ಶಿವಮೊಗ್ಗ : ಸಮಾಜ ಕಲ್ಯಾಣ ಇಲಾಖೆಯು 2026-27ನೇ ಸಾಲಿನಲ್ಲಿ ವಿದ್ಯಾರ್ಥಿವೇತನ, ಪ್ರೋತ್ಸಾಹಧನ, ಮತ್ತು ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಶಿವಮೊಗ್ಗ ತಾಲ್ಲೂಕಿನ ವಿವಿಧ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನವೀನ ಮತ್ತು ನವೀಕರಣ ವಿದ್ಯಾರ್ಥಿಗಳು “ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹಧನ ಅಭಿಯಾನ” ಕಾರ್ಯಕ್ರಮದಡಿ ಆನ್ಲೈನ್ ಮೂಲಕ ಇಲಾಖಾ ವೆಬ್ಸೈಟ್ ವಿಳಾಸ: www.sw.kar.nic.in ಹಾಗೂ twd.karnataka.gov.in ಅಥವಾ ಎಸ್.ಎಸ್.ಪಿ.ಪೋರ್ಟಲ್ ಹಾಗೂ ಹೆಚ್.ಎಂ.ಐ.ಎಸ್ ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿ ವೇಳೆಯಲ್ಲಿ, ಸಹಾಯಕ ನಿರ್ದೇಶಕರು(ಗ್ರೇಡ್-1) ರವರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ವಿದ್ಯಾನಗರ, ಬಿ.ಹೆಚ್.ರಸ್ತೆ, ಶಿವಮೊಗ್ಗ, ದೂ. ಸಂ.: 08182-240512/ 9480843194 ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.