LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕನ್ನಡ ಸಿನಿರಂಗದ ಹಿರಿಯ ನಟ ಎಂ.ಎಸ್. ಉಮೇಶ್ ನಿಧನ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್. ಉಮೇಶ್ ಇಂದು ನಿಧನ ಹೊಂದಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವೈದ್ಯಕೀಯ ಚಿಕಿತ್ಸೆ ಫಲಕಾರಿಯಾಗದೇ ಅವರು ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಉಮೇಶ್ ಅವರು ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಅನೇಕ ನಟರು ಭೇಟಿ ನೀಡಿ, ಅವರ ಆರೋಗ್ಯ ಸುಧಾರಿಸಲಿ ಎಂದು ಪ್ರಾರ್ಥಿಸಿದ್ದರು. ಕೆಲವು ದಿನಗಳ ಹಿಂದೆ ಮನೆಯಲ್ಲಿ ಕಾಲು ಜಾರಿ ಬಿದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿ ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದನ್ನು ವೈದ್ಯರು ಪತ್ತೆಹಚ್ಚಿದರು. ಹೆಚ್ಚಿನ ಪರೀಕ್ಷೆಗಳ ನಂತರ ಕಿಮೊಥೆರಪಿ ಹಾಗೂ ಇಮ್ಯುನೋಥೆರಪಿ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಸ್ಥಿತಿ ಗಂಭೀರವಾಗುತ್ತಿದ್ದಂತೆ ಅವರು ಚೇತರಿಸಿಕೊಳ್ಳಲಿಲ್ಲ. ಅವರ ಅಗಲಿಕೆಗೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

1960ರ ದಶಕದಿಂದಲೇ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಉಮೇಶ್ ಅವರು ಪೋಷಕ ಪಾತ್ರಗಳು, ಹಾಸ್ಯ ಪಾತ್ರಗಳು ಹಾಗೂ ವೈಶಿಷ್ಟ್ಯಪೂರ್ಣ ಪಾತ್ರಗಳ ಮೂಲಕ ಜನಮನ ಗೆದ್ದಿದ್ದರು. ಇತ್ತೀಚಿನ ದಿನಗಳವರೆಗೂ ಅವರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಅಭಿನಯದ “ಕಮಲ್ ಶ್ರೀದೇವಿ” ಮತ್ತು “ಐ ಆ್ಯಮ್ ಗಾಡ್” ಸಿನಿಮಾಗಳು ಇತ್ತೀಚಿಗೆ ಬಿಡುಗಡೆಯಾಗಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026