Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ವಿಜಯಪುರ ಇನ್ಮುಂದೆ ಬಸವೇಶ್ವರ ಜಿಲ್ಲೆ ?

 

 


ವಿಜಯಪುರ:
ವಿಜಯಪುರ ಜಿಲ್ಲೆಗೆ 12ನೇ ಶತಮಾನದ ಸಮಾಜ ಸುಧಾರಕ ಬಸವೇಶ್ವರರ ಹೆಸರಿಡಬೇಕು ಎಂಬ ಬೇಡಿಕೆ ಪುನಃ ಮುನ್ನಲೆಗೆ ಬಂದಿದೆ.

ಬಸವ ಜಿಲ್ಲೆ ಅಥವಾ ಬಸವೇಶ್ವರ ಜಿಲ್ಲೆ ಎಂದು ಮರು ನಾಮಕರಣ ಮಾಡಬೇಕು ಎಂಬ ಚರ್ಚೆ ನಡೆದಿದೆ. ಪರ–ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಬಸವೇಶ್ವರರು ಇಲ್ಲಿಯೇ ಜನಿಸಿದ್ದು ಮತ್ತು ಕೊಡುಗೆಗಳು ನೀಡಿದ್ದನ್ನು ಪರಿಗಣಿಸಿ ಜಿಲ್ಲೆಗೆ ಅವರ ಹೆಸರನ್ನು ಇಡುವ ಬಗ್ಗೆ ಜಿಲ್ಲಾಡಳಿತವು ಜಿಲ್ಲೆಯ ಪ್ರತಿನಿಧಿಗಳು, ಗಣ್ಯವ್ಯಕ್ತಿಗಳು, ಸಂಘಸಂಸ್ಥೆಗಳು ಮತ್ತು ಸಾರ್ವಜನಿಕರಿಂದ ಅಭಿಪ್ರಾಯ ಕೇಳಿದೆ. 15 ದಿನಗಳೊಳಗೆ ಸ್ಪಷ್ಟ ಅಭಿಪ್ರಾಯವನ್ನು ಲಿಖಿತ ರೂಪದಲ್ಲಿ ಜಿಲ್ಲಾಧಿಕಾರಿಗೆ ಸಲ್ಲಿಸಲು ಕೋರಲಾಗಿದೆ.

‘ಜಿಲ್ಲೆಗೆ ಬಸವೇಶ್ವರರ ಹೆಸರು ಇಡುವುದು ಸೂಕ್ತ’ ಎಂದು ಕೆಲ ಸಂಘಸಂಸ್ಥೆಗಳು ಮತ್ತು ಬಸವೇಶ್ವರರ ಅನುಯಾಯಿಗಳು ಹೇಳಿದರೆ, ಮರುನಾಮಕರಣ ಪ್ರಕ್ರಿಯೆಯಿಂದ ಆಡಳಿತಾತ್ಮಕವಾಗಿ ಜಿಲ್ಲೆಗೆ ಹಿನ್ನಡೆಯಾಗಲಿದೆ ಎಂಬ ಅಭಿಪ್ರಾಯ ಕೆಲ ಸಂಘಟನೆಯ ಪ್ರಮುಖರು ಹೇಳಿದ್ದಾರೆ. ‘ಹೆಸರು ಬದಲಾವಣೆಗಿಂತ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಬೇಕಿದೆ’ ಎಂದು ಹಲವರು ಅಭಿಪ್ರಾಯಪಡುತ್ತಾರೆ.

ಬಿಜಾಪುರವನ್ನು 2014 ರಲ್ಲಿ ವಿಜಯಪುರ ಎಂದು ಮರುನಾಮಕರಣ ಮಾಡಲಾಗಿದೆ. ಈಗ ಮತ್ತೆ ಹೆಸರು ಬದಲಾವಣೆ ಮಾಡುವುದರಿಂದ ರಾಷ್ಟ್ರಮಟ್ಟದಲ್ಲಿ ಮತ್ತು ಬೇರೆ ಬೇರೆ ಸಂದರ್ಭದಲ್ಲಿ ಜಿಲ್ಲೆ ಹೆಸರು ಗೊಂದಲಕ್ಕೆ ಕಾರಣವಾಗುತ್ತದೆ. ಈಗಾಗಲೇ ಹಲವು ವೆಬ್‌ಸೈಟ್‌ಗಳಲ್ಲಿ ವಿಜಯಪುರ ಜಿಲ್ಲೆಯ ಹೆಸರು ಕೊನೆಯ ಸಾಲಿನಲ್ಲಿ ಕಾಣಿಸಿಕೊಳ್ಳುತ್ತಿದೆ’ ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.‌

‘ಜಿಲ್ಲೆಯ ಬದಲಿಗೆ ರಾಜ್ಯಕ್ಕೆ ಬಸವನಾಡು ಸೂಕ್ತ’
‘ಜಾಗತಿಕ ಮಟ್ಟದಲ್ಲಿ ಅಲ್ಲದೇ ವ್ಯವಹಾರಿಕ ದೃಷ್ಟಿಯಿಂದಲೂ ವಿಜಯಪುರ ಈಗಾಗಲೇ ಪ್ರಸಿದ್ಧಿ ಗಳಿಸಿದೆ. ಬಸವೇಶ್ವರರ ಬಗ್ಗೆ ನಮಗೆಲ್ಲರಿಗೂ ಗೌರವ ಇದೆ. ಅಂತಹ ಮಹಾನ್ ಮಾನವತಾವಾದಿ ಜಿಲ್ಲೆಯಲ್ಲಿ ಜನ್ಮ ತಾಳಿದ್ದು ಹೆಮ್ಮೆಯ ಸಂಗತಿ. ಆದರೆ ಜಿಲ್ಲೆಗೆ ಬಸವೇಶ್ವರರ ಹೆಸರು ಇಡುವುದು ಅಷ್ಟು ಸೂಕ್ತವಲ್ಲ’ ಎಂದು ಇತಿಹಾಸ ತಜ್ಞ ಕೃಷ್ಣಕೊಲ್ಹಾರ ಕುಲಕರ್ಣಿ ಹೇಳಿದರು. ‘ಬಸವಣ್ಣನ ಹೆಸರು ಚಿರಸ್ಥಾಯಿಯಾಗಿಸಲು ಹಲವು ವಿಧಾನ ಮಾರ್ಗಗಳಿವೆ. ರಾಜಕೀಯ ಪ್ರೇರಿತವಾಗಿ ಜಿಲ್ಲೆಗೆ ಬಸವೇಶ್ವರರ ಹೆಸರಿಡುವ ಬದಲು ಕರ್ನಾಟಕ ರಾಜ್ಯದ ಹೆಸರನ್ನೇ ಬಸವನಾಡು ಎಂದು ಬದಲಿಸುವುದು ಸೂಕ್ತ. ಬಸವನ ಬಾಗೇವಾಡಿಯ ಸರ್ವತೋಮುಖ ಅಭಿವೃದ್ಧಿಗೆ ಮತ್ತು ಪ್ರವಾಸೋದ್ಯಮದ ಅಭಿವೃದ್ಧಿಗೆ ಆದ್ಯತೆ ನೀಡಲಿ. ಇದರಿಂದ ಬಸವ ಜನ್ಮಭೂಮಿ ವಿಶ್ವ ಪ್ರಸಿದ್ದ ಮಾಡಲಿ’ ಎಂದರು.

‘ಮುಖ್ಯಮಂತ್ರಿ ಜೊತೆ ಚರ್ಚಿಸಿ ತೀರ್ಮಾನ’
‘ವಿಜಯಪುರ ಹೆಸರು ಬದಲಾವಣೆ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು. ಈಗಾಗಲೇ ಬಿಜಾಪುರವನ್ನು ವಿಜಯಪುರ ಎಂದು ಬದಲಾಯಿಸಲಾಗಿದೆ. ಮತ್ತೆ ಜಿಲ್ಲೆಯ ಹೆಸರು ಬದಲಾವಣೆ ಆಡಳಿತಾತ್ಮಕವಾಗಿ ಸೂಕ್ತವೇ ಎಂಬುದು ನೋಡಬೇಕಿದೆ’ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ ತಿಳಿಸಿದ್ದಾರೆ. ‘ಬಸವೇಶ್ವರ ಹೆಸರು ಇಡಲು ಯಾರ ವಿರೋಧವೂ ಇಲ್ಲ. ಆದರೆ ಜಿಲ್ಲೆಗೆ ಹೆಸರಿಡುವ ಬದಲು ವಿಜಯಪುರ ವಿಮಾನ ನಿಲ್ದಾಣ ವಿಜಯಪುರ ರೈಲು ನಿಲ್ದಾಣ ಮತ್ತು ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ ಬಸವೇಶ್ವರರ ಹೆಸರು ಇಡಲು ಪ್ರಸ್ತಾವ ಸಲ್ಲಿಸಲಾಗುವುದು. ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ. ಜನರು ಜನಪ್ರತಿನಿಧಿಗಳ ಅಭಿಪ್ರಾಯ ಏನಿದೆ ನೋಡೋಣ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ