LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೊದಲ ಪ್ರಯತ್ನದಲ್ಲೇ ಯುಪಿಎಸ್‌ಸಿ ಬರೆದು ಐಎಫ್‌ಎಸ್ ಅಧಿಕಾರಿಯಾದ ವಿದೂಷಿ ಸಿಂಗ್

ಉತ್ತರ ಪ್ರದೇಶ : ಪ್ರತಿ ವರ್ಷ ಲಕ್ಷಾಂತರ ವಿದ್ಯಾರ್ಥಿಗಳು ಯುಪಿಎಸ್‌ಸಿ ಪರೀಕ್ಷೆಯನ್ನು ಬರೆಯುತ್ತಾರೆ. ಆದರೆ ಕೆಲವರು ಮಾತ್ರ ತಮ್ಮ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗಲು ಸಫಲರಾಗುತ್ತಾರೆ. ಹೀಗೆ ತಮ್ಮ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗುವಲ್ಲಿ ಸಫಲರಾದ ವಿದೂಷಿ ಸಿಂಗ್ ಯವರ ಯಶೋಗಾಥೆ ಇದು.

ಉತ್ತರ ಪ್ರದೇಶದ ಅಯೋಧ್ಯಾದವರಾದ ವಿದೂಷಿ ಸಿಂಗ್, ರಾಜಸ್ಥಾನದ ಜೋಧ್‌ಪುರದಲ್ಲಿ ಜನಿಸಿದರು. 2021 ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದ ಶ್ರೀ ರಾಮ್ ಕಾಲೇಜ್ ಆಫ್ ಕಾಮರ್ಸ್‌ನಿಂದ ಅರ್ಥಶಾಸ್ತ್ರದಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್ ಪದವಿ ಪಡೆದಿದ್ದಾರೆ.

ಬಳಿಕ ವಿದೂಷಿ ಸಿಂಗ್ 2022ರಲ್ಲಿ ಯುಪಿಎಸ್‌ಸಿ ಪರೀಕ್ಷೆ ಬರೆಯಲು ನಿರ್ಧರಿಸುತ್ತಾರೆ. ಅವರು ಐಚ್ಛಿಕ ವಿಷಯವಾಗಿ ಅರ್ಥಶಾಸ್ತ್ರವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಮೊದಲ ಪ್ರಯತ್ನದಲ್ಲಿ 13ನೇ ರ‍್ಯಾಂಕ್ ಗಳಿಸುತ್ತಾರೆ. ವಿದೂಷಿ ಅವರು ತಮ್ಮ 21ನೇ ವಯಸ್ಸಿನಲ್ಲಿ ಯಾವುದೇ ತರಬೇತಿ ತೆಗೆದುಕೊಳ್ಳದೇ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಲ್ಲಿ ಸಫಲರಾಗುತ್ತಾರೆ.

ಯುಪಿಎಸ್‌ಸಿ ಅಭ್ಯರ್ಥಿಗಳು ಐಎಎಸ್ ಅಧಿಕಾರಿಯಾಗಲು ಬಯಸಿದರೆ, ವಿದೂಷಿ ಅವರು ಐಎಎಸ್ ಹುದ್ದೆಯನ್ನು ತಿರಸ್ಕರಿಸಿ, ಐಎಫ್‌ಎಸ್ ಅನ್ನು ಆಯ್ಕೆ ಮಾಡುತ್ತಾರೆ. ಅವರು ಈ ನಿರ್ಧಾರವನ್ನು ಭಾರತಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸೇವೆ ಸಲ್ಲಿಸಬೇಕೆಂಬ ತಮ್ಮ ಅಜ್ಜನ ಆಕಾಂಕ್ಷೆಯನ್ನು ಈಡೇರಿಸಲು ತೆಗೆದುಕೊಳ್ಳುತ್ತಾರೆ.

ವಿದೂಷಿ ಅವರು ಪ್ರಸ್ತುತ ಪ್ಯಾರಿಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಮೂರನೇ ಕಾರ್ಯದರ್ಶಿ (ಎಲ್‌ಟಿ) ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026