Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಚಿನ್ನಾಭರಣ ದರೋಡೆ ಮಾಡಿದ ಮುಸುಕುಧಾರಿಗಳು

ಚಂದ್ರವಳ್ಳಿ ನ್ಯೂಸ್, ನೆಲಮಂಗಲ(ಬೆಂ. ಗ್ರಾಮಾಂತರ):
ಮೂವರು ಮುಸುಕುಧಾರಿಗಳು ಆಟಿಕೆ ಗನ್​​ ತೋರಿಸಿ ಚಿನ್ನಾಭರಣವನ್ನು ದರೋಡೆ ಮಾಡಿರುವ ಘಟನೆ ನೆಲಮಂಗಲದಲ್ಲಿ ಜರುಗಿದೆ.


ರಾತ್ರಿ ಚಿನ್ನದಂಗಡಿ ಮುಚ್ಚುವ ಸಂದರ್ಭದಲ್ಲಿ ಹೊಂಚು ಹಾಕಿ ದಾಳಿ ಮಾಡಿದ ಮುಸುಕುಧಾರಿ ಆರೋಪಿಗಳು ಕೇವಲ 16 ಸೆಕೆಂಡ್​ಗಳಲ್ಲಿ ಕೃತ್ಯ ಎಸಗಿ ಪರಾರಿಯಾಗಿವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆ ಜುಲೈ 24ರಂದು ನಡೆದಿದೆ.

ನೆಲಮಂಗಲ ಉಪವಿಭಾಗದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾಗಡಿ ರಸ್ತೆಯ ಮಾಚೋಹಳ್ಳಿ ಗೇಟ್​ನ ರಾಮ್​ ಜ್ಯುವೆಲ್ಲರಿ ಶಾಪ್​ ನಲ್ಲಿ ಜು.24ರ ರಾತ್ರಿ 8 ರಿಂದ 9 ಗಂಟೆಯೊಳಗೆ ಘಟನೆ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.


ಶಾಪ್​ಗೆ ಗನ್ ಹಿಡಿದು ನುಗ್ಗಿದ ಮೂವರು ದರೋಡೆ ಕೋರರು ಟೇಬಲ್ ಮೇಲಿದ್ದ ಚಿನ್ನವನ್ನು ಬಾಚಿಕೊಂಡು, ಅಂಗಡಿ ಮಾಲೀಕ ಮತ್ತು ಸಿಬ್ಬಂದಿಯನ್ನು ತಳ್ಳಿ ಪರಾರಿಯಾಗಿದ್ದಾರೆ. 

ಕೂಗಾಟ ಕೇಳಿ ಪಕ್ಕದ ಅಂಗಡಿಯ ಹುಡುಗ ಬಂದಿದ್ದು, ಆತನನ್ನೂ ತಳ್ಳಿ, ಚಾಕುವಿನಿಂದ ಗಾಯ ಮಾಡಿ, ಸಿಕ್ಕ ಚಿನ್ನವನ್ನು ದೋಚಿ ಮೂವರು ಎಸ್ಕೇಪ್ ಆಗಿದ್ದಾರೆ.


ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಲಮಂಗಲ ಡಿವೈಎಸ್ಪಿ, ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು . ಸಿಸಿಟಿವಿ ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, "ಅಂದು ಅಮಾವಾಸ್ಯೆ ಕಾರಣ ಗ್ರಾಹಕರು ಇರಲಿಲ್ಲ. ಹೀಗಾಗಿ ಮುಂಚಿತವಾಗಿ ಅಂಗಡಿ ಮುಚ್ಚುವ ವೇಳೆ ಏಕಾಏಕಿ ನುಗ್ಗಿದ್ದ ಮೂವರು ಮುಸುಕುಧಾರಿಗಳು ಟಾಯ್ ಗನ್ ತೋರಿಸಿ ಅಂಗಡಿ ಮಾಲೀಕನನ್ನು ಹೆದರಿಸಿ ಅಂಗಡಿಯಲ್ಲಿ ಪ್ರದರ್ಶನಕ್ಕೆ ಇಡಲಾಗಿದ್ದ ಆಭರಣಗಳ ಬಾಕ್ಸ್​ಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಕೇವಲ 15 ರಿಂದ 16 ಸೆಕೆಂಡ್​ಗಳಲ್ಲಿ ದರೋಡೆ ಮಾಡಿ ಪರಾರಿಯಾಗಿದ್ದಾರೆ.


ಒಟ್ಟು 184 ಗ್ರಾಂ ಚಿನ್ನಾಭರಣವನ್ನು ದರೋಡೆ ಮಾಡಲಾಗಿದ್ದು, ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತಂಡ ರಚನೆ ಮಾಡಲಾಗಿದೆ. ಆದಷ್ಟು ಬೇಗ ಆರೋಪಿಗಳನ್ನು ಪತ್ತೆ ಮಾಡುವುದಾಗಿ ಅವರು ಹೇಳಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ