ಕಾಗಿ ಎನ್‌ಎಚ್‌ಎಐ ದುರಸ್ಥಿ ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರು ಫ್ಲೈಓವರ್‌ನ್ನು ತಾತ್ಕಾಲಿಕವಾಗಿ ಮುಚ್ಚಿದ್ದಾರೆ. ಇದರ ಪರಿಣಾಮ ಮುಂದಿನ ಮೂರು ದಿನ ತುಮಕೂರು ರಸ್ತೆಯಲ್ಲಿ ಪ್ರಯಾಣಿಸುವ ಸವಾರರಿಗೆ ಭಾರೀ ಟ್ರಾಫಿಕ್ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಈಗಾಗಲೇ ಫ್ಲೈಓವರ್ ಮೇಲೆ ಎಲ್ಲಾ ವಿಧದ ವಾಹನಗಳ ಸಂಚಾರ ನಿಲ್ಲಿಸಲಾಗಿದ್ದು, ಮೇ 8ರಂದು ಬೆಳಿಗ್ಗೆ 11 ಗಂಟೆಯ ನಂತರ ಮತ್ತೆ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ.