E-PAPER
17 Nov 2026, 05:27:49 PM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

“ವಿದ್ಯಾರ್ಥಿಗಳೇ ನನ್ನ ಶಕ್ತಿ” – ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಗಟಿ ಸಂದೇಶ

ಹಿರೇನಂದಿಹಳ್ಳಿ: ಶಿಕ್ಷಕರ ದಿನಾಚರಣೆಯಲ್ಲಿ ಸನ್ಮಾನ – ವಿದ್ಯಾರ್ಥಿಗಳಿಗೆ 25,000 ರೂ. ಬಹುಮಾನ ಘೋಷಣೆ

ಬೆಳಗಾವಿ(ಚನ್ನಮ್ಮ ಕಿತ್ತೂರು)-14 - ಚೆನ್ನಮ್ಮನ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ಶಿಕ್ಷಕರ ದಿನಾಚರಣೆ ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಶಿಕ್ಷಕ ಶ್ರೀ ರಾಜಶೇಖರ ರಗಟಿ ಅವರನ್ನು ಶಾಲೆ ಹಾಗೂ ಹಿರೇನಂದಿಹಳ್ಳಿ ಪ್ರಾಥಮಿಕ ಶಾಲೆಯು ಸನ್ಮಾನಿಸಿತು.

ಸನ್ಮಾನದ ಬಳಿಕ ಮಾತನಾಡಿದ ಅವರು, “ಯಾವುದೇ ಕೆಲಸವನ್ನೂ ಭಗವಂತನ ಸೇವೆ ಎಂದು ಭಾವಿಸಿ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡಿದರೆ ಯಶಸ್ಸು ಮತ್ತು ಗೌರವಗಳು ಸ್ವತಃ ಬಂದು ಸೇರುತ್ತವೆ” ಎಂದು ಅಭಿಪ್ರಾಯಪಟ್ಟರು. ತಮ್ಮ ಪ್ರಶಸ್ತಿಯನ್ನು ವಿದ್ಯಾರ್ಥಿಗಳಿಗೆ ಅರ್ಪಿಸಿದ ಅವರು, “ಮುಂಬರುವ SSLC ಪರೀಕ್ಷೆಯಲ್ಲಿ 625ರಲ್ಲಿ 625 ಅಂಕಗಳನ್ನು ಗಳಿಸುವ ವಿದ್ಯಾರ್ಥಿಗೆ ನನ್ನ ಪ್ರಶಸ್ತಿಯ ಮೊತ್ತ 25,000 ರೂ. ಬಹುಮಾನವಾಗಿ ನೀಡುತ್ತೇನೆ” ಎಂದು ಘೋಷಿಸಿದರು. ಸಮಾಜ ವಿಜ್ಞಾನ ಪ್ರಯೋಗಾಲಯ ನಿರ್ಮಾಣಕ್ಕೆ ಧನಸಹಾಯ ಮಾಡಿದ ಹಳೆಯ ವಿದ್ಯಾರ್ಥಿಗಳನ್ನು ಅವರು ಕೃತಜ್ಞತೆಯಿಂದ ಸ್ಮರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶಾಲೆಯ ಮುಖ್ಯೋಪಾಧ್ಯಾಯ ಶ್ರೀ ಬಿ.ಸಿ. ಬಿದರಿ, “ನಮ್ಮ ಶಾಲೆಯ ಪ್ರತಿಯೊಬ್ಬರೂ ಆದರ್ಶ ಶಿಕ್ಷಕರೇ. ರಾಜಶೇಖರ ರಗಟಿ ರಾಜ್ಯಮಟ್ಟದ ಪ್ರಶಸ್ತಿ ಪಡೆದಿರುವುದು ನಮ್ಮ ಶಾಲೆಗೆ ಮತ್ತೊಂದು ಕಿರೀಟ” ಎಂದು ಹೇಳಿದರು. ಇದೇ ಸಂದರ್ಭದಲ್ಲಿ ತಾಲೂಕಾ ಆದರ್ಶ ಶಿಕ್ಷಕ ಪ್ರಶಸ್ತಿ ವಿಜೇತರಾದ ಶ್ರೀ ಬಿ.ಬಿ. ಕಡಬಿ, ಶ್ರೀ ಸಹದೇವ ಬುಳ್ಳನ್ನವರ ಮತ್ತು ಶ್ರೀಮತಿ ಪಿ.ಎ. ಕುಂಬಾರ ಅವರನ್ನು ಕೂಡ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿದ ಶಿಕ್ಷಕರು ಮಾತನಾಡಿ, “ಮಕ್ಕಳ ಸಾಧನೆಗಳೇ ನಮ್ಮ ಸಾಧನೆ. ಈ ಗೌರವ ಮಕ್ಕಳಿಗೇ ಸೇರಬೇಕು” ಎಂದು ನುಡಿದರು.

ಮುಖ್ಯ ಅತಿಥಿಗಳಾದ ಊರಿನ ಹಿರಿಯ ಉಳವನಗೌಡ ಪಾಟೀಲ ಹಾಗೂ ಶಿಕ್ಷಕ ಶ್ರೀ ನಾಗಯ್ಯ ಹುಲೆಪ್ಪನವರಮಠ ಶಾಲೆಯ ಶಿಕ್ಷಕರ ಶ್ರಮ ಮತ್ತು ವಿದ್ಯಾರ್ಥಿಗಳ ಸಾಧನೆಗಳನ್ನು ಶ್ಲಾಘಿಸಿದರು.

ಇದೇ ಸಂದರ್ಭದಲ್ಲಿ ಯೋಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮವನ್ನು ಕುಮಾರಿ ಶ್ವೇತಾ ಹುರಕಡ್ಲಿ ನಿರೂಪಿಸಿದರು. ಕುಮಾರಿ ಸಪ್ನಾ ದಳವಾಯಿ ಸ್ವಾಗತಿಸಿ, ಕುಮಾರಿ ಪ್ರಿಯಾ ದಳವಾಯಿ ವಂದಿಸಿದರು.

ಕಾರ್ಯಕ್ರಮದಲ್ಲಿ ಎಸ್‌.ಡಿ.ಎಂ.ಸಿ ಅಧ್ಯಕ್ಷ ಶ್ರೀ ಸೋಮಪ್ಪ ಜುಲ್ಪಿ ಸೇರಿದಂತೆ ಅನೇಕ ಗಣ್ಯರು, ಪಾಲಕರು ಮತ್ತು ಊರಿನವರು ಭಾಗವಹಿಸಿ ಸಡಗರವನ್ನು ಹೆಚ್ಚಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ಪ್ರವೇಶ ಮತ್ತು ಅಭಿಮುಖೀಕರಣ ಕಾರ್ಯಕ್ರಮವೀರ ವನಿತೆ ಒನಕೆ ಓಬವ್ವ ಜಯಂತ್ಯೋತ್ಸವ ಕಾರ್ಯಕ್ರಮ - 2026ಮಂಡೋಳ್ಳಿಯಲ್ಲಿ ₹1.70 ಕೋಟಿ ವೆಚ್ಚದಲ್ಲಿ ಶ್ರೀ ಮಾರುತಿ ದೇವಸ್ಥಾನ ನಿರ್ಮಾಣ