LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸನ ಸಭೆಗಳಿಗೆ ಆರ್ಥಿಕ ಸ್ವಾಯತ್ತತೆ ನೀಡಿಕೆಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಗ್ರಹ

ನವದೆಹಲಿ: ಶಾಸನ ಸಭೆಗಳ ಸ್ವತಂತ್ರ, ಪಕ್ಷಾತೀತ ಕಾರ್ಯನಿರ್ವಹಣೆ ದೃಷ್ಠಿಯಿಂದ ಅವುಗಳಿಗೆ ಆರ್ಥಿಕ ಸ್ವಾಯತ್ತತೆ ನೀಡುವುದು ಅಗತ್ಯವಾಗಿದ್ದು, ಆ ನಿಟ್ಟಿನಲ್ಲಿ ಸೂಕ್ತ ಕಾನೂನಗಳಡಿ ಕಟ್ಟುನಿಟ್ಟಿನ ಕ್ರಮ ಅವಶ್ಯಕವಾಗಿದೆಯೆಂದು ಕರ್ನಾಟಕ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಮನವಿ ಮಾಡಿದರು.

ನವದೆಹಲಿಯ ನೂತನ ಸಂಸದ ಭವನದಲ್ಲಿ ಇಂದಿನಿಂದ ಆರಂಭಗೊಂಡ ಎರಡು ದಿನಗಳ 10ನೇ ಕಾಮನ್‍ವೆಲ್ತ್ ಸಂಸದೀಯ ಸಂಘದ ಭಾರತ ವಲಯದ ಸಮ್ಮೇಳನದ ಅಂಗವಾಗಿ ಜರುಗಿದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಬಸವರಾಜ ಹೊರಟ್ಟಿ ಅವರು, ಶಾಸನ ಸಭೆಗಳ ಸಚಿವಾಲಯಕ್ಕೆ ಆರ್ಥಿಕ ಸ್ವಾಯತ್ತತೆ ಮತ್ತು ಸ್ವಾಯತ್ತ ಸ್ಥಾನ-ಮಾನ ನೀಡುವ ಕುರಿತು ಕಾನೂನು ಮೂಲಕ ಸೂಕ್ತ ನಿರ್ಧಾರ ಕೈಗೊಂಡು ಸದನಗಳ ಗೌರವ, ಘನತೆ ಹಾಗೂ ಪ್ರಾಮುಖ್ಯತೆ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಲೋಕ ಸಭಾಧ್ಯಕ್ಷರು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಪ್ರತಿಯೊಂದು ಆರ್ಥಿಕ ಸಂಪನ್ಮೂಲಕ್ಕೂ ಸರಕಾರಗಳನ್ನು ಹಾಗೂ ಆರ್ಥಿಕ ಇಲಾಖೆ ಅಧಿಕಾರಿಗಳ ಮೊರೆ ಹೋಗುವುದು ಸೂಕ್ತವಾದುದಲ್ಲ, ಹಾಗೂ ಈ ಪ್ರಕ್ರಿಯೆಯಿಂದ ಆರ್ಥಿಕ ಅನುದಾನ ಪಡೆಯಲು ಅತೀ ಹೆಚ್ಚಿನ ಸಮಯ ಹಾಗೂ ಶ್ರಮದ ಅವಶ್ಯಕತೆಯಿದ್ದು ಅಲ್ಲದೇ ಇದರಿಂದ ಶಾಸನ ಸಭೆಗಳ ಸ್ವಾಯತ್ತತೆಗೆ ಅಡ್ಡಿ ಉಂಟಾಗುತ್ತಿದೆ ಎಂದು ವಿವರಿಸಿದರು.

ಶಾಸನ ಸಭೆ ಅಧಿವೇಶನಗಳ ಕುರಿತು ಪ್ರಸ್ತಾಪಿಸಿದ ಬಸವರಾಜ ಹೊರಟ್ಟಿ, ವಾರ್ಷಿಕವಾಗಿ ಕನಿಷ್ಠ 60 ದಿನಗಳ ಕಾಲ ಅಧಿವೇಶನ ನಡೆಸುವುದನ್ನು ಕಡ್ಡಾಯಗೊಳಿಸಬೇಕು. ಶಾಸನ ಸಭೆಗಳು ಜನಸಾಮಾನ್ಯರ ದೈನಂದಿನ ಬದುಕಿನ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸುವ ಸೂಕ್ತ ವೇದಿಕೆಯಾಗಿವೆ. ಆದ್ದರಿಂದ ಪ್ರತಿ ವರ್ಷವೂ ಶಾಸನಸಭೆಗಳು ಕನಿಷ್ಠ 60 ದಿನಗಳ ಕಾಲ ಅಧಿವೇಶನ ನಡೆಸಿ ಪ ಇಲ್, ರಾಜ್ಯಸಭೆ ಉಪಸಭಾಪತಿ ಹರಿವಂಶ್ ನಾರಾಯಣ ಸಿಂಗ್, ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್, ಕರ್ನಾಟಕದ ಉಭಯ ಸದನದ ಕಾರ್ಯದರ್ಶಿಗಳಾದ ಕೆ.ಆರ್. ಮಹಾಲಕ್ಷ್ಮೀ, ವಿಶಾಲಾಕ್ಷಿ, ಸಭಾಪತಿಯವರ ವಿಶೇಷ ಕರ್ತವ್ಯಾಧಿಕಾರಿ ಡಾ.ಮಹೇಶ ವಾಳ್ವೇಕರ್ ಸೇರಿದಂತೆ ವಿವಿಧ ರಾಜ್ಯಗಳ ವಿಧಾನ ಸಭಾಧ್ಯಕ್ಷರು ಹಾಗೂ ಸಭಾಪತಿಗಳು ಸಮ್ಮೇಳನದಲ್ಲಿ ಪಾಲ್ಗೊಂಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್