LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಿರಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ಸಾವು.!

 

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಫಿಲ್ಮ್ ಚೇಂಬರ್ ಸಭೆಯಲ್ಲಿ ಭಾಗಿಯಾಗಿದ್ದ ನಿರ್ದೇಶಕ ಜೋ ಸೈಮನ್ ಅವರಿಗೆ ಸಭೆಯಲ್ಲಿದ್ದಾಗಲೇ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಜೋ ಸೈಮನ್ ಕನ್ನಡ ಚಲನಚಿತ್ರದ ನಿರ್ದೇಶಕ ಮತ್ತು ಲೇಖಕ. ಸಹೋದರರ ಸವಾಲ್(1977), ಒಂದು ಪ್ರೇಮದ ಕಥೆ(1977), ಬಂಗಾರದ ಗುಡಿ(1976) ಮೊದಲಾದವು. ಸಾಹಸಸಿಂಹ, ನ್ಯಾಯ ಗೆದ್ದಿತು, ಪ್ರೇಮ ಜಾಲ, ರವಿ ವರ್ಮ, ಊರಿಗೆ ಉಪಕಾರಿ, ನನ್ನ ರೋಷ ನೂರು ವರುಷ ಮುಂತಾದವು ಜೋ ಸೈಮನ್ ಅವರ ಜನಪ್ರಿಯ ಸಿನಿಮಾಗಳು. 85ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಇವರು ಕೆಲಸ ಮಾಅಡಿದ್ದರು.

ಮಂಡ್ಯ ಮೂಲದ ಜೋ ಸೈಮನ್, ತಮ್ಮ ಓದನ್ನು ಮಂಡ್ಯದಲ್ಲಿ ಮುಗಿಸಿದ ನಂತರ 1967 ರಲ್ಲಿ ರಗಸ್ಯ ಪೊಲೀಸ್ 115 ಮೂಲಕ ಚಲನಚಿತ್ರ ರಂಗ ಪ್ರವೇಶಿಸಿದರು. ಪ್ರಾರಂಭದಲ್ಲಿ ಅವರು. ಟಚ್ ಅಪ್ ಬಾಯ್, ಸಹಾಯಕ ಮೇಕ್ಅಪ್ ಮ್ಯಾನ್ ಮತ್ತು ಸೆಟ್ ಬಾಯ್ ಆಗಿ ಕೆಲಸ ಮಾಡಿದರು. ನಂತರ ಅವರು ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಲು ಪ್ರಾರಂಭಿಸಿದರು. ಅವರು ಕೆ. ಎಸ್. ಆರ್. ದಾಸ್, ಆರ್.ಎನ್. ಜಯಗೋಪಾಲ್, ಕಣಗಾಲ್ ಪ್ರಭಾಕರ ಶಾಸ್ತ್ರಿ, ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಮುಂತಾದ ನಿರ್ದೇಶಕರೊಂದಿಗೆ ಕೆಲಸ ಮಾಡಿದ್ದಾರೆ.

ಅವರ ಮೊದಲ ನಿರ್ದೇಶನದ ಚಿತ್ರ ಒಂದು ಪ್ರೇಮದ ಕಥೆ, ರಜನಿಕಾಂತ್ ಮತ್ತು ಎಲ್.ವಿ.ಶಾರದಾ ಅಭಿನಯಿಸಿದ್ದಾರೆ. ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರಹಗಾರರು ಕೂಡ ಆಗಿದ್ದು, 30 ಕ್ಕೂ ಹೆಚ್ಚು ಚಲನಚಿತ್ರಗಳನ್ನು ಅವರು ನಿರ್ದೇಶಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026